Homeಕರ್ನಾಟಕದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

- Advertisement -
- Advertisement -

ಮಹಿಳೆಯರು, ವೃದ್ಧರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ವರದಿಗಳು ಪತ್ರಿಕೆಗಳಲ್ಲಿ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದರು.

ರಾಜ್ಯದ ವಿವಿದೆಡೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಊರು ಬಿಟ್ಟು ಹೋಗುತ್ತಿರುವ ಹಿನ್ನೆಲೆ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಶನಿವಾರ (ಜ.25) ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಭೆ ನಡೆಸಿದರು.

“ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಭೆಯಯಲ್ಲಿ ಸಿಎಂ ಖಾರವಾಗಿ ಪ್ರಶ್ನಿಸಿದರು.

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಅರ್ಹತೆ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಿಎಂ ತರಾಟೆಗೆ ತೆಗೆದುಕೊಂಡರು.

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದರು.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ (ಐಡಿ ಕಾರ್ಡ್‌ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ, ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಕೇಳಿದರು.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಇದೇ ಸಂದರ್ಭದಲ್ಲಿ ಆರ್‌ಬಿಐ ಅಧಿಕಾರಿಗಳಿಗೆ ಸಿಎಂ ಪ್ರಶ್ನಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಮೈಕ್ರೋ ಫೈನಾನ್ಸ್ ಕಂಪನಿ ಮುಖ್ಯಸ್ಥರು, ಆರ್‌ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಹೇಳಿದರು.

ಇದಕ್ಕೆ ಸಚಿವರಾದ ಕೃಷ್ಣಬೈರೇಗೌಡ, ಹೆಚ್.ಕೆ ಪಾಟೀಲ್ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್‌ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿಗಳ ಎಂ.ಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಗುಡುಗಿದರು.

ಮೊದಲ ಹಂತದ ಸಭೆ ಬಳಿಕ ಬ್ಯಾಂಕಿಂಗ್, ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳನ್ನು ಸಭೆಯಿಂದ ಹೊರಗಿರಲು ಹೇಳಿದ ಸಿಎಂ, ಕಾನೂನು, ಗೃಹ ಮತ್ತು ಕಂದಾಯ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಎರಡನೇ ಹಂತದ ಸಭೆ ನಡೆಸಿದರು.

ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...