HomeUncategorizedಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ, ಭಾರತಿಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, “ಪಶ್ಚಿಮ ಬಂಗಾಳದಲ್ಲಿ ಇತ್ತೀಚಿನ ದಿನಗಳಲ್ಲಿ ಏನು ನಡೆಯುತ್ತಿದೆ ಎಂದು ನೋಡಿ, ರಾಜ್ಯದಲ್ಲಿ ಪೊಲೀಸರ ಸಹಾಯವಿಲ್ಲದೇ ‘ಗೂಂಡಾ ರಾಜ್’ ಮೇಲುಗೈ ಸಾಧಿಸುತ್ತದೆಯೇ?, ಅಂತಹ ಪೊಲೀಸ್ ಸಿಬ್ಬಂದಿಯೊಂದಿಗೆ ಏನು ಮಾಡಬೇಕು..? ಎಂದು ಪ್ರಶ್ನಿಸಿದ್ದಾರೆ.

’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪೊಲೀಸರನ್ನು ಬೂಟು ನೆಕ್ಕುವಂತೆ ಮಾಡುತ್ತೇವೆ” ಎಂದು ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ರಾಜು ಬ್ಯಾನರ್ಜಿ ದುರ್ಗಾಪುರದಲ್ಲಿ ನಡೆದ ರ್‍ಯಾಲಿ ವೇಳೆ ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

2021 ರ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ, ಬಿಜೆಪಿ ರಾಜ್ಯದಲ್ಲಿ ವಿವಿಧ ರ್‍ಯಾಲಿಗಳಲ್ಲಿ ಮತ್ತು ಪಕ್ಷದ ಹೇಳಿಕೆಗಳಲ್ಲಿ ಆಡಳಿತರೂಢ ಪಕ್ಷದ ಮೇಲೆ “ಕಾನೂನು ಉಲ್ಲಂಘನೆ” ನಡೆಸಿದೆ ಎಂದು ಆರೋಪಿಸಿದೆ. ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಮಹಿಳೆಯರಿಗೆ ರಾಜ್ಯದಲ್ಲಿ ಭದ್ರತೆ ಇಲ್ಲ ಎಂದು ಹೇಳಿದ್ದಾರೆ.

“ಬಂಗಾಳದಲ್ಲಿ ಮಹಿಳಾ ಮುಖ್ಯಮಂತ್ರಿ ಇದ್ದಾರೆ. ಆದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಇತರ ರಾಜ್ಯಗಳಿಗೆ ಹೋಲಿಸಿದರೆ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಕೆಟ್ಟದಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. 2021 ರ ವಿಧಾನಸಭಾ ಚುನಾವಣೆಯ ನಂತರ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರನ್ನು ಜೈಲಿಗೆ ಕಳುಹಿಸಲಾಗುವುದು” ಎಂದು ಕೈಲಾಶ್ ವಿಜಯವರ್ಗಿಯ ಆರೋಪಿಸಿದ್ದಾರೆ.

 

ಚುನಾವಣೆ ಹಿನ್ನೆಲೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದು ಪ್ರತಿ ರ್‍ಯಾಲಿಯಲ್ಲೂ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಾವುಗಳನ್ನು ತೃಣಮೂಲ ಕಾಂಗ್ರೆಸ್ ಮಾಡಿಸಿದೆ ಎಂದು ಆರೋಪಿಸಲಾಗುತ್ತಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...