Homeಮುಖಪುಟಎಲೆಕ್ಟ್ರಿಕ್ ವಾಹನಗಳ ಹಬ್ ಆಗಲಿದೆಯೇ ಭಾರತ?

ಎಲೆಕ್ಟ್ರಿಕ್ ವಾಹನಗಳ ಹಬ್ ಆಗಲಿದೆಯೇ ಭಾರತ?

- Advertisement -
- Advertisement -

ಭಾರತ ವಿಶ್ವದ 4ನೇ ಅತಿದೊಡ್ಡ ವಾಹನದ ಮಾರುಕಟ್ಟೆ. ಆಟೋಮೊಬೈಲ್ ಕ್ಷೇತ್ರ ಭಾರತದ ರಸ್ತೆಗಳಿಗೆ ಪ್ರತಿವರ್ಷ ಹೊಸಹೊಸ ವಾಹನಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಪರಿಣಾಮ ಭಾರತದ ಪ್ರತಿದಿನದ ಅಂದಾಜು ಇಂಧನದ ಬಳಕೆ ಕನಿಷ್ಠ 5,154 ಬ್ಯಾರೆಲ್ ಎನ್ನುತ್ತಿವೆ ಅಂಕಿಅಂಶಗಳು. ಭಾರತದಲ್ಲಿ ಪ್ರತಿ ವರ್ಷ ಲಕ್ಷಾಂತರ ಲೀಟರ್ ಪಳೆಯುಳಿಕೆ ಇಂಧನ (ಪೆಟ್ರೋಲ್-ಡೀಸೆಲ್) ದಹನವಾಗುತ್ತಲೇ ಇದೆ. ವಾಯುಮಾಲಿನ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಎಚ್ಚರಿಕೆಯ ಘಂಟೆ ಬಾರಿಸುತ್ತಲೇ ಇದೆ.

ಆದರೆ, ಕೊರೊನೋತ್ತರ ಕಾಲದಲ್ಲಿ ಜಗತ್ತಿನ ಹಲವು ರಾಷ್ಟ್ರಗಳು ನಿಜಕ್ಕೂ ವಾಯುಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿವೆ ಎಂದೇ ಹೇಳಬೇಕು. ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆಗೆ ಅನೇಕ ಹೆಚ್ಚೆಚ್ಚು ಒತ್ತುನೀಡುತ್ತಿವೆ. ಜಾಗತಿಕ ತಾಪಮಾನ ಹೆಚ್ಚಿ ಹವಾಮಾನ ಬದಲಾವಣೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿಯೂ ’ಕ್ಲೀನ್ ಎನರ್ಜಿ’ ಎಂದು ಕರೆಯಲಾಗುವ ಇಂಧನಗಳಿಂದ ಚಾಲನೆಯಾಗುವ ವಾಹನಗಳ ಅಭಿವೃದ್ಧಿ ಮತ್ತು ಉತ್ಪಾದನೆಗೆ ಒತ್ತುನೀಡಲಾಗುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಹೀಗಾಗಿ ಭಾರತವೂ ಎಲೆಕ್ಟ್ರಿಕ್ ವಾಹನಗಳ ಕ್ರಾಂತಿಗೆ ಅಣಿಯಾಗುತ್ತಿದೆ ಎಂದರೆ ತಪ್ಪಾಗಲಾರದು.

ಎಕ್ಟ್ರಿಕ್ ವಾಹನಗಳ ಹಬ್ ಆಗುತ್ತಿದೆಯೇ ಭಾರತ?

ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದೇಶದ ಇಪ್ಪತ್ತೊಂದಕ್ಕೂ ಹೆಚ್ಚು ರಾಜ್ಯಗಳು ಎಲೆಕ್ಟ್ರಿಕ್ ವಾಹನ ನೀತಿ ರೂಪಿಸಿದ್ದು, ಹೊಗೆ ಉಗುಳುವ ದ್ವಿಚಕ್ರ, ತ್ರಿಚಕ್ರ ವಾಹನಗಳನ್ನು ರಸ್ತೆಯಿಂದ ಹೊರಹಾಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿವೆ. ಗ್ಲಾಸ್ಗೊ ಒಪ್ಪಂದಕ್ಕೆ ಸಹಿ ಹಾಕಿರುವ ಭಾರತ ಸರ್ಕಾರ, 2030ರ ವೇಳೆಗೆ ನೂರು ಕೋಟಿ ಟನ್ ಇಂಗಾಲದ ಹೊಮ್ಮುವಿಕೆಯನ್ನು ಕಡಿಮೆ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ದೇಶದ ಪ್ರತೀ ನಗರಕ್ಕೂ ತನ್ನದೇ ಆದ ಶುದ್ಧ ಗಾಳಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಆ ದಿಸೆಯಲ್ಲಿ 132 ನಗರಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ.

ಭಾರತದ ಪಾಲಿಗೆ ದೊಡ್ಡ ಪ್ರಮಾಣದಲ್ಲಿ ಇಂಗಾಲವನ್ನು ಉಗುಳುತ್ತಿರುವುದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯೇ. ಹೀಗಾಗಿ ಆಂಧ್ರಪ್ರದೇಶ, ಕೇರಳ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ದಶಕದ ಕೊನೆಯ ವೇಳೆಗೆ ತಲಾ ಹತ್ತು ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಯೋಜನೆ ತಯಾರಿಸಿವೆ. ಮೇಘಾಲಯ, ಗೋವಾ, ಹರಿಯಾಣ, ದೆಹಲಿ, ಒಡಿಶಾ, ಅಸ್ಸಾಂ, ಪಂಜಾಬ್ ಮತ್ತು ಮಹಾರಾಷ್ಟ್ರ ರಾಜ್ಯಗಳು ಇನ್ನೈದು ವರ್ಷಗಳಲ್ಲಿ ತಮ್ಮ ರಾಜ್ಯದ ರಸ್ತೆಗಳ ಮೇಲೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳು ಸಂಚರಿಸಲಿವೆ ಎಂದಿವೆ.

ಕೇಂದ್ರ ಸರ್ಕಾರ ಇದಕ್ಕಾಗಿ -10 ಸಾವಿರ ಕೋಟಿ ಬಂಡವಾಳ ಮೀಸಲಿಟ್ಟಿದೆ. ಇದರಿಂದ 10 ಲಕ್ಷ ದ್ವಿಚಕ್ರ, 5 ಲಕ್ಷ ತ್ರಿಚಕ್ರ ವಾಹನಗಳು, 55 ಸಾವಿರ ಕಾರು ಹಾಗೂ 70,000 ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗೆ ಇಳಿಯಲಿವೆ. ಸತತ ವಾಯುಮಾಲಿನ್ಯದಿಂದ ಕಂಗಾಲಾಗಿರುವ ದೆಹಲಿ ಸರ್ಕಾರ ಮುಂದಿನ ವರ್ಷದ ಕೊನೆಯ ವೇಳೆಗೆ 5 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಗುರಿ ಇಟ್ಟುಕೊಂಡಿದ್ದು, ಈ ವರ್ಷಾಂತ್ಯಕ್ಕೆ, ಡೀಸೆಲ್‌ನಿಂದ ಓಡುವ ಎಲ್ಲ ತ್ರಿಚಕ್ರ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸುವ ತೀರ್ಮಾನ ಮಾಡಿದೆ.

ಒಡಿಶಾ ತನ್ನ ರಾಜ್ಯದ ಪೆಟ್ರೋಲ್, ಡೀಸೆಲ್, ಗ್ಯಾಸ್‌ನಿಂದ ಓಡುವ ಆಟೊರಿಕ್ಷಾಗಳನ್ನು ಎಲೆಕ್ಟ್ರಿಕ್‌ಗೆ ಬದಲಾಯಿಸುವ ಕೆಲಸಕ್ಕೆ ಕೈ ಹಾಕಿದೆ. ಕೊಚ್ಚಿನ್ ನಗರದಲ್ಲಿ ಚಾಲಕರು ಕೈನೆಟಿಕ್ ಗ್ರೀನ್ ಕಂಪನಿಯಿಂದ ಇ-ಆಟೊ ರಿಕ್ಷಾಗಳನ್ನು ಬಾಡಿಗೆಗೆ ಪಡೆದು ಓಡಿಸುತ್ತಿದ್ದಾರೆ.

ನಮ್ಮ ರಾಜ್ಯದಲ್ಲಿ ಒಂದೂವರೆ ಲಕ್ಷ ಇ-ವಾಹನಗಳಿವೆ. ಇವುಗಳಿಗಾಗಿ 2016ರಲ್ಲೇ ನೀತಿ ರೂಪಿಸಿದ್ದ ದೇಶದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸರ್ಕಾರ ಅಂದಿನಿಂದಲೇ ಇ-ವಾಹನಗಳ ರಸ್ತೆ ತೆರಿಗೆಯನ್ನು ಸಂಪೂರ್ಣ ತೆಗೆದುಹಾಕಿತ್ತು. ಇತರ ರಾಜ್ಯಗಳು ಶೂನ್ಯ ರಸ್ತೆ ತೆರಿಗೆಯ ಜೊತೆ ಹಲವು ರಿಯಾಯಿತಿಗಳನ್ನೂ ನೀಡುತ್ತಿವೆ. ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯವು 2021ರ ಆಗಸ್ಟ್‌ನಲ್ಲಿ ಇ-ವಾಹನಗಳ ನೋಂದಣಿ ಹಾಗೂ ನವೀಕರಣ ಶುಲ್ಕ ಎರಡನ್ನೂ ತೆಗೆದುಹಾಕಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸರ್ಕಾರಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿವೆ.

ಭಾರತ ಮಾರುಕಟ್ಟೆಗೆ ಪೈಪೋಟಿ

ಎಲೆಕ್ಟ್ರಿಕ್ ವಾಹನಗಳು ಅಭಿವೃದ್ಧಿಯಾಗುತ್ತಿದ್ದಂತೆ ವಿಶ್ವದ ಅನೇಕ ವಾಹನ ಕಂಪನಿಗಳು ಡೀಸೆಲ್ ಎಂಜಿನ್ ಅಭಿವೃದ್ಧಿಯನ್ನು ನಿಲ್ಲಿಸಿ ಅಥವಾ ಕಡಿತಗೊಳಿಸಿ ಇ ಮತ್ತು ಹೈಬ್ರಿಡ್ ಕಾರುಗಳ ತಯಾರಿಕೆಗೆ ಮುಂದಾಗಿವೆ. ಪರಿಣಾಮ ಭಾರತ ಇದೀಗ ಅಂತಹ ವಾಹನಗಳ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿ ಬದಲಾಗುತ್ತಿದೆ.

ಬೆಂಗಳೂರಿನ ನವೋದ್ಯಮ ಏಥರ್ ಎನರ್ಜಿ ಕಳೆದ ನಾಲ್ಕೈದು ವರ್ಷಗಳಿಂದ ದೇಶದ ಆಯ್ದ ನಗರಗಳಲ್ಲಿ ಇ-ಸ್ಕೂಟರ್ ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ರಾವಿನ್, ಮಹೀಂದ್ರ, ಟಾಟಾ ಕಾರು ಕಂಪನಿಗಳು ಇ-ಕಾರುಗಳನ್ನು ಪರಿಚಯಿಸಿ ಈಗಾಗಲೇ ದಶಕಗಳೇ ಕಳೆದಿವೆ.

ಇದಲ್ಲದೆ, ದೇಶದ ಗ್ರೀನ್ ಮೊಬಿಲಿಟಿ ವಲಯದ ಅತಿದೊಡ್ಡ ಒಪ್ಪಂದವೊಂದಕ್ಕೆ ಟಾಟಾ ಮೋಟಾರ್ಸ್ ಮತ್ತು ಉಬರ್ ಇತ್ತೀಚೆಗೆ ಸಹಿ ಹಾಕಿರುವುದು ಭಾರತದ ಆಟೋಮೊಬೈಲ್ ಕ್ಷೇತ್ರದ ಪಾಲಿಗೆ ಗಮನಾರ್ಹ ಬೆಳವಣಿಗೆ. ಈ ಒಪ್ಪಂದದ ಪ್ರಕಾರ ಉಬರ್‌ಗೆ 25,000 ಎಕ್ಸ್‌ಪ್ರೆಸ್-ಟಿ ಎಲೆಕ್ಟ್ರಿಕ್ ವಾಹನಗಳನ್ನು ಟಾಟಾ ಮೊಟಾರ್ಸ್ ಪೂರೈಸಲಿದೆ.

ಈ ಎರಡು ಕಂಪನಿಗಳ ನಡುವಿನ ಒಪ್ಪಂದದ ಪ್ರಕಾರ ಉಬರ್ ತನ್ನ ಪ್ರೀಮಿಯಂ ವರ್ಗದ ಸೇವೆಯಲ್ಲಿ ಎಲೆಕ್ಟ್ರಿಕ್ ಸೆಡಾನ್ ವಾಹನಗಳನ್ನು ಬಳಸಿಕೊಳ್ಳಲಿದೆ. ಈ ಎಲೆಕ್ಟ್ರಿಕ್ ವಾಹನಗಳು ದಿಲ್ಲಿ ಎನ್‌ಸಿಆರ್, ಮುಂಬೈ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಈ ಒಪ್ಪಂದ ಯಶಸ್ವಿಯಾದರೆ ಭಾರತದ ಆಟೋಮೊಬೈಲ್ ಕ್ಷೇತ್ರದ ಪಾಲಿಗೆ “ಗೇಮ್ ಚೇಂಜರ್” ಆಗಲಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ವಿಶ್ವದ ಪ್ರಮುಖ ಕಾರ್ ತಯಾರಿಕಾ ಕಂಪೆನಿಗಳಲ್ಲಿ ಒಂದಾದ ನಿಸ್ಸಾನ್ ಸಹ, 2026ರ ವೇಳೆಗೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಅತಿದೊಡ್ಡ ಮಾರುಕಟ್ಟೆ ಸೃಷ್ಟಿಯಾಗಲಿರುವುದನ್ನು ಊಹಿಸಿ, ಅತೀ ಶೀಘ್ರದಲ್ಲಿ ತಮ್ಮ ಕಂಪೆನಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರ್‌ಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ. ನಿಸ್ಸಾನ್ ಕಂಪೆನಿ ಈಗಾಗಲೇ ಯೂರೋಪ್ ಮತ್ತು ಜಪಾನ್ ದೇಶಗಳಲ್ಲಿ ತಮ್ಮ ಕಂಪೆನಿಯ ಎಲೆಕ್ಟ್ರಿಕ್ ಕಾರ್‌ಗಳನ್ನು ಪರಿಚಯಿಸಿ ಯಶಸ್ವಿಯಾಗಿದೆ ಎಂಬುದು ಉಲ್ಲೇಖಾರ್ಹ.

ಇನ್ನು ವಿಶ್ವದಲ್ಲೇ ಅತ್ಯಂತ ಯಶಸ್ವಿ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪೆನಿಯಾದ ಟೆಸ್ಲಾ ಸಹ ಭಾರತ ಮಾರುಕಟ್ಟೆ ಪ್ರವೇಶಿಸಿದೆ. ವರದಿಗಳ ಪ್ರಕಾರ ಕರ್ನಾಟಕ ಸರಕಾರದ ಅಧಿಕಾರಿಗಳ ಜೊತೆ ಟೆಸ್ಲಾ ಪ್ರತಿನಿಧಿಗಳ ಮೊದಲ ಸಭೆ 2021 ಸೆಪ್ಟೆಂಬರ್ 10 ರಂದೇ ನಡೆದಿತ್ತು.

ಸಭೆಗೆ ಮುನ್ನವೇ ಅಂದರೆ 2021 ಜನವರಿ 8ರಂದೇ ಟೆಸ್ಲಾ ಕಂಪೆನಿ ಬೆಂಗಳೂರಿನಲ್ಲಿ ತನ್ನ ಅಂಗಸಂಸ್ಥೆಯಾಗಿ ಟೆಸ್ಲಾ ಇಂಡಿಯಾ ಮೊಟರ್ಸ್ ಆಂಡ್ ಎನರ್ಜಿ ಪ್ರೈ. ಲಿ. ಎಂಬ ಹೆಸರಿನಲ್ಲಿ ಕಚೇರಿ ತೆರೆದಿತ್ತು. ಆದರೆ, ಮುಂದಿನ ಸಭೆ ಏನಾಯ್ತು? ಬೆಂಗಳೂರಿನಲ್ಲಿ ಟೆಸ್ಲಾ ಕಂಪೆನಿಯ ಭವಿಷ್ಯವೇನು? ಎಂಬ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಒಂದು ವೇಳೆ ಟೆಸ್ಲಾ ಭಾರತಕ್ಕೆ ಕಾಲಿಟ್ಟರೆ ಎಲೆಕ್ಟ್ರಿಕ್ ವಾಹನಗಳ ಉದ್ಯಮ ಮತ್ತೊಂದು ಮೈಲುಗಲ್ಲಿಗೆ ಏರಲಿರುವುದು ಖಚಿತ.

ಭಾರತದಲ್ಲಿ ಸದ್ಯಕ್ಕೆ ಎಷ್ಟು ಎಲೆಕ್ಟ್ರಿಕ್ ವಾಹನಗಳಿವೆ?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಅನೇಕ ರಾಜ್ಯಗಳು ನಾನಾ ನೀತಿಗಳನ್ನು ರೂಪಿಸಿವೆ. ಆದರೂ, ದೇಶದಾದ್ಯಂತ ನೋಂದಣಿಯಾಗಿರುವ ಇ-ವಾಹನಗಳ ಸಂಖ್ಯೆ ಕೇವಲ 18 ಲಕ್ಷ ಮಾತ್ರ. ಉತ್ತರಪ್ರದೇಶದಲ್ಲಿ ಅತಿ ಹೆಚ್ಚು 4.1 ಲಕ್ಷ, ದೆಹಲಿ 1.8 ಲಕ್ಷ, ಮಹಾರಾಷ್ಟ್ರ 1.7 ಲಕ್ಷ, ಕರ್ನಾಟಕ 1.5 ಲಕ್ಷ, ರಾಜಸ್ಥಾನ 1.2 ಲಕ್ಷ, ಬಿಹಾರ 1.1 ಲಕ್ಷ ಮತ್ತು ತಮಿಳುನಾಡಿನಲ್ಲಿ 1 ಲಕ್ಷ ಇ-ವಾಹನಗಳಿವೆ. ಆದರೆ, ಇಷ್ಟೇ ಪ್ರಮಾಣದ ವಾಹನಗಳ ಬಳಕೆಯಿಂದ 107 ಲಕ್ಷ ಲೀಟರ್ ಇಂಧನವನ್ನು ಉಳಿಸಲಾಗಿದೆ ಎಂಬುದು ಆಶಾದಾಯಕ ಬೆಳವಣಿಗೆ.

ಆದರೂ, ಮೇಲಿನ ಅಂಕಿಅಂಶಗನ್ನು ಗಮನಿಸಿದರೆ ಭಾರತದ ಮಟ್ಟಿಗೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಕಡೆಗೆ ನಿರೀಕ್ಷಿತ ಮಟ್ಟದಲ್ಲಿ ಆಕರ್ಷಿತರಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇದಕ್ಕೆ ಪ್ರಮುಖ ಕಾರಣ ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚಿರುವುದು ಮತ್ತು ಇ-ಚಾರ್ಜಿಂಗ್ ಘಟಕಗಳ ಕೊರತೆ. ಭಾರತದಲ್ಲಿರುವ ಒಟ್ಟಾರೆ ಇ-ಚಾಜಿಂಗ್ ಘಟಕಗಳ ಸಂಖ್ಯೆ ಕೇವಲ 6,000 ಮಾತ್ರ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಅಧಿಕವಾಗಿರಲು ಕಾರಣ ಲಿಥಿಯಂ. ಈ ಮಾದರಿ ವಾಹನಗಳ ಬ್ಯಾಟರಿಯನ್ನು ಲಿಥಿಯಂನಿಂದಲೇ ತಯಾರಿಸಲಾಗುತ್ತದೆ. ಲಿಥಿಯಂಅನ್ನು ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾ ಸೇರಿದಂತೆ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದು, ಅದು ಸಾಕಷ್ಟು ದುಬಾರಿಯಾಗಿದೆ. ಅದರ ನೇರ ಪರಿಣಾಮವನ್ನು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಹಾಗೂ ನೂತನ ಖರೀದಿದಾರರು ಎದುರಿಸಬೇಕಾಗಿದೆ.

ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಪ್ರಮಾಣದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಕಳೆದ ವಾರವಷ್ಟೇ ಮಾಹಿತಿ ನೀಡಿದೆ. ಭಾರತೀಯ ಭೂಗರ್ಭಶಾಸ್ತ್ರ ಇಲಾಖೆಯು ಇಲ್ಲಿನ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನಾ ಎಂಬಲ್ಲಿ 59 ಲಕ್ಷ ಟನ್ ಲಿಥಿಯಂ ನಿಕ್ಷೇಪವಿರುವುದನ್ನು ಶೋಧಿಸಿದೆ. ಇಲ್ಲಿಂದ ಲಿಥಿಯಂಅನ್ನು ಪಡೆಯಲು ಸಾಧ್ಯವಾದರೆ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಕಾರುಗಳ ಬೆಲೆ ಇಳಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ಇದರ ಜೊತೆಗೆ “ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಲಿಥಿಯಂ-ಐಯಾನ್ ಬ್ಯಾಟರಿ ಸೆಲ್‌ಗಳನ್ನು ತಯಾರಿಸಲು ಬೇಕಾಗಿರುವ ಕಚ್ಚಾವಸ್ತುಗಳ ಆಮದಿಗೆ ಸುಂಕ ವಿನಾಯಿತಿ ವಿಸ್ತರಿಸಲಾಗಿದೆ” ಎಂದು ಕಳೆದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಘೋಷಿಸಿದ್ದರು ಎಂಬುದು ಉಲ್ಲೇಖಾರ್ಹ.

ಈ ನಡುವೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪೆನಿಗಳು ಇ-ಚಾರ್ಜಿಂಗ್ ಘಟಕಗಳನ್ನು ಹೆಚ್ಚಿಸುವ ಕಡೆಗೆ ಗಮನ ಹರಿಸಿರುವುದು ಮತ್ತು ದ್ವಿಚಕ್ರ ವಾಹನಗಳ ಬ್ಯಾಟರಿಗಳನ್ನು ಕಡಿಮೆ ಖರ್ಚಿನಲ್ಲಿ ಮನೆಯಲ್ಲೇ ಚಾರ್ಚ್ ಮಾಡಿಕೊಳ್ಳಲು ಅನುವಾಗುವಂತೆ ಅಭಿವೃದ್ಧಿ ಪಡಿಸಿರುವುದು ಗಮನಾರ್ಹ ಬೆಳವಣಿಗೆ. ಒಟ್ಟಾರೆ ಪ್ರಸ್ತುತ ಭಾರತದ ಆಟೋಮೊಬೈಲ್ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಎಲ್ಲ ಮಹತ್ವದ ಬೆಳವಣಿಗೆಗಳ ಕಡೆಗೆ ಒಮ್ಮೆ ಕಣ್ಣಾಯಿಸಿದರೆ ಮುಂಬರುವ ದಿನಗಳಲ್ಲಿ ಭಾರತದ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಪಾರಮ್ಯ ಸಾಧಿಸುವ ಸಾಧ್ಯತೆ ದಟ್ಟವಾಗಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...