“ನಾನು, ಶಾಸಕರು, ಸಂಸದರು ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲಾ ಉನ್ನತ ನಾಯಕರು ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇವೆ. ನಮ್ಮನ್ನೂ ಬಂಧಿಸಿ, ಜೈಲಿಗೆ ಕಳುಹಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ.
ಕೇಜ್ರಿವಾಲ್ ಮನೆಯಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಕೇಜ್ರಿವಾಲ್, ಪ್ರಧಾನಿ ಮೋದಿಯವರಿಗೆ ಈ ಸವಾಲು ಹಾಕಿದ್ದಾರೆ.
Modi को केजरीवाल की चुनौती 🔥
मैं प्रधानमंत्री से कहना चाहता हूं – आप 'जेल का खेल' खेल रहे हैं।
कल मैं अपने सभी शीर्ष नेताओं, विधायकों, सांसदों के साथ दोपहर 12 बजे BJP मुख्यालय आ रहा हूं।
आप जिसे चाहें जेल में डाल सकते हैं।
-CM @ArvindKejriwal pic.twitter.com/iMUQR6fTkK
— AAP (@AamAadmiParty) May 18, 2024
ಸಾರ್ವಜನಿಕರನ್ನು ಉದ್ದೇಶಿಸಿ ಬಿಡುಗಡೆ ಮಾಡಿರುವ ತಮ್ಮ ಹೇಳಿಕೆಯಲ್ಲಿ ಕೇಜ್ರಿವಾಲ್ ಅವರು “ನೀವು ಎಲ್ಲ ಬೆಳವಣಿಗೆಗಳನ್ನು ನೋಡ್ತುತ್ತಿದ್ದೀರಿ ಎಂಬುದು ನನಗೆ ಗೊತ್ತು. ಬೆನ್ನುಬಿಡದ ಬೇತಾಳನಂತೆ ಬಿಜೆಪಿಯವರು ಆಮ್ ಆದ್ಮಿ ಪಕ್ಷ ಬೆನ್ನ ಹಿಂದೆ ಬಿದ್ದಿದ್ದಾರೆ. ಒಬ್ಬರ ಹಿಂದೆ ಒಬ್ಬರನ್ನು ಬಂಧಿಸುತ್ತಿದ್ದಾರೆ. ನನ್ನನ್ನೂ ಸೇರಿದಂತೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಅವರನ್ನು ಜೈಲಿಗೆ ಕಳುಹಿಸಲಾಯಿತು. ಈಗ ನನ್ನ ಆಪ್ತ ಸಹಾಯನನ್ನು ಬಿಭವ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ರಾಘವ್ ಚಡ್ಡಾ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸುತ್ತಿದ್ದಾರೆ. ಪ್ರಧಾನಿ ಮೋದಿ ಜೈಲಿನ ಆಟ ಆಡುತ್ತಿದ್ದಾರೆ. ನಾನು, ಶಾಸಕರು, ಸಂಸದರು ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲ ಉನ್ನತ ನಾಯಕರೊಂದಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇನೆ. ನೀವು ನಮ್ಮೆಲ್ಲರನ್ನೂ ಒಟ್ಟಿಗೆ ಬೇಕಾದರೆ ಜೈಲಿಗೆ ಹಾಕಿ” ಎಂದು ತಿಳಿಸಿದ್ದಾರೆ.
“ಆಮ್ ಆದ್ಮಿ ಪಕ್ಷದ ಮುಖಂಡರನ್ನು ಜೈಲಿಗೆ ಕಳುಹಿಸಿ, ಪಕ್ಷವನ್ನು ತುಳಿಯಬಹುದೆಂದು ನೀವು ಆಲೋಚಿಸುತ್ತಿದ್ದಾರಾ?” ಎಂದು ಕೇಳಿರುವ ಕೇಜ್ರಿವಾಲ್, “ಬೇಕಾದರೆ ಎಲ್ಲರನ್ನು ಜೈಲಿಗೆ ಕಳುಹಿಸಿದ ನಂತರ ಎಎಪಿಯನ್ನು ಹತ್ತಿಕ್ಕಲು ಸಾಧ್ಯವೇ ಎಂಬುದನ್ನು ಒಮ್ಮೆ ಪ್ರಯತ್ನಿಸಿ ನೋಡಿ. ಎಎಪಿ ಎಂಬುವುದು ಒಂದು ಆದರ್ಶ ಕಲ್ಪನೆ. ಆದ್ದರಿಂದ ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ


