Homeಚಳವಳಿಸರ್ಕಾರದ ಸಭೆಯಲ್ಲಿ 'ಸೂಕ್ತ ಪರಿಹಾರ' ಸಿಗದಿದ್ದರೆ ದೆಹಲಿಗೆ ಪಾದಯಾತ್ರೆ ಪುನರಾರಂಭಿಸುತ್ತೇವೆ : ರೈತ ನಾಯಕ ಪಂಧೇರ್

ಸರ್ಕಾರದ ಸಭೆಯಲ್ಲಿ ‘ಸೂಕ್ತ ಪರಿಹಾರ’ ಸಿಗದಿದ್ದರೆ ದೆಹಲಿಗೆ ಪಾದಯಾತ್ರೆ ಪುನರಾರಂಭಿಸುತ್ತೇವೆ : ರೈತ ನಾಯಕ ಪಂಧೇರ್

- Advertisement -
- Advertisement -

ಫೆಬ್ರವರಿ 14ರಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳದಿದ್ದರೆ, ಫೆಬ್ರವರಿ 25ರಂದು ಶಂಭು ಗಡಿಯಿಂದ ದೆಹಲಿಗೆ ರೈತರ ಗುಂಪೊಂದು ಪಾದಯಾತ್ರೆಯನ್ನು ಪುನರಾರಂಭಿಸಲಿದೆ ಎಂದು ಪಂಜಾಬ್ ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಸೋಮವಾರ (ಫೆ.10) ಹೇಳಿದ್ದಾರೆ.

ರೈತರ ಬೇಡಿಕೆಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಫೆಬ್ರವರಿ 14ರಂದು ಚಂಡೀಗಢದಲ್ಲಿ ಸಭೆ ಕರೆದಿದೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾವನ್ನು ಮಾತುಕತೆಗೆ ಆಹ್ವಾನಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎರಡು ರೈತ ಸಂಘಟನೆಗಳ ನೇತೃತ್ವದಲ್ಲಿ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಫೆಬ್ರವರಿ 14ರಂದು ಚಂಡೀಗಢದಲ್ಲಿ ಕೇಂದ್ರ ಸಚಿವರೊಂದಿಗೆ ನಡೆಯಲಿರುವ ಸಭೆಯಲ್ಲಿ ರೈತ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪಂಧೇರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಫೆಬ್ರವರಿ 14ರಂದು ನಡೆಯಲಿರುವ ಸಭೆಯಲ್ಲಿ ಸರ್ಕಾರ ಸೂಕ್ತ ಪರಿಹಾರ ಕಂಡುಕೊಳ್ಳದಿದ್ದರೆ, ರೈತರ ಗುಂಪು ಫೆಬ್ರವರಿ 25 ರಂದು ದೆಹಲಿಗೆ ಪಾದಯಾತ್ರೆಯನ್ನು ಪುನರಾರಂಭಿಸಲಿದೆ. ರೈತರು ಮಾತುಕತೆ ನಡೆಸಲು ಎಂದಿಗೂ ಹಿಂಜರಿಯುವುದಿಲ್ಲ ಎಂದು ಪಂಧೇರ್ ಹೇಳಿದ್ದಾರೆ.

ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಿಯಾ ರಂಜನ್ ನೇತೃತ್ವದ ಕೇಂದ್ರದ ಉನ್ನತ ಮಟ್ಟದ ನಿಯೋಗವು ಜನವರಿ 18 ರಂದು ರೈತ ಸಂಘಟನೆಗಳಾದ ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ಅನ್ನು ಮಾತುಕತೆಗೆ ಆಹ್ವಾನಿಸಿತ್ತು.

ಫೆಬ್ರವರಿ 12ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆದಿರುವ ಏಕತಾ ಮಾತುಕತೆ ಸಭೆಯಲ್ಲಿ ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂನ ರೈತ ನಾಯಕರ ನಿಯೋಗ ಭಾಗವಹಿಸಲಿದೆ ಎಂದು ಪಂಧೇರ್ ತಿಳಿಸಿದ್ದಾರೆ.

ಈ ನಡುವೆ ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ಫೆಬ್ರವರಿ 11 ರಂದು ರಾಜಸ್ಥಾನದ ರತನ್‌ಪುರ, ಫೆಬ್ರವರಿ 12ರಂದು ಖಾನೌರಿ ಗಡಿ ಮತ್ತು ಫೆಬ್ರವರಿ 13ರಂದು ಶಂಭು ಗಡಿಯಲ್ಲಿ ‘ಕಿಸಾನ್ ಮಹಾಪಂಚಾಯತ್’ಗಳನ್ನು ನಡೆಸಲಿವೆ.

ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಅಡಿಯಲ್ಲಿ ರೈತರು 2024ರ ಫೆಬ್ರವರಿ 13ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದೆಹಲಿಗೆ ಮೆರವಣಿಗೆ ನಡೆಸಲು ಹಲವು ಬಾರಿ ರೈತರು ನಡೆಸಿದ ಪ್ರಯತ್ನಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ.

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...