Homeಮುಖಪುಟಸಮಸ್ಯೆಗಳು ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ: ಸಾಕ್ಷಿ ಮಲಿಕ್

ಸಮಸ್ಯೆಗಳು ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ: ಸಾಕ್ಷಿ ಮಲಿಕ್

- Advertisement -
- Advertisement -

ನಮ್ಮ ಎಲ್ಲಾ ಸಮಸ್ಯೆಗಳು ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ. ನಾವು ಪ್ರತಿನಿತ್ಯ ಮಾನಸಿಕವಾಗಿ ಎಂತಹ ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ ಎಂಬುದನ್ನು ನಿಮಗೆ ಅರ್ಥವಾಗುವುದಿಲ್ಲ ಎಂದು ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸದ್ಯಕ್ಕೆ ಪ್ರತಿಭಟನೆ ನಿಲ್ಲಿಸಿರುವುದರಿಂದ ನೀವು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೀರಿ ಅಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಹಕ್ಕೊತ್ತಾಯಗಳು ಈಡೇರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗಹಿಸುತ್ತೇವೆ. ಇಲ್ಲವಾದರೆ ಈ ಮಾನಸಿಕ ಒತ್ತಡದಲ್ಲಿ ಕಣಕ್ಕಿಳಿಯುವುದು ಸಾಧ್ಯವಿಲ್ಲ ಎಂಬ ಅಭಿಪ್ರಾಯಪಟ್ಟಿದ್ದಾರೆ.

ಆರೋಪಿ ಬ್ರಿಜ್ ಭೂಷಣ್ ಮನಗೆ ಸಂತ್ರಸ್ತೆ ಕುಸ್ತಿಪಟುವನ್ನು ಕರೆದೊಯ್ದ ಪೊಲೀಸರು – ಟಿಎಂಸಿ ಆಕ್ರೋಶ

ಲೈಂಗಿಕ ಕಿರುಕುಳಕ್ಕೆ ಕಾರಣವಾದ ಘಟನೆಗಳ ಮರುಸೃಷ್ಟಿಸಲು ಆರೋಪಿ ನಿವಾಸಕ್ಕೆ ಕರೆದೊಯ್ದು ಕುಸ್ತಿಪಟು ಸಂಗೀತ್ ಫೋಗಟ್‌ಗೆ ದೆಹಲಿ ಪೊಲೀಸರು ಆಘಾತ ಉಂಟು ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಯ ಮನೆಗೆ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು  ಕರೆದೊಯ್ಯುವುದು ಆಘಾತಕಾರಿಯಾಗಿದೆ. ದೂರುದಾರರನ್ನು ಸ್ಪಷ್ಟವಾಗಿ ಬೆದರಿಸಲು ಮತ್ತು ಭಯದ ವಾತವಾರಣ ಸೃಷ್ಟಿಸಲು ದಹೆಲಿ ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ವಿಷಯದ ಕುರಿತು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ತಕ್ಷಣ ಗಮನ ಹರಿಸಬೇಕು ಮತ್ತು ಈ ಕೃತ್ಯದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...