Homeಮುಖಪುಟಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ ಹೊರತೆಗೆಯುತ್ತೇವೆ: ಬೆದರಿಕೆ ಹಾಕಿದ ಕೇಂದ್ರ ಸಚಿವ

ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ ಹೊರತೆಗೆಯುತ್ತೇವೆ: ಬೆದರಿಕೆ ಹಾಕಿದ ಕೇಂದ್ರ ಸಚಿವ

- Advertisement -
- Advertisement -

ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಹೊರತೆಗೆಯುತ್ತೇವೆ  ಮತ್ತು ಅವರ ಕಣ್ಣುಗಳನ್ನು ಕಿತ್ತುಹಾಕುತ್ತೇವೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬೆದರಿಕೆ ಹಾಕಿದ್ದಾರೆ.

ಶೇಖಾವತ್ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.  ಕಳೆದ ವಾರ ಬಿಜೆಪಿಯ ಪರಿವರ್ತನಾ ಯಾತ್ರೆಯ ವೇಳೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಅವರು ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ವೈರಲ್‌ ಆಗಿದೆ.

ಸನಾತನ ಧರ್ಮದ ವಿರುದ್ಧ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಶೇಖಾವತ್, ನಾವು ಸವಾಲನ್ನು ಎದುರಿಸಬೇಕಾಗಿದೆ. ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಹೊರತೆಗೆಯುತ್ತೇವೆ ಮತ್ತು ಅವರ ಕಣ್ಣುಗಳನ್ನು ಕಿತ್ತುಹಾಕುತ್ತೇವೆ ಎಂದು ಹೇಳಿದ್ದಾರೆ.

ಸನಾತನದ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿ ಈ ದೇಶದಲ್ಲಿ ರಾಜಕೀಯ ಸ್ಥಾನ ಮತ್ತು ಅಧಿಕಾರವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಅವರು ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಾರೆ ಎಂದು ಹೇಳಿದ್ದಾರೆ.

2,000 ವರ್ಷಗಳ ಕಾಲ ಭಾರತೀಯ ಸಂಸ್ಕೃತಿಯನ್ನು ದುರ್ಬಲಗೊಳಿಸಲು ಅನೇಕ ಆಕ್ರಮಣಕಾರರು ಪ್ರಯತ್ನಿಸಿದರು.  ಅಲಾವುದ್ದೀನ್ ಖಿಲ್ಜಿ ಮತ್ತು ಔರಂಗಜೇಬ್ ಅವರಂತಹ ಆಡಳಿತಗಾರರು ಪ್ರಯತ್ನಿಸಿದರು ಆದರೆ ನಿಮ್ಮ ಮತ್ತು ನನ್ನ ಪೂರ್ವಜರು ಸಮರ್ಥರಾಗಿದ್ದರು ಮತ್ತು ಸಂಸ್ಕೃತಿಯನ್ನು ರಕ್ಷಿಸಿದರು ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 2 ರಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಆಗ್ರಹಿಸಿದ್ದರು. ಅವರು ಸನಾತನ ಧರ್ಮವನ್ನು ಕರೋನವೈರಸ್, ಮಲೇರಿಯಾ ಮತ್ತು ಡೆಂಗ್ಯೂ ಜ್ವರಕ್ಕೆ ಹೋಲಿಸಿದ್ದು, ಅದನ್ನು ನಿರ್ಮೂಲನೆ ಮಾಡಬೇಕೆಂದು ಹೇಳಿದ್ದರು.

ಉದಯನಿಧಿ ಸ್ಟಾಲಿನ್ ಹೇಳಿಕೆ ಬಿಜೆಪಿ ಮತ್ತು ಬಲಪಂಥೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಅಯೋಧ್ಯಾ ಸ್ವಾಮೀಜಿ ಪರಮಹಂಸ ಆಚಾರ್ಯ ಉದಯನಿಧಿ ಸ್ಟಾಲಿನ್ ಅವರ ತಲೆ ಕತ್ತರಿಸಿ ನನಗೆ ತಂದುಕೊಟ್ಟರೆ 10 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದರು. ಇದಲ್ಲದೆ ಅವರ ವಿರುದ್ಧ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ದೂರು ನೀಡಲಾಗಿತ್ತು. ಎಫ್‌ಐಆರ್‌ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ ಕೂಡ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...