Homeಮುಖಪುಟ"ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ" : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ...

“ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ” : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಮತ್ತು ಇತರ ಮೂವರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ (ಮಾ.6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿದ್ದಾರೆ.

“ಸಂವಿಧಾನದ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದಾರೆ.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದು, “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈ ಬಾಕಿಯಿರುವುದು” ಎಂದು ಹೇಳಿದ್ದಾರೆ.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಮತ್ತು ಇನ್ನೊಬ್ಬ ವ್ಯಕ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಾದಿಸಿದ್ದಾರೆ.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದಾರೆ.

ಅರ್ಜಿದಾರರಿಗೆ ನೋಟಿಸ್ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದು, ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದಾರೆ.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದು, ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿದೆ.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿದೆ ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಕ್ರಮದ ವಿರುದ್ಧ ದೃಢ ನಿಲುವು ತೆಗೆದುಕೊಂಡಿದೆ ಮತ್ತು ಪ್ರಕರಣ ವಿಚಾರಣೆಯನ್ನು ಮಾರ್ಚ್ 21, 2025 ಕ್ಕೆ ಮುಂದೂಡಿದೆ. ಹಿರಿಯ ವಕೀಲ ಅಭಿಮನ್ಯು ಭಂಡಾರಿ ಜೊತೆಗೆ ವಕೀಲೆ ರೂಹ್-ಎ-ಹಿನಾ ದುವಾ (ಎಆರ್‌ಒ), ವಕೀಲ ಆತಿಫ್ ಸುರ್ಹವರ್ದಿ, ವಕೀಲ ಸೈಯದ್ ಮೆಹದಿ ಇಮಾಮ್ (ಎಆರ್‌ಒ) ಈ ಪ್ರಕರಣದಲ್ಲಿ ವಾದಿಸಿದ್ದಾರೆ.

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...