Homeಮುಖಪುಟ'ಕೊನೆ ಉಸಿರಿನವರೆಗೂ ಹೋರಾಡುತ್ತೇನೆ': ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ಜೆಎನ್‌ಯು ವಿದ್ಯಾರ್ಥಿಯಾಗಿದ್ದ ನಜೀಬ್ ನಾಪತ್ತೆಯಾಗಿ 9 ವರ್ಷ ಕಳೆದರೂ ಸುಳಿವು ಸಿಕ್ಕಿಲ್ಲ. ಪ್ರಕರಣ ಮುಚ್ಚಲು ಸಿಬಿಐಗೆ ಕೋರ್ಟ್ ಅನುಮತಿ ನೀಡಿದೆ.

- Advertisement -
- Advertisement -

“ನನ್ನ ಮಗನನ್ನು ಹುಡುಕಲು ಕೊನೆ ಉಸಿರಿನವರೆಗೆ ಹೋರಾಡುತ್ತೇನೆ. ಇದಕ್ಕಾಗಿ ದೇಶದ ಯಾವುದೇ ನ್ಯಾಯಾಲದ ಮೆಟ್ಟಿಲೇರಲು ನಾನು ಸಿದ್ದ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ” ಎಂದು 9 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್ ಮಂಗಳವಾರ (ಜುಲೈ 1, 2025) ಹೇಳಿದ್ದಾರೆ.

ಅಕ್ಟೋಬರ್ 15,2016ರಂದು ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಪ್ರಕರಣದ ಮುಕ್ತಾಯ ವರದಿಯನ್ನು 2018ರಲ್ಲಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್ 30,2025) ಸ್ವೀಕರಿಸಿದೆ.

“ಇಲ್ಲಿಯವರೆಗೆ, ದೆಹಲಿ ಪೊಲೀಸರು ಅಥವಾ ಸಿಬಿಐಗೆ ನನ್ನ ಮಗನನ್ನು ಥಳಿಸಿ ನಂತರ ಅವನು ಕಣ್ಮರೆಯಾಗುವಂತೆ ಮಾಡಿದ ಎಬಿವಿಪಿ ಗೂಂಡಾಗಳನ್ನು ಬಂಧಿಸಲು ಅಥವಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ” ಎಂದು ಫಾತಿಮಾ ಬೇಸರ ವ್ಯಕ್ತಪಡಿಸಿದ್ದಾರೆ.

“ವರ್ಷಗಳಿಂದ ನನ್ನ ಮಗನ ಬಗ್ಗೆ ವದಂತಿಗಳು ಮತ್ತು ಸುಳ್ಳುಗಳನ್ನು ಹರಡಲಾಗುತ್ತಿತ್ತು. ದೆಹಲಿ ಹೈಕೋರ್ಟ್ ಆದೇಶದ ನಂತರ ಅವುಗಳನ್ನು ಎಲ್ಲಾ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಲಾಯಿತು. ಆದರೆ, ಸತ್ಯವೆಂದರೆ ಇಷ್ಟು ದೊಡ್ಡ ತನಿಖಾ ಸಂಸ್ಥೆಗಳು ಮತ್ತು ಇಡೀ ನ್ಯಾಯಾಂಗ ವ್ಯವಸ್ಥೆಗೆ ಇಲ್ಲಿಯವರೆಗೆ ನನ್ನ ನಜೀಬ್ ಎಲ್ಲಿದ್ದಾನೆಂದು ಹೇಳಲು ಸಾಧ್ಯವಾಗಿಲ್ಲ,” ಎಂದು ಫಾತಿಮಾ ನೋವು ಹೊರಹಾಕಿದ್ದಾರೆ.

2018 ರಲ್ಲಿ, ನಜೀಬ್ ಇಸ್ಲಾಮಿಕ್ ಸ್ಟೇಟ್ ಸೇರಲು ತೆರಳಿದ್ದಾರೆ ಎಂಬ ಆಧಾರರಹಿತ ಸುದ್ದಿಗಳನ್ನು ತಮ್ಮ ವೆಬ್‌ಸೈಟ್‌ಗಳಿಂದ ತೆಗೆದುಹಾಕುವಂತೆ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ಗಳಿಗೆ ಹೈಕೋರ್ಟ್ ಆದೇಶಿಸಿತ್ತು.

ಕಳೆದ 9 ವರ್ಷಗಳ ಕಾಲ ನಾನು ನಜೀಬ್‌ಗಾಗಿ ಹೋರಾಡುವಾಗ ಈ ವ್ಯವಸ್ಥೆ ನನ್ನನ್ನು ಮೌನವಾಗಿಸಲು ಪ್ರಯತ್ನಿಸಿತು. ಆದರೆ, ಜೆಎನ್‌ಯು, ಎಎಂಯು, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮುಂತಾದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿಗಳು ನನಗೆ ಬೆಂಬಲ ನೀಡಿದರು. ಈ ಕಾರಣಕ್ಕೆ ಆ ಮಕ್ಕಳು ಬೀದಿಗಳಲ್ಲಿ ಲಾಠಿ ಏಟು ತಿನ್ನಬೇಕಾಯಿತು. ವಿದ್ಯಾರ್ಥಿಗಳ ಬೆಂಬಲ ಮತ್ತು ಹೋರಾಟ ನನಗೆ ಧೈರ್ಯ ನೀಡಿತು” ಎಂದು ಫಾತಿಮಾ ಹೇಳಿಕೊಂಡಿದ್ದಾರೆ.

2017ರಲ್ಲಿ ಕನಿಷ್ಠ ಎರಡು ಸಂದರ್ಭಗಳಲ್ಲಿ, ಜೆಎನ್‌ಯುನ ಮಹಿ ಮಾಂಡವಿ ಹಾಸ್ಟೆಲ್ ನಿವಾಸಿ ಮತ್ತು ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿಯಾಗಿದ್ದ ನಜೀಬ್ ಕಣ್ಮರೆಯಾದದ್ದನ್ನು ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದರು.

ನಜೀಬ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಬಿವಿಪಿ ಸದಸ್ಯರಿಗೆ ಹಾಸ್ಟೆಲ್ ವರ್ಗಾವಣೆಯ ಶಿಕ್ಷೆ ವಿಧಿಸಿದ ಜೆಎನ್‌ಯು ಮಾಜಿ ಉಪಕುಲಪತಿ ಎಂ. ಜಗದೀಶ್ ಕುಮಾರ್ ಅವರನ್ನು ವಿದ್ಯಾರ್ಥಿಗಳು ಆರು ದಿನಗಳ ಕಾಲ ಘೇರಾವ್ ಮಾಡಿದ್ದರು. ನಂತರ ಅವರು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರಾದರು.

“ನಾನು ನನ್ನ ಭರವಸೆಯನ್ನು ಹೇಗೆ ಬಿಟ್ಟುಕೊಡಲಿ? ಧೈರ್ಯವನ್ನು ಹೇಗೆ ಕಳೆದುಕೊಳ್ಳಲಿ ಎಂದು ಹಲವು ಬಾರಿ ಅನಿಸಿದೆ. ಏಕೆಂದರೆ, ನಜೀಬ್ ನನ್ನ ಮಗ. ನನಗೆ ನನ್ನ ಮಗ ಬೇಕು. ಇದಕ್ಕಾಗಿ ನಾನು ದೇಶದ ಯಾವುದೇ ನ್ಯಾಯಾಲಕ್ಕೆ ಹೋಗಲು ಸಿದ್ದ. ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ” ಎಂದು ಫಾತಿಮಾ ಮನದಾಳ ಹಂಚಿಕೊಂಡಿದ್ದಾರೆ.

“ಮುಂಬರುವ ದಿನಗಳಲ್ಲಿ ಹೆಚ್ಚಿನ ಜನರು ನನ್ನೊಂದಿಗೆ ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೋರಾಟ ನನ್ನ ಮಗನಿಗಾಗಿ ಮಾತ್ರವಲ್ಲ, ತನ್ನ ಮಗುವಿಗೆ ನ್ಯಾಯ ಬಯಸುವ ಪ್ರತಿಯೊಬ್ಬ ತಾಯಿಗಾಗಿ. ನಾನು ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದರೆ, ಅಲ್ಲಿಗೂ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಪ್ರಕರಣ ಮುಚ್ಚುವ ಕೆಳ ನ್ಯಾಯಾಲಯದ ಆದೇಶವನ್ನು ‘ನ್ಯಾಯ ನಿರಾಕರಣೆ’ ಎಂದು ಕರೆದಿರುವ ಜೆಎನ್‌ಯು ವಿದ್ಯಾರ್ಥಿ ಸಂಘ, ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ದೆಹಲಿ ಪೊಲೀಸರ ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದೆ.

“ಸಿಬಿಐ ಸಲ್ಲಿಸಿರುವ ಪ್ರಕರಣ ಮುಕ್ತಾಯದ ವರದಿಯನ್ನು ಹೊಣೆಗಾರಿಕೆಯಿಲ್ಲದೆ ಒಪ್ಪಿಕೊಂಡಿರುವ ದೆಹಲಿ ನ್ಯಾಯಾಲಯದ ಬಗ್ಗೆ ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಎಬಿವಿಪಿ ಸಂಬಂಧಿತ ವಿದ್ಯಾರ್ಥಿಗಳ ವ್ಯವಸ್ಥಿತ ರಕ್ಷಣೆಯನ್ನು ನಾವು ಖಂಡಿಸುತ್ತೇವೆ. ಆಡಳಿತಾತ್ಮಕ ಅಥವಾ ರಾಜಕೀಯ ಹಸ್ತಕ್ಷೇಪವಿಲ್ಲದೆ ಪೂರ್ಣ ಪಾರದರ್ಶಕತೆಯೊಂದಿಗೆ ಪ್ರಕರಣದ ಮರುತನಿಖೆ ಮಾಡಬೇಕು ಎಂಬ ನಮ್ಮ ಬೇಡಿಕೆಯನ್ನು ಪುನರುಚ್ಚರಿಸುತ್ತೇವೆ” ಎಂದು ಒಕ್ಕೂಟವು ಹೇಳಿಕೆಯಲ್ಲಿ ತಿಳಿಸಿದೆ.

ನಜೀಬ್ ನಿಗೂಢ ನಾಪತ್ತೆ ಪ್ರಕರಣದ ಮುಕ್ತಾಯ ವರದಿಯನ್ನು ಸಿಬಿಐ 2018ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಫಾತಿಮಾ ನಫೀಸ್ ಪ್ರತಿಭಟನಾ ಅರ್ಜಿಯೊಂದಿಗೆ ಸಿಬಿಐ ವರದಿಯನ್ನು ಪ್ರಶ್ನಿಸಿದ್ದರು. ಫಾತಿಮಾ ವಾದಗಳನ್ನು ತಿರಸ್ಕರಿಸಿರುವ ನ್ಯಾಯಾಲಯ ಪ್ರಕರಣ ಮುಕ್ತಾಯಗೊಳಿಸು ಸಿಬಿಐಗೆ ಸಮ್ಮತಿ ನೀಡಿದೆ.

ಆದರೆ, ಈ ವಿಷಯವನ್ನು ವಿಲೇವಾರಿ ಮಾಡುವಾಗ ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ಸೂಚಿಸಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...