Homeಮುಖಪುಟಉದ್ಧವ್‌ ಠಾಕ್ರೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ-ಶಾಗೆ ಆಹ್ವಾನ??

ಉದ್ಧವ್‌ ಠಾಕ್ರೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ-ಶಾಗೆ ಆಹ್ವಾನ??

- Advertisement -
- Advertisement -

ಮಹಾರಾಷ್ಟ್ರದ ನಾಟಕೀಯ ಬೆಳವಣಿಗೆಗಳು ಒಂದು ಹಂತಕ್ಕೆ ಮುಗಿದಿದ್ದರೂ ಮುಂದೆ ಏನೇನಾಗಲಿದೆ ಎಂಬ ಕುತೂಹಲ ಮಾತ್ರ ಎಲ್ಲರಲ್ಲಿದೆ. ಈ ನಡುವೆ ಡಿಸೆಂಬರ್‌ 1 ರಂದು ಶಿವಸೇನೆಯ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವಿಕರಿಸಲಿದ್ದು ಕಾರ್ಯಕ್ರಮಕ್ಕೆ ಯಾರೆಲ್ಲ ಭಾಗವಹಿಸುತ್ತಾರೆ ಎಂಬುದು ನಿಗೂಢವಾಗಿದೆ.

ಮಹಾರಾಷ್ಟ್ರ ವಿಕಾಸ್ ಅಘಾಡಿಯ ಮೂವರು ಪ್ರತಿನಿಧಿಗಳು ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಇಂದು ಬೆಳಿಗ್ಗೆಯೇ ಉದ್ಧವ್‌ ಠಾಕ್ರೆಯವರು ಸಹ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಡಿಸೆಂಬರ್ 1 ರಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸುತ್ತೀರಾ? ಎಂದು ಶಿವಸೇನೆಯ ಸಂಸದ ಸಂಜಯ್‌ ರಾವತ್‌ರವರನ್ನು ಮಾಧ್ಯಮದವರು ಪ್ರಶ್ನಿಸಿದ್ದಾರೆ. ಅದಕ್ಕವರು ಹೌದು ಮೋದಿಯವರನ್ನು ಜೊತೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಆಹ್ವಾನಿಸುತ್ತೇವೆ. ನಾವು ಎಲ್ಲರನ್ನು ಕರೆಯುತ್ತೇವೆ ಎಂದು ಸಂಜಯ್‌ ರಾವತ್‌ ಉತ್ತರಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಕಾಸ್ ಅಘಾಡಿ ಅಸ್ತಿತ್ವಕ್ಕೆ: ಡಿಸೆಂಬರ್‌ 1 ರಂದು ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ..

ಇದೇ ಸಮಯದಲ್ಲಿ ಉದ್ಧವ್‌ ಠಾಕ್ರೆಯವರು “ನಾನು ಮಹಾರಾಷ್ಟ್ರವನ್ನು ಮುನ್ನೆಡೆಸುತ್ತೇನೆ ಎಂದು ಊಹಿಸಿರಲಿಲ್ಲ. ಇದಕ್ಕಾಗಿ ನಾನು ಸೋನಿಯಾ ಗಾಂಧಿ ಮತ್ತು ಇತರರಿಗೆ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಹಾಗಾದರೆ ಸೋನಿಯಾ ಗಾಂಧಿ, ಶರದ್‌ ಪವಾರ್‌ ಸೇರಿದಂತೆ ಹಲವು ಜನ ಭಾಗವಹಿಸುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ-ಶಾ ಬರಲಿದ್ದಾರೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಇನ್ನೊಂದೆಡೆ ಬಿಜೆಪಿ ಜೊತೆ ಸೇರಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನಂತರ ರಾಜಿನಾಮೆ ನೀಡಿದ ಅಜಿತ್‌ ಪವಾರ್‌ರವರು ಸಹ ಎನ್‌ಸಿಪಿ ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಶರದ್‌ ಪವಾರ್‌ ಪುತ್ರಿ ಸುಪ್ರಿಯ ಸುಳೆ ಪ್ರೀತಿಯಿಂದ ಅಪ್ಪಿಕೊಳ್ಳುವ ಮೂಲಕ ಸ್ವಾಗತಿಸಿ ಅವರ ಪಾದಕ್ಕೆರಗಿ ಆರ್ಶಿವಾದ ಕೂಡ ಪಡೆದಿದ್ದಾರೆ.

ಹಾಗಾಗಿ ಅಜಿತ್‌ ಪವಾರ್‌ ಕೂಡ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ನೀರಿಕ್ಷೆ ಇರುವುದರಿಂದ ಆಗಲೂ ಮೋದಿ-ಶಾ ಭಾಗವಹಿಸುವರೆ ಎಂಬ ಪ್ರಶ್ನೆಗಳು ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...