Homeಮುಖಪುಟರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ; ಮಮತಾ ಬ್ಯಾನರ್ಜಿ

ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ; ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ. ಆನಂದ ಬೋಸ್ ರಾಜೀನಾಮೆ ನೀಡಬೇಕು, ನಾನು ರಾಜಭವನಕ್ಕೆ ಹೋಗುವುದಿಲ್ಲ ಮತ್ತು ಬೋಸ್ ಅವರ ಪಕ್ಕದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಹೂಗ್ಲಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜಭವನಕ್ಕೆ ತೆರಳಿ ನಾನು ರಾಜ್ಯಪಾಲರನ್ನು ಭೇಟಿ ಮಾಡುವುದಿಲ್ಲ. ಅವರು ನನಗೆ ಕರೆ ಮಾಡಿದರೆ, ನಾನು ರಸ್ತೆಯಲ್ಲಿ ನಿಂತು ಅವರೊಂದಿಗೆ ಮಾತನಾಡುತ್ತೇನೆ, ಗೌರವಾನ್ವಿತ ರಾಜ್ಯಪಾಲರೇ, ನೀವು ರಾಜೀನಾಮೆ ನೀಡಬೇಕು, ಮಹಿಳೆಗೆ ಚಿತ್ರಹಿಂಸೆ ನೀಡಲು ನೀವು ಯಾರು? ಎಲ್ಲವೂ ಇನ್ನೂ ಹೊರಬಿದ್ದಿಲ್ಲ ನನಗೆ ಸಂಪೂರ್ಣ ವೀಡಿಯೊ ಮತ್ತು ಪೆನ್ ಡ್ರೈವ್ ಸಿಕ್ಕಿದೆ. ಇದು ಹಗರಣವಾಗಿದೆ ಎಂದು ಹೇಳಿದ್ದಾರೆ.

ಮೇ 7ರಂದು ಮೂರನೇ ಹಂತದ ಚುನಾವಣೆ ಮುಗಿದ ನಂತರ ಬಿಜೆಪಿ ಚುನಾವಣಾ ದುರಂತದ ವಾಸನೆಯನ್ನು ಗ್ರಹಿಸಿದೆ. ಮೂರನೇ ಹಂತದ ಮತದಾನದ ನಂತರ ಅವರು ಅಳುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಮಮತಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ, ಅವರು ಚುನಾವಣೆಯಿಂದ ಹೊರಗುಳಿಯದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಸಲಾಗುತ್ತಿದೆ. ನಾವು ಯಾರಿಗೂ ಹೆದರುವುದಿಲ್ಲ. ನಾವು ಖಂಡಿತವಾಗಿಯೂ ದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕುತ್ತೇವೆ ಎಂದು ಹೇಳಿದ್ದಾರೆ.

2019ರಿಂದ ರಾಜಭವನದಲ್ಲಿ ಗುತ್ತಿಗೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಏಪ್ರಿಲ್ 24 ರಂದು ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯದ ಅರೋಪ ಮಾಡಿದ್ದರು. ರಾಜ್ಯಪಾಲರನ್ನು ತನ್ನ ಬಡ್ತಿ ಕುರಿತು ಚರ್ಚಿಸಲು ಭೇಟಿಯಾದಾಗ ಅವರು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಮಹಿಳೆ ನೀಡಿದ ದೂರಿನ ಬಗ್ಗೆ ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತನಿಖಾ ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ ರಾಜ್ಯಪಾಲರು ತಮ್ಮ ವಿರುದ್ಧದ ತನಿಖೆಗೆ ಪೊಲೀಸರಿಗೆ ಯಾವುದೇ ಸಹಕಾರ ನೀಡದಂತೆ ಮತ್ತು ಯಾವುದೇ ಹೇಳಿಕೆ ನೀಡದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ್ದರು.

ರಾಜಭವನ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿತ್ತು, ಭಾರತದ ಸಂವಿಧಾನದ 361(2) ಮತ್ತು (3)ರ ಪ್ರಕಾರ, ಭಾರತದ ರಾಷ್ಟ್ರಪತಿ ಮತ್ತು ಯಾವುದೇ ರಾಜ್ಯದ ರಾಜ್ಯಪಾಲರು ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯಿಂದ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುತ್ತಾರೆ. ಆದ್ದರಿಂದ ರಾಜ್ಯ ಸರಕಾರವು ರಾಜ್ಯಪಾಲರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...