Homeಕರ್ನಾಟಕಬಿಜೆಪಿ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬಿಜೆಪಿ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸಿ, ತಪ್ಪು ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಶುಕ್ರವಾರ ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಗೆದಷ್ಟು, ಲೆಕ್ಕ ಹಾಕಲು ಸಾಧ್ಯವಾಗದಷ್ಟು ಹಗರಣಗಳಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 42.16 ಕೋಟಿ ರೂಪಾಯಿ ಎಪಿಎಂಸಿ ಹಗರಣವಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಭೋವಿ ನಿಗಮದಲ್ಲಿ 87 ಕೋಟಿ ರೂ. ಹಗರಣವಾಗಿದೆ ಎಂದರು.

ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 47.10 ಕೋಟಿ ರೂ. ಹಗರಣವಾಗಿತ್ತು. ಅದಕ್ಕೆ ಅಧ್ಯಕ್ಷರಾಗಿದ್ದ ವೀರಯ್ಯ ಬಂಧನವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿ ಬೇರೆ ನಿಗಮಗಳಲ್ಲಿ 437 ಕೋಟಿ ರೂ. ಹಗರಣವಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಅವರು ಸಚಿವರಾಗಿದ್ದಾಗ ಕಿಯೋನಿಕ್ಸ್‌ನಲ್ಲಿ 500 ಕೋಟಿ ರೂ. ಹಗರಣ ನಡೆದಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಸಿಐಡಿ ತನಿಖೆಯಲ್ಲಿ ಉಲ್ಲೇಖವಾಗಿದೆ. ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣವಾಗಿದೆ ಎಂದು ಶಾಸಕ ಯತ್ನಾಳ್ ಹೇಳಿದ್ದರು. ಭದ್ರಾ ಮೇಲ್ದಂಡೆ ಯೋಜನೆ ಹಗರಣದ ಬಗ್ಗೆ ಹೆಚ್. ವಿಶ್ವನಾಥ್ ಆರೋಪಿಸಿದ್ದರು. ಬಿಟ್ ಕಾಯಿನ್ ಪ್ರಕರಣದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ. ಆಗ ಸಿಎಂ ಆಗಿದ್ದ ಬಿ.ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ, ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಗೆ ನೂರಾರು ಕೋಟಿ ರೂ. ಲಾಭವಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ತಿಳಿಸಿದರು.

ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಹಗರಣದಲ್ಲಿ ಬಡ ಜನರ ಸಾವಿರಾರು ಕೋಟಿ ರೂ. ಹಣವನ್ನು ದೋಚಿದವರನ್ನು ಇಡಿ, ಐಟಿ ಹಾಗೂ ಸಿಬಿಐ ಬಂಧಿಸುವ ಕೆಲಸ ಮಾಡಿಲ್ಲ. ಜಯನಗರ, ಬಸವನಗುಡಿಯ ಬೀದಿ ಬದಿಯ ಕೆಲ ಕಳ್ಳರು ವಿಧಾನಸೌಧ, ಸಂಸತ್‌ಗೂ ಆಯ್ಕೆಯಾಗಿ ಹೋಗಿದ್ದಾರೆ ಎಂದು ಸಿಎಂ ಹೇಳಿದರು.

ವಿಪಕ್ಷ ನಾಯಕ ಆರ್. ಅಶೋಕ್ ಮೇಲಿನ ಭೂ ಹಗರಣ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ಕೃಷಿ ಸಚಿವರಾಗಿದ್ದ ಬಿ.ಸಿ ಪಾಟೀಲ್ ಕೃಷಿ ಇಲಾಖೆ ನೌಕರರೇ ಲಂಚ ಕೇಳುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದರು ಎಂದರು.

ಬಿಜೆಪಿಯವರು ಭ್ರಷ್ಟಾಚಾರದ ಪಿತಾಮಹರಾಗಿದ್ದಾರೆ. ಅವರ ಹಗರಣಗಳು ಬಿಚ್ಚಬಾರದು ಎಂದು ಸದನದಲ್ಲಿ ಗಲಾಟೆ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲೇ ಇಷ್ಟು ಕೆಟ್ಟದಾಗಿ ಪ್ರತಿಪಕ್ಷಗಳು ನಡೆದುಕೊಂಡಿಲ್ಲ. ಕೇಂದ್ರ ಹಾಗೂ ಆರ್‌ಎಸ್‌ಎಸ್ ಸೂಚನೆಯಿಂದ ಈ ರೀತಿ ಮಾಡುತ್ತಿದ್ದಾರೆ. ಕೇವಲ ಪ್ರಚಾರಕ್ಕಾಗಿ ಈ ರೀತಿ ಗಲಾಟೆ ಮಾಡುತ್ತಿದ್ದಾರೆ. ಇವರು ಉತ್ತರ ಕೇಳಬಾರದು ಎಂಬ ದುರುದ್ದೇಶದಿಂದ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದರು.

ಇದನ್ನೂ ಓದಿ : ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...