Homeಕರ್ನಾಟಕಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡುವುದಿಲ್ಲ: ದುನಿಯಾ ವಿಜಯ್

ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡುವುದಿಲ್ಲ: ದುನಿಯಾ ವಿಜಯ್

- Advertisement -
- Advertisement -

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡುವುದಿಲ್ಲ ಎಂದು ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ” ಎಂದು ಬರೆದಿದ್ದಾರೆ.

2012ರ ಆಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಂಗಳದ ವಿದ್ಯಾರ್ಥಿನಿ ಸೌಜನ್ಯ ಎಂಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಂತ ಬರ್ಬರ ಅತ್ಯಾಚಾರವನ್ನು ನಡೆಸಿ, ಆಕೆಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಕುರಿತು 11 ವರ್ಷಗಳ ಕಾಲ ದೀರ್ಘ ತನಿಖೆ ನಡೆಸಿದ ಸಿ.ಬಿ.ಐನ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿ ಎಂದು ಗುರುತಿಸಲಾಗಿದ್ದ ಸಂತೋಷ್ ರಾವ್‌ರನ್ನು ದೋಷಮುಕ್ತಗೊಳಿಸಿ, ಈ ತನಿಖೆಯು ಲೋಪ-ದೋಷಗಳಿಂದ ಕೂಡಿದ್ದು, ಆ ಕಾರಣದಿಂದ ಈ ಪ್ರಕರಣವು ಮುಂದುವರಿದೆ ತನಿಖೆಗೆ ಅರ್ಹ ಪ್ರಕರಣವಾಗಿದೆ ಎಂದಿದೆ.

ಸಿಬಿಐ ತನಿಖೆಯ ಲೋಪಗಳನ್ನು ಪಟ್ಟಿ ಮಾಡಿರುವ ವಿಶೇಷ ನ್ಯಾಯಾಲಯವು “ಸಿಬಿಐನ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆದಿಲ್ಲ’ ಎಂದು ಬೊಟ್ಟು ಮಾಡಿದೆ, ಮತ್ತು ನಿರ್ದೋ ಸಂತೋಷ್ ರಾವ್ ಅವರಿಗೆ ಕಾನೂನು ಪರಿಹಾರ ನೀಡಬೇಕೆಂದು ಆದೇಶಿಸಿದೆ” ಎಂದು ಹೇಳಿದೆ.

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದ್ದಾರೆ.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇತ್ತೀಚೆಗೆ ಬೃಹತ್ ಪ್ರತಿಭಟನೆ ಸಹ ನಡೆದಿದೆ. ಆನಂತರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವ ಹೋರಾಟಗಾರರ ನಿಯೋಗ ಮರುತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ; ಧರ್ಮಸ್ಥಳದ ’ನಿರ್ಭಯಾ’ ಪ್ರಕರಣ: ಪರಮ ಪಾಪಿಗಳ ಪಾರು ಮಾಡಲು ಫಿಕ್ಸ್ ಮಾಡಲಾಗಿದ್ದ ಸಂತೋಷ್ ರಾವ್ ಕುಟುಂಬದ ಕಣ್ಣೀರ ಕತೆ!!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...