Homeಮುಖಪುಟ'ಅಂಬೇಡ್ಕರ್ ಪರಂಪರೆಗೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ..'; ಅಮಿತ್ ಶಾ ಹೇಳಿಕೆಗೆ ಕಮಲ್ ಹಾಸನ್ ವಿರೋಧ

‘ಅಂಬೇಡ್ಕರ್ ಪರಂಪರೆಗೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ..’; ಅಮಿತ್ ಶಾ ಹೇಳಿಕೆಗೆ ಕಮಲ್ ಹಾಸನ್ ವಿರೋಧ

- Advertisement -
- Advertisement -

“ಭಾರತದ ಸಂವಿಧಾನದ ಶಿಲ್ಪಿ ರೂಪಿಸಿದ ವಿಚಾರಗಳು ಜನರ ಭಾವನೆಗಳನ್ನು ಕೆರಳಿಸಲು ದುರುಪಯೋಗಪಡಿಸಿಕೊಳ್ಳುವ ಬದಲು ಪ್ರಗತಿಗೆ ಪ್ರೇರೇಪಿಸಬೇಕು” ಎಂದು ನಟ ಕಮಲ್ ಹಾಸನ್ ಅವರು ಹೇಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಕುರಿತು ಎದ್ದಿರುವ ವಿರೋಧದ ನಡುವೆ, ಅವರ ಈ ಪ್ರತಿಕ್ರಿಯೆ ಬಂದಿದೆ.

ಸಂವಿಧಾನವನ್ನು ಅಂಗೀಕರಿಸಿ 75 ವರ್ಷಗಳನ್ನು ಪೂರೈಸುತ್ತಿರುವ ಸ್ಮರಣಾರ್ಥವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳ ಕುರಿತು ಚರ್ಚೆ ನಡೆಸುವಂತೆ ಕಮಲ್ ಹಾಸನ್ ಸಂಸತ್ತಿನಲ್ಲಿ ಒತ್ತಾಯಿಸಿದರು.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಂಬೇಡ್ಕರ್ ಅವರ ಕೊಡುಗೆಗಳನ್ನು ಆಧುನಿಕ ಭಾರತದ ಅಡಿಪಾಯ ಎಂದು ವಿವರಿಸಿದ್ದಾರೆ. “ಗಾಂಧೀಜಿ ಭಾರತವನ್ನು ವಿದೇಶಿ ದಬ್ಬಾಳಿಕೆಯಿಂದ ಮುಕ್ತಗೊಳಿಸಿದರೆ, ಡಾ. ಅಂಬೇಡ್ಕರ್ ಭಾರತವನ್ನು ತನ್ನದೇ ಆದ ಪ್ರಾಚೀನ ಸಾಮಾಜಿಕ ಅನ್ಯಾಯದ ಸಂಕೋಲೆಯಿಂದ ಬಿಡುಗಡೆ ಮಾಡಿದರು” ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್ ಅವರ ಪರಂಪರೆಯನ್ನು ರಕ್ಷಿಸುವ ಮಹತ್ವವನ್ನು ಅವರು ಒತ್ತಿ ಹೇಳಿ, ಅದರ ದುರುಪಯೋಗದ ವಿರುದ್ಧ ಎಚ್ಚರಿಕೆ ನೀಡಿದರು. “ಎಲ್ಲರೂ ಸಮಾನವಾಗಿ ಹುಟ್ಟಿರುವ ಮುಕ್ತ ಮತ್ತು ನ್ಯಾಯಯುತ ಭಾರತಕ್ಕಾಗಿ ಬಾಬಾಸಾಹೇಬರ ದೃಷ್ಟಿಕೋನವನ್ನು ಹೆಮ್ಮೆಯಿಂದ ನಂಬುವ, ಹೋರಾಡುವ ಪ್ರತಿಯೊಬ್ಬ ಭಾರತೀಯನು ಎಂದಿಗೂ ಮಹಾನ್ ವ್ಯಕ್ತಿಯ ಪರಂಪರೆಗೆ ಕಳಂಕವಾಗುವುದನ್ನು ಸಹಿಸುವುದಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.

ಅಂಬೇಡ್ಕರ್ ಅವರ ವಿಚಾರಗಳ ಕುರಿತು ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗೆ ಕರೆ ನೀಡಿದ ಹಾಸನ್, ಇಂತಹ ಚರ್ಚೆಗಳು ಪ್ರಗತಿಗೆ ಪ್ರೇರಣೆಯಾಗಬೇಕು ಎಂದರು. “ಆಧುನಿಕ ಮತ್ತು ನೈತಿಕ ಜಾಗತಿಕ ಶಕ್ತಿಯಾಗಿ, ನಾವು ಸಂಸತ್ತಿನ ಗೌರವಾನ್ವಿತ ಸಭಾಂಗಣಗಳಲ್ಲಿ ಅಂಬೇಡ್ಕರ್ ಅವರ ವಿಚಾರಗಳ ಅರ್ಥಪೂರ್ಣ ಚರ್ಚೆಯೊಂದಿಗೆ ನಮ್ಮ ಸಂವಿಧಾನದ 75 ವರ್ಷಗಳ ಅಂಗೀಕಾರವನ್ನು ಸ್ಮರಿಸಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ; ಅಮಿತ್ ಶಾ ಹೇಳಿಕೆ ವಿರೋಧಿಸಿ ಪ್ರತಿಭಟನೆ; ಅಂಬೇಡ್ಕರ್‌ ಚಿತ್ರಗಳಿಂದ ಕಂಗೊಳಿಸಿದ ಸುವರ್ಣ ವಿಧಾನಸೌಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...