Homeಮುಖಪುಟ'ಎಲ್ಲಾ ಐದೂ ರಾಜ್ಯಗಳಲ್ಲಿ ಸರ್ಕಾರ ರಚಿಸುತ್ತೇವೆ': ಮಲ್ಲಿಕಾರ್ಜುನ್ ಖರ್ಗೆ

‘ಎಲ್ಲಾ ಐದೂ ರಾಜ್ಯಗಳಲ್ಲಿ ಸರ್ಕಾರ ರಚಿಸುತ್ತೇವೆ’: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ದೇಶದಲ್ಲಿ ಮುಂದಿನ ತಿಂಗಳು ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆ ಎಲ್ಲಾ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಎಎನ್‌ಐ ಜೊತೆ ಮಾತನಾಡಿದ ಖರ್ಗೆ, ” ಬಿಜೆಪಿಯ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿವೆ ಮತ್ತು ಅಲ್ಲಿನ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ” ಎಂದು ಹೇಳಿದರು.

”ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್‌ನ ಸಿದ್ಧತೆಗಳು ಉತ್ತಮವಾಗಿ ನಡೆಯುತ್ತಿವೆ. ನಾವು ಎಲ್ಲಾ ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮುಖ್ಯವಾಗಿ ಹಣದುಬ್ಬರ ಮತ್ತು ನಿರುದ್ಯೋಗದಿಂದಾಗಿ ಬಿಜೆಪಿಗೆ ಆಡಳಿತ ವಿರೋಧಿಯಾಗಿದೆ” ಎಂದು ಖರ್ಗೆ ANIಗೆ ತಿಳಿಸಿದರು.

”ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ತಿರುಗಿ ಬೀಳುತ್ತಿದ್ದಾರೆ” ಎಂದು ಹೇಳಿದರು.

”ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ. ಯಾವುದೇ ಭರವಸೆ ನೀಡಿದರೂ ಬಿಜೆಪಿ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ, ಅದು ನಿರುದ್ಯೋಗವಾಗಲಿ, ರೈತರ ಆದಾಯ ದ್ವಿಗುಣವಾಗಲಿ, ಹೂಡಿಕೆಯಾಗಲಿ,” ಎಂದು ಆರೋಪಿಸಿದರು.

”ಕೇಂದ್ರ ಸರ್ಕಾರ ಕರ್ನಾಟಕವನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರದ ಯಾವುದೇ ಯೋಜನೆಗಳನ್ನು (ಕರ್ನಾಟಕಕ್ಕೆ) ನೀಡುತ್ತಿಲ್ಲ” ಎಂದು ಅವರು ಆರೋಪಿಸಿದರು.

ನವೆಂಬರ್‌ನಲ್ಲಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಒಂದು ಅಥವಾ ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ನವೆಂಬರ್ 7ರಂದು ಮಿಜೋರಾಂ, ನವೆಂಬರ್ 7 ಮತ್ತು ನವೆಂಬರ್ 17 ರಂದು ಛತ್ತೀಸ್‌ಗಢ, ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 25 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಎಲ್ಲಾ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಕೇಂದ್ರದಲ್ಲಿ ಹೊಸ ‘ಸಮ್ಮಿಶ್ರ ಸರ್ಕಾರ’ ಬೇಕು, ಸಂಪೂರ್ಣ ಬಹುಮತದ ಸರ್ಕಾರವಲ್ಲ: ಉದ್ಧವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...