Homeಮುಖಪುಟಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ನಾನು ಈ ಬಾರಿಯ ಚುನಾವಣೆಯಲ್ಲಿ ವರುಣ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ವರುಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರ ಮಾತ್ರವಲ್ಲದೇ ರಾಜ್ಯದ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ, ಕೇವಲ ನನ್ನ ತಂದೆ ಪರವಾಗಿ ಪ್ರಚಾರ ಶುರು ಮಾಡುತ್ತೇನೆ. ಅವರು ಮುಖ್ಯಮಂತ್ರಿಯಾದರೆ ನನಗೆ ಸಂತೋಷ” ಎಂದಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯನವರು ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂದು ಕಾಂಗ್ರೆಸ್ ಘೋಷಿಸಿದೆ. ಹಾಗಾಗಿ ಇದುವರೆಗೂ ವರುಣದಲ್ಲಿ ಆಯ್ಕೆಯಾಗಿದ್ದ ಯತೀಂದ್ರ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬು ಮಾತುಗಳು ಕೇಳಿಬಂದಿದ್ದವು. ಅವುಗಳಿಗೆಲ್ಲ ತೆರೆ ಎಳೆದಿರುವ ಡಾ.ಯತೀಂದ್ರ ಸಿದ್ದರಾಮಯ್ಯ ತಾವು ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

“ವರುಣ ಕ್ಷೇತ್ರವು ಈ ಕ್ಷೇತ್ರದ ಮತದಾರರಿಗೆ ಸೇರಿದೆಯೇ ವಿನಃ, ಯಾವುದೇ ವ್ಯಕ್ತಿಗೆ ಸೇರಿಲ್ಲ. ನಾನು ನನ್ನ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿಲ್ಲ. ಇದು ನಮ್ಮ ತಂದೆಯ ಕೊನೆಯ ಚುನಾವಣೆ ಆಗಿರುವುದರಿಂದ ಅವರು ಇಲ್ಲಿಂದಲೇ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುವುದು ಇಲ್ಲಿನ ಜನರ ಅಭಿಪ್ರಾಯವಾಗಿದೆ” ಎಂದು ಅವರು ಹೇಳಿದ್ದಾರೆ.

ಬಿ ವೈ ವಿಜಯೇಂದ್ರ ಅವರು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಗೆ ಉತ್ತರಿಸಿದ ಅವರು “ವಿಜಯೇಂದ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ನಾವು ಎದುರಿಸಲು ಸಿದ್ಧರಾಗಿದ್ದೇವೆ. ವರುಣ ಕ್ಷೇತ್ರದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಈ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ; ಜೆಡಿಎಸ್ ತೊರೆದಿದ್ದ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...