Homeಮುಖಪುಟಕೇಂದ್ರದಲ್ಲಿ ಸರ್ಕಾರ ರಚನೆಗೆ 'ಇಂಡಿಯಾ ಮೈತ್ರಿಕೂಟ'ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೇಂದ್ರದಲ್ಲಿ ಸರ್ಕಾರ ರಚಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ ಪಕ್ಷವು ಬಾಹ್ಯ ಬೆಂಬಲ ನೀಡಲಿದೆ ಪ.ಬಂಗಾಳ ಸಿಎಂ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಹೂಗ್ಲಿಯ ಚಿನ್ಸುರಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿದ ತಕ್ಷಣ ಸಿಎಎ, ಎನ್‌ಆರ್‌ಸಿ ಮತ್ತು ಯುಸಿಸಿಯನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗಳಿಸುವ ಬಿಜೆಪಿಯ ಗುರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಜನರು ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

400 ಸೀಟು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ, ಆದರೆ ಜನ ಇದು ನಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ. ಬಿಜೆಪಿ ಕಳ್ಳರಿಂದ ತುಂಬಿರುವ ಪಕ್ಷ ಎಂದು ಇಡೀ ದೇಶವೇ ಅರ್ಥ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಾವು ಹೊರಗಿನಿಂದ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ. ಆದ್ದರಿಂದ ಪಶ್ಚಿಮ ಬಂಗಾಳದಲ್ಲಿ, ನಮ್ಮ ತಾಯಂದಿರು ಮತ್ತು ಸಹೋದರಿಯರು ಎಂದಿಗೂ ಸಮಸ್ಯೆಯನ್ನು ಎದುರಿಸುವುದಿಲ್ಲ,  100 ದಿನಗಳ ಉದ್ಯೋಗ ಯೋಜನೆಯಲ್ಲಿ ಕೆಲಸ ಮಾಡುವವರು ಸಹ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ(ಎಂ)ನ್ನು ಬೆಂಬಲಿಸುವುದಿಲ್ಲ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಈ ಎರಡೂ ಪಕ್ಷಗಳು ರಾಜ್ಯದಲ್ಲಿ ಬಿಜೆಪಿಗೆ ಸಹಾಯ ಮಾಡುತ್ತಿವೆ. ಬಂಗಾಳದಲ್ಲಿ ಸಿಪಿಐ(ಎಂ) ಮತ್ತು ಕಾಂಗ್ರೆಸ್‌ನ್ನು ಲೆಕ್ಕಿಸಬೇಡಿ. ಅವರು ನಮ್ಮೊಂದಿಗಿಲ್ಲ, ಇಲ್ಲಿ ಬಿಜೆಪಿ ಜೊತೆಗಿದ್ದಾರೆ. ನಾನು ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

2004ರ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋಲನ್ನು ಸ್ಮರಿಸಿದ ಬ್ಯಾನರ್ಜಿ, ಬಿಜೆಪಿಯ ‘ಇಂಡಿಯಾ ಶೈನಿಂಗ್’ ಘೋಷಣೆಯ ಹೊರತಾಗಿಯೂ 2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಸೋಲನ್ನು ಕಂಡಿದ್ದರು.  ಈ ಸೋಲನ್ನು ಯಾರೂ ಊಹಿಸಿರಲಿಲ್ಲ. ಜನರು ಅವರಿಗೆ ಮತ ಹಾಕಿರಲಿಲ್ಲ ಎಂದು ಹೇಳಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ಏಳು ಹಂತಗಳಲ್ಲಿ ಚುನಾವಣೆಯನ್ನು ನಿಗದಿಪಡಿಸಿದ್ದಕ್ಕಾಗಿ ಚುನಾವಣಾ ಆಯೋಗವನ್ನು ಟೀಕಿಸಿದ ಮಮತಾ ಬ್ಯಾನರ್ಜಿ, ಈ ನಿರ್ಧಾರವು ಕೇಸರಿ ಪಕ್ಷಕ್ಕೆ ಅನುಕೂಲಕರವಾಗಿದೆ ಮತ್ತು ಅತಿಯಾದ ತಾಪಮಾನದಿಂದ ಸಾಮಾನ್ಯ ಜನರು ಎದುರಿಸುತ್ತಿರುವ ಕಷ್ಟಗಳನ್ನು ಕಡೆಗಣಿಸಿದ್ದಾರೆ. ಚುನಾವಣಾ ಆಯೋಗವು ಕೈಗೊಂಬೆಯಾಗಿದ್ದು, ಮೋದಿಯವರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತದೆ. ಎರಡೂವರೆ ತಿಂಗಳಿನಿಂದ ಚುನಾವಣೆ ನಡೆಯುತ್ತಿದೆ, ಚುನಾವಣಾ ಅಧಿಕಾರಿಗಳು ಎಂದಾದರೂ ಜನಸಾಮಾನ್ಯರ ಕಷ್ಟಗಳನ್ನು ಅರಿತುಕೊಂಡಿದ್ದೀರಾ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಿಸುವ ಯೋಜನೆಗಳನ್ನು ಘೋಷಿಸುವ ಮೂಲಕ ಮೋದಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ. ಚುನಾವಣೆ ನಡೆಯುತ್ತಿರುವಾಗ ಈಗ ಯಾಕೆ ಹೀಗೆ ಹೇಳುತ್ತಿದ್ದೀರಿ? ನೀವು ಇದನ್ನು ಮೊದಲೇ ಘೋಷಿಸಬೇಕಿತ್ತು, ಮೋದಿ ಅವರೇ, ನೀವು ಚುನಾವಣಾ ನೀತಿ ಸಂಹಿತೆಯ್ನು ಉಲ್ಲಂಘಿಸುತ್ತಿದ್ದೀರಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನು ಓದಿ: ಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...