Homeಮುಖಪುಟಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

- Advertisement -
- Advertisement -

ಬಿಜೆಪಿ ಪಕ್ಷವು ಇಡಿ ಮತ್ತು ಸಿಬಿಐಯನ್ನು ತನ್ನ ವಿಸ್ತೃತ ಇಲಾಖೆಯಾಗಿ ಪರಿವರ್ತಿಸಿ ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆಗೆ ಬಳಕೆ ಮಾಡುತ್ತಿದೆ, ನಾವು ಬಿಜೆಪಿಗೆ ನಿರ್ಗಮನ ದಾರಿಯನ್ನು ತೋರಿಸುತ್ತೇವೆ ಎಂದು ಜಾರ್ಖಾಂಡ್‌ನ ರಾಂಚಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆ ಇಂಡಿಯಾ ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಜಾರ್ಖಂಡ್‌ನ  ಪ್ರಭಾತ್ ತಾರಾ ಮೈದಾನದಲ್ಲಿ ನಡೆದ ‘ಉಲ್ಗುಲನ್ ನ್ಯಾಯ್ ರ್ಯಾಲಿ’ಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ.

ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಳಿ ಭ್ರಷ್ಟಾಚಾರವನ್ನು ತಕ್ಷಣವೇ ಸ್ವಚ್ಛಗೊಳಿಸುವ ವಾಷಿಂಗ್ ಪೌಡರ್ ಇದೆ. ಯಾವುದೇ ಭ್ರಷ್ಟರನ್ನು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಾರೆ. ಇದು ಮೋದಿಯವರ ಗ್ಯಾರಂಟಿ. ಎಲ್ಲ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರೆ ಅದು ಅವರ ಗ್ಯಾರಂಟಿ. ಇಂದು ಎಲ್ಲಾ ಭ್ರಷ್ಟ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ದೇಶವನ್ನು ನಾಶಪಡಿಸಿದ ಬಿಜೆಪಿಯನ್ನು ತೊಡೆದುಹಾಕಲು ಈ ಉಲಗುಲನ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಐಟಿ ಬಿಜೆಪಿಯ ವಿಸ್ತೃತ ಇಲಾಖೆಗಳಾಗಿದ್ದು, ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಹತ್ತಿಕ್ಕಲು ಅವುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಿವಸೇನೆಯ ನಾಯಕಿ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ದೇಶದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿ ಮತವನ್ನು ಬಳಸಬೇಕು ಎಂದು ಟಿಎಂಸಿ ನಾಯಕ ವಿವೇಕ್ ಗುಪ್ತಾ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ಜಾರ್ಖಂಡ್ ಹೆಸರನ್ನು ‘ವನಂಚಲ್’ ಎಂದು ಬದಲಾಯಿಸಲು ಬಯಸಿವೆ ಎಂದು ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಾತನಾಡಿ, ಬಿಜೆಪಿ ವಾಸ್ತವವಾಗಿ ‘ಭಾರತೀಯ ಜುಮ್ಲಾ ಪಕ್ಷ’ ಮತ್ತು ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಸರಿ ಪಕ್ಷವನ್ನು ಅಳಿಸಿಹಾಕಲು ಸಮರ್ಥ ನಾಯಕರು. ಐ.ಎನ್.ಡಿ.ಐ.ಎ. ಮೈತ್ರಿ ಕೂಟವು ಏಪ್ರಿಲ್ 19ರಂದು ಮುಕ್ತಾಯಗೊಂಡ ಮೊದಲ ಹಂತದ ಚುನಾವಣೆಯಲ್ಲಿ 80 ರಿಂದ 90 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

ಹೇಮಂತ್‌ ಸೊರೆನ್‌ ಸಂದೇಶ ಓದಿದ ಪತ್ನಿ:

ಬಿಜೆಪಿಯು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಆದರೆ ಪ್ರಜಾಪ್ರಭುತ್ವವನ್ನು ವಿಫಲಗೊಳಿಸಲು ಬಿಡಲಾಗುವುದಿಲ್ಲ ಎಂದು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲಿನಿಂದ ನೀಡಿದ ಸಂದೇಶವನ್ನು ರ್ಯಾಲಿಯಲ್ಲಿ ಅವರ ಪತ್ನಿ ಕಲ್ಪನಾ ಓದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ನನ್ನ ಪತಿ ಹೇಮಂತ್ ಸೋರೆನ್ ಅವರನ್ನು ಚುನಾವಣೆಗೆ ಕೆಲವೇ ತಿಂಗಳ ಮುನ್ನ ಬಂಧಿಸಲಾಗಿದೆ. ಇದು ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದ ಶಕ್ತಿಗಳಿಂದ ನಡೆದ ಪಿತೂರಿ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಆದರೆ ಬಿಜೆಪಿ ಮತ್ತು ಅಂತಹ ಶಕ್ತಿಗಳನ್ನು ಜಾರ್ಖಂಡ್‌ನಿಂದ ಓಡಿಸಲಾಗುವುದು ಎಂದು ಅವರು ಪತಿಯ ಸಂದೇಶವನ್ನು ಓದಿದ್ದಾರೆ. ಬಿಜೆಪಿಗೆ “ನಿರ್ಗಮನ ಬಾಗಿಲು” ತೋರಿಸಲು ಜನರನ್ನು ಒತ್ತಾಯಿಸಿದ ಕಲ್ಪನಾ, ಈ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಅದು ಆದಿವಾಸಿಗಳಿಗೆ “ದೊಡ್ಡ ಅಪಾಯ” ಎದುರಾಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...