Homeಮುಖಪುಟಶೀಘ್ರದಲ್ಲೇ ಮತಗಳ್ಳತನ ಕುರಿತ 'ಹೈಡ್ರೋಜನ್ ಬಾಂಬ್' ಬರಲಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಬರಲಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಶೀಘ್ರದಲ್ಲೇ ಬರಲಿದೆ. ಅದು ಬಹಿರಂಗಗೊಂಡ ಬಳಿಕ ಪ್ರಧಾನಿ ಮೋದಿ ದೇಶದ ಜನರಿಗೆ ಮುಖ ತೋರಿಸಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ನಡೆದ ‘ವೋಟರ್ ಅಧಿಕಾರ್’ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು 2024 ರ ಸಂಸತ್ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತಗಳತನ ನಡೆದಿದೆ ಎಂಬ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.

“ಮತ ಕಳ್ಳತನ ಎಂದರೆ ಹಕ್ಕುಗಳ ಕಳ್ಳತನ. ಪ್ರಜಾಪ್ರಭುತ್ವದ ಕಳ್ಳತನ. ಉದ್ಯೋಗದ ಕಳ್ಳತನ. ಬಿಜೆಪಿಯವರು ನಿಮ್ಮ ಪಡಿತರ ಚೀಟಿ ಹಾಗೂ ಇತರ ಹಕ್ಕುಗಳನ್ನು ಕಸಿದುಕೊಳ್ಳಲಿದ್ದಾರೆ” ಎಂದು ರಾಹುಲ್‌ ಹೇಳಿದ್ದಾರೆ.

“ಮಹಾತ್ಮ ಗಾಂಧಿ ಅವರ ಹತ್ಯೆಯ ಹಿಂದಿದ್ದ ಶಕ್ತಿಗಳೇ ಇದೀಗ ಸಂವಿಧಾನದ ಹತ್ಯೆಗೂ ಮುಂದಾಗಿವೆ. ನಾವು ಇದಕ್ಕೆ ಅವಕಾಶ ಕೊಡಲ್ಲ. ಅದಕ್ಕಾಗಿಯೇ ಈ ಯಾತ್ರೆ ನಡೆಸಿದ್ದು, ಜನರಿಂದ ಉತ್ತಮ ಸ್ಪಂದನ ಸಿಕ್ಕಿದೆ. ಅಸಂಖ್ಯಾತ ಜನರು ಮತ ಕಳ್ಳತನದ ವಿರುದ್ಧ ತಮ್ಮ ಧ್ವನಿ ಮೊಳಗಿಸಿದ್ದಾರೆ” ಎಂದಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ‘ಮತ ಕಳ್ಳತನ’ ಹೇಗೆ ನಡೆದಿದೆ ಎಂಬುವುದನ್ನು ನಮ್ಮ ಪಕ್ಷ ತೋರಿಸಿದೆ ಎಂದಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಲೋಕಸಭೆಯ ವಿರೋಧ ಪಕ್ಷದ ನಾಯಕ ‘ಬೇಜವಾಬ್ದಾರಿ’ಯಿಂದ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಸಂಸತ್ತಿನ ಒಳಗೆ ಮತ್ತು ಹೊರಗೆ ರಾಹುಲ್ ಗಾಂಧಿಯವರ ಮಾತುಗಳನ್ನು ಕೇಳಿದಾಗಲೆಲ್ಲ ಅವರು ಏನು ಏನು ಹೇಳಲು ಪ್ರಯತ್ನಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ನನಗೆ ಸಮಯ ಹಿಡಿಯುತ್ತದೆ. ಪರಮಾಣು ಮತ್ತು ಹೈಡ್ರೋಜನ್ ಬಾಂಬ್‌ಗಳಿಗೂ ಚುನಾವಣೆಗೂ ಏನು ಸಂಬಂಧ? ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅವರನ್ನೇ ಅವರು ಏಕೆ ಅವಮಾನಿಸಿಕೊಳ್ಳುತ್ತಿದ್ದಾರೆ?” ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದೆ. ಈ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ಆಗಸ್ಟ್ 7ರಂದು ರಾಹುಲ್ ಗಾಂಧಿ ಹೇಳಿದ್ದರು.

ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಮಹದೇವಪುರದ ಅಕ್ರಮಗಳು ಸಾಕ್ಷಿಯಾಗಿದೆ ಎಂದಿದ್ದರು.

ಮತದಾರರ ಪಟ್ಟಿಯಲ್ಲಿ 11,965 ನಕಲಿ ನೋಂದಣಿಗಳು, ನಕಲಿ ಅಥವಾ ಅಮಾನ್ಯ ವಿಳಾಸಗಳನ್ನು ಹೊಂದಿರುವ 40,009 ಮತದಾರರು, ಒಂದೇ ವಿಳಾಸದಲ್ಲಿ ನೋಂದಾಯಿಸಲಾದ 10,454 ‘ಬೃಹತ್ ಮತದಾರರು’, ಅಮಾನ್ಯ ಫೋಟೋಗಳನ್ನು ಹೊಂದಿರುವ 4,132 ಮತದಾರರು ಮತ್ತು ಫಾರ್ಮ್ 6 ಅನ್ನು ದುರುಪಯೋಗಪಡಿಸಿಕೊಂಡ ಪ್ರಕರಣಗಳಲ್ಲಿ 33,692 ಮತದಾರರು ಕಂಡು ಬಂದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಚುನಾವಣಾ ಆಯೋಗದ ನಮೂನೆ 6 ಹೊಸ ಮತದಾರರನ್ನು ನೋಂದಾಯಿಸುವ ಅರ್ಜಿ ದಾಖಲೆಯಾಗಿದೆ.

ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಸಂಸ್ಥೆಗಳನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ ಒಕ್ಕೂಟವನ್ನು ಮಹಾರಾಷ್ಟರ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿತ್ತು.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಆರೋಪಗಳನ್ನು ತಿರಸ್ಕರಿಸಿದೆ. ಆಗಸ್ಟ್ 14ರಂದು, ಮಹದೇವಪುರದ ಬಗ್ಗೆ ಮಾಡಿರುವ ಆರೋಪಗಳನ್ನು ‘ಸುಳ್ಳು ಮತ್ತು ದಾರಿತಪ್ಪಿಸುವ’ ಪ್ರಯತ್ನ ಎಂದಿದೆ.

ಇದಕ್ಕೂ ಮೊದಲು ಫೆಬ್ರವರಿಯಲ್ಲಿ, ಚುನಾವಣಾ ಫಲಿತಾಂಶಗಳಿಂದ ನಿರಾಶೆಗೊಂಡ ಪಕ್ಷಗಳು ಆಯೋಗವನ್ನು ದೂಷಿಸುವ ಪ್ರಯತ್ನಗಳನ್ನು ಮಾಡುತ್ತಿರುವುದು ‘ಸಂಪೂರ್ಣ ಅಸಂಬದ್ಧ’ ಎಂದು ಚುನಾವಣಾ ಆಯೋಗ ಹೇಳಿತ್ತು.

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...