Homeಮುಖಪುಟಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

- Advertisement -
- Advertisement -

ಬಸವರಾಜ ಬೊಮ್ಮಾಯಿಯವರನ್ನು ನಾನು ಮಾಮ ಎಂದು ಚಿಕ್ಕ ವಯಸ್ಸಿನಿಂದ ಹಾಗೆ ಕರೆದು ಅಭ್ಯಾಸ ಆಗಿದೆ. ಇದರಲ್ಲಿ ನನ್ನ ನಿಲುವು, ರಾಜಕೀಯ ಇಲ್ಲ. ಚಿತ್ರರಂಗದಲ್ಲಿ ನನ್ನ ಕಷ್ಟದ ದಿನಗಳಲ್ಲಿ ಕೆಲವೇ ಕೆಲವರು ನನ್ನ ಜೊತೆ ನಿಂತಿದ್ದರು. ಅವರಲ್ಲಿ ಮಾಮ ಬಸವರಾಜ ಬೊಮ್ಮಾಯಿಯವರು ಒಬ್ಬರು. ನಾನು ಅವರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಪತ್ರಿಕಾಗೋಷ್ಟಿಯಲ್ಲಿ ಇದ್ದೇನೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಗಾಡ್‌ಫಾದರ್ ಯಾರೂ ಇರಲಿಲ್ಲ. ಆಗ ಮಾಮ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದರು. ಅವರು ನನಗೆ ಬೆಂಬಲ ಕೊಟ್ಟಿದ್ದರು. ಈಗ ನಾನು ನನ್ನ ಬೆಂಬಲವನ್ನು ಅವರಿಗೆ ನೀಡಲು ಬಂದಿದ್ದೇನೆ. ನನ್ನ ಕೆಲವು ಸ್ನೇಹಿತರುಗಳಿದ್ದಾರೆ. ಅವರ ಪರವಾಗಿ ನಿಲ್ಲುತ್ತೇನೆ ಎಂದು ಸುದೀಪ್ ಹೇಳಿದರು.

ನನಗೆ ಪಕ್ಷ ಕರೆದಿಲ್ಲ. ಬೊಮ್ಮಾಯಿ ಸರ್ ಕರೆದಿದ್ದಾರೆ. ಅವರ ಪರವಾಗಿ ಬಂದಿದ್ದೇನೆ ಎಂದು ಸುದೀಪ್ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಮಾಧ್ಯಮಗಳು ಮಾಡಿದ್ದ ಊಹೆ ಸತ್ಯವಾಗಿದೆ. ನಿಮಗೆ ಅಭಿನಂದನೆಗಳು. ಕಿಚ್ಚ ಸುದೀಪ್ ಅವರು ಇವತ್ತು ತಮ್ಮ ವಿಚಾರ ಮತ್ತು ನಿಲುವನ್ನು ಹಂಚಿಕೊಳ್ಳುತ್ತಾರೆ ಎಂದು ಮೊದಲು ಹೇಳಿದ್ದ ಬಸವರಾಜ ಬೊಮ್ಮಾಯಿಯವರು ಆನಂತರ ಅವರು ಯಾವುದೇ ಪಕ್ಷ ಸೇರಿಲ್ಲ. ನನಗೆ ಮೊದಲಿಂದಲೂ ಅವರೊಂದಿಗೆ ಸಂಬಂಧ ಇರುವುದರಿಂದ ಅವರೊಟ್ಟಿಗೆ ಮಾತನಾಡಿ ನಮ್ಮ ಪಕ್ಷ ಸೇರದಿದ್ದರೂ ನಿಮ್ಮ ಪ್ರಚಾರ ಅಗತ್ಯವಿದೆ ಎಂದು ಮನವಿ ಮಾಡಿದ್ದೆ. ಆಗ ಸುದೀಪ್ ರವರು ನಿಮಗೆ ಪ್ರಚಾರ ಮಾಡುತ್ತೇನೆ ಎಂದಿದ್ದರು. ಅದರರ್ಥ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಲವು ಶಕ್ತಿಗಳು ಸೇರಿದರೆ ಒಳ್ಳೆಯದಾಗುತ್ತದೆ ಎಂದರೆ ಮಾಡುತ್ತೇನೆ. ಅವರು ಪಕ್ಷಕ್ಕೆ ಮಾಡಿ ಅಂದರೆ ಅದಕ್ಕೂ ಮಾಡುತ್ತೇನೆ. ಆದರೆ ಇಡೀ ರಾಜ್ಯದಲ್ಲಿ ಮಾಡಲು ಆಗುವುದಿಲ್ಲ. ಎಷ್ಟೊಂದು ಎಸ್‌ಟಿ ಕ್ಷೇತ್ರಗಳು ಇವೆ, ಅಲ್ಲೆಲ್ಲ ಹೋಗಲು ಸಾಧ್ಯವಿಲ್ಲ ಎಂದು ಸುದೀಪ್ ಹೇಳಿದರು.

ಬಸವರಾಜ ಬೊಮ್ಮಾಯಿಯವರು ಯಾವುದೇ ಪಕ್ಷದಲ್ಲಿದ್ದರೂ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು.

ಪ್ರಕಾಶ್‌ ರಾಜ್‌ರವರು ಸುದೀಪ್ ಮಾರಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂಬುದಕ್ಕೆ ಉತ್ತರಿಸಿದ ಅವರು, “ಪ್ರಕಾಶ್ ರಾಜ್‌ರವರು ಅದ್ಭುತ ಕಲಾವಿದರು. ಅವರೊಟ್ಟಿಗೆ ರನ್ನ ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮುಂದೆ ಅವರೊಟ್ಟಿಗೆ ಯಾವ ಸಿನಿಮಾದಲ್ಲಿ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದೇನೆ” ಎಂದರು.

ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅನಿವಾರ್ಯಕ್ಕೆ ಚುನಾವಣೆಗೆ ನಿಲ್ಲುವುದಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವುದಾದರೆ ಮೊದಲೇ ಘೋಷಿಸುತ್ತೇನೆ ಎಂದರು.

ಇದನ್ನೂ ಓದಿ; ಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ ಪ್ರಚಾರ ಮಾಡುತ್ತೇನೆ ಅಷ್ಟೇ: ಸುದೀಪ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...