Homeಮುಖಪುಟಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೊನೆಗೊಳಿಸಲಿದೆ: ಅರವಿಂದ್ ಕೇಜ್ರಿವಾಲ್

ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೊನೆಗೊಳಿಸಲಿದೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೊನೆಗೊಳಿಸಲಿದೆ, ಸಂವಿಧಾನವನ್ನು ಬದಲಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಮತ್ತು ಅಖಿಲೇಶ್ ಯಾದವ್ ಬಿಜೆಪಿಯನ್ನು 3ನೇ ಬಾರಿಗೆ ಏಕೆ ಆಯ್ಕೆ ಮಾಡಬಾರದು ಎಂದು ಜಂಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿಯ “400 ಪಾರ್” ಘೋಷಣೆಯನ್ನು ಟೀಕಿಸಿದ್ದು, ಕೇಸರಿ ಪಕ್ಷದ ನಿಜವಾದ ಗುರಿ 400 ಸ್ಥಾನಗಳಲ್ಲ, 143 ಸ್ಥಾನಗಳು, ಯುಪಿ, ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬೀಳಲಿದೆ. ನಾವು ರೊಟ್ಟಿ, ಕಪಾಡಾ, ಮಕಾನ್‌ಗಾಗಿ ಹೋರಾಡಬೇಕಾಗಿದೆ, ಆದರೆ ನಮಗೆ ದೊಡ್ಡ ಹೋರಾಟವೆಂದರೆ ಸಂವಿಧಾನವನ್ನು ಉಳಿಸುವುದಾಗಿದೆ. ಎಎಪಿ ಮತ್ತು ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲಿದೆ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾತನಾಡುತ್ತಾ, ಬಿಜೆಪಿ 220ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ. ಹರಿಯಾಣ, ದೆಹಲಿ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಯುಪಿ, ಬಿಹಾರ, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳಲ್ಲಿ ಕಡಿತವಾಗಲಿದೆ. ಈ ಬಾರಿ ಬಿಜೆಪಿ ಸರಕಾರ ರಚಿಸಲು ಸಾಧ್ಯವಿಲ್ಲ, ಇಂಡಿಯಾ ಮೈತ್ರಿಕೂಟ ಸರಕಾರವನ್ನು ರಚಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಅಧಿಕಾರಕ್ಕೆ ಬಂದರೆ, ಅವರು ಸಂವಿಧಾನವನ್ನು ಬದಲಾಯಿಸುತ್ತಾರೆ ಮತ್ತು ಮೀಸಲಾತಿಯನ್ನು ಕೊನೆಗೊಳಿಸುತ್ತಾರೆ. ಬಿಜೆಪಿಗರು ಯಾವಾಗಲೂ ಮೀಸಲಾತಿಗೆ ವಿರುದ್ಧವಾಗಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನದಿಂದ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಪಿಎಂ ಮೋದಿಯವರ ನಿವೃತ್ತಿಯ ಕುರಿತು ಪ್ರತಿಕ್ರಿಯಿಸಿದ ಕೇಜ್ರಿವಾಲ್, ಪಿಎಂ ಮೋದಿ ಅವರು ಸೆಪ್ಟೆಂಬರ್ 17, 2025ರಂದು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅವರು ಅಮಿತ್ ಶಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡಲು ನಿರ್ಧರಿಸಿದ್ದಾರೆ. ಅವರು 75 ವರ್ಷಗಳ ನಂತರ ನಿವೃತ್ತರಾಗುವುದಿಲ್ಲ ಎಂದು  ಪ್ರಧಾನಿ ಮೋದಿ ಈವರೆಗೆ ಹೇಳಿಲ್ಲ, ಅವರು ಈ ನಿಯಮವನ್ನು ಮಾಡಿದ್ದಾರೆ ಮತ್ತು ಅವರು ಈ ನಿಯಮವನ್ನು ಅನುಸರಿಸುತ್ತಾರೆ ಎಂದು ನನಗೆ ಸಂಪೂರ್ಣ ಭರವಸೆ ಇದೆ ಎಂದು ಹೇಳಿದ್ದಾರೆ.

ಅಮಿತ್‌ ಶಾಗೆ ಅಡ್ಡಿಯಾಗಬಹುದಾದ ನಾಯಕರನ್ನು ಬದಿಗೆ ಸರಿಸಲಾಗಿದೆ. ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೇ, ರಮಣ್‌ ಸಿಂಗ್‌, ದೇವೇಂದ್ರ ಫಡ್ನವೀಸ್‌ ಮತ್ತು ಮನೋಹರ್‌ ಲಾಲ್‌ ಖಟ್ಟರ್‌ ಅವರನ್ನು ಬದಿಗೆ ಸರಿಸಲಾಗಿದೆ. ಅಮಿತ್‌ ಶಾ ಹಾದಿಗೆ ಮುಳ್ಳಾಗಬಹುದೆಂದು ಹೇಳಲಾದ ವ್ಯಕ್ತಿ ಆದಿತ್ಯನಾಥ್.‌ ಬಿಜೆಪಿ ಸರ್ಕಾರ ರಚನೆಯಾದರೆ ಎರಡು ತಿಂಗಳಲ್ಲಿ ಆದಿತ್ಯನಾಥ್‌ ಅವರನ್ನು ಕೆಳಗಿಳಿಸಲು ನಿರ್ಧರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನು ಓದಿ: ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ  ಘರ್ಷಣೆ: ಓರ್ವ ಮೃತ್ಯು, ಹಲವರಿಗೆ ಗಾಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...