‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. “ಈ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ. ಸುಪ್ರೀಂ ಕೋರ್ಟ್‌ನಿಂದ ನನಗೆ ನ್ಯಾಯ ಸಿಕ್ಕಿದೆ. ನಾನು ಆರಂಭದಿಂದಲೂ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದೇನೆ” ಎಂದು ಸಂತ್ರಸ್ತೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. “ನಾನು ಯಾವುದೇ ನ್ಯಾಯಾಲಯದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುವುದಿಲ್ಲ. ನನಗೆ ಎಲ್ಲಾ ನ್ಯಾಯಾಲಯಗಳ ಮೇಲೆ … Continue reading ‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ