Homeಮುಖಪುಟಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಮೆಹಬೂಬಾ ಮುಫ್ತಿ ಅವರ ಬಂಧನದ ಅವಧಿಯನ್ನು ಪದೇ ಪದೇ ವಿಸ್ತರಣೆ ಮಾಡುವುದನ್ನು ಪ್ರಶ್ನಿಸಿ ಅವರ ಮಗಳು ಇಲ್ತಿಜಾ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. 

- Advertisement -
- Advertisement -

ಕಳೆದ ಒಂದು ವರ್ಷದಿಂದ ಗೃಹ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಮಂಗಳವಾರ (ಅ.13) ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಲಾಗಿತ್ತು.

ಬಂಧನದಿಂದ ಬಿಡುಗಡೆಯಾದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ, ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರದಿಂದ ಉಂಟಾದ ಅವಮಾನವನ್ನು ಕಾಶ್ಮೀರದ ನಾಯಕರು ಮತ್ತು ಜನರು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

“ಒಂದು ವರ್ಷದ ನಂತರ ನಾನು ಇಂದು ಬಿಡುಗಡೆಯಾಗಿದ್ದೇನೆ” ಎಂದು ಮುಫ್ತಿ ಬಿಡುಗಡೆಯಾದ ನಂತರ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. “ಬಂಧನದ ಸಮಯದಲ್ಲಿ, ಆಗಸ್ಟ್ 5 ರ ’ಕಪ್ಪು ದಿನ’ ನನ್ನನ್ನು ಗಾಯಗೊಳಿಸುತ್ತಲೇ ಇತ್ತು. ಜಮ್ಮು ಮತ್ತು ಕಾಶ್ಮೀರದ ಜನರು ಸಹ ಈ ರೀತಿಯ ತೊಂದರೆ ಅನುಭವಿಸಿದ್ದಾರೆ. ಆ ದಿನದ ಅವಮಾನವನ್ನು ನಮ್ಮಲ್ಲಿ ಯಾರೂ ಮರೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

’ಕೇಂದ್ರ ಸರ್ಕಾರ ನಮ್ಮಿಂದ ಪ್ರಜಾಪ್ರಭುತ್ವ ವಿರೋಧಿ ಮತ್ತು ಕಾನೂನುಬಾಹಿರ ರೀತಿಯಲ್ಲಿ ಕಸಿದುಕೊಂಡದ್ದನ್ನು ನಾವು ಮರಳಿ ಪಡೆಯಬೇಕಾಗಿದೆ. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಮ್ಮ ಧೈರ್ಯ ಮತ್ತು ದೃಢನಿಶ್ಚಯ ನಮ್ಮನ್ನು ನಮ್ಮ ಗುರಿಯತ್ತ ಕರೆದೊಯ್ಯುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಕಳೆದ 14 ತಿಂಗಳುಗಳಿಂದ ಗೃಹ ಬಂಧನದಲ್ಲಿ ಇದ್ದ ಮುಫ್ತಿ ಅವರ ಬಂಧನದ ಅವಧಿಯನ್ನು ಪದೇ ಪದೇ ವಿಸ್ತರಣೆ ಮಾಡುವುದನ್ನು ಪ್ರಶ್ನಿಸಿ ಅವರ ಮಗಳು ಇಲ್ತಿಜಾ ಸುಪ್ರೀಂಕೋರ್ಟ್‌ನಲ್ಲಿ ಕಾಶ್ಮೀರ ಆಡಳಿತ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಸಲ್ಲಿಸಿದ್ದರು.

ಭಾರತೀಯ ಸಂವಿಧಾನದ 370 ನೇ ಪರಿಚ್ಛೇದದ ಅಡಿಯಲ್ಲಿ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂಪೂರ್ಣ ಲಾಕ್‌ಡೌನ್ ವಿಧಿಸಿತ್ತು. ಅಂದಿನಿಂದ ಮೆಹಬೂಬಾ ಮುಫ್ತಿ ಬಂಧನದಲ್ಲಿದ್ದರು.

ಹಲವು ರಾಜಕೀಯ ನಾಯಕರು ಮುಫ್ತಿಯವರ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ.

 

“ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ನಂತರ ಮೆಹಬೂಬಾ ಮುಫ್ತಿ ಸಾಹಿಬಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂಬುದನ್ನು ಕೇಳಲು ನನಗೆ ಸಂತೋಷವಾಗಿದೆ” ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

 

 

ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮುಫ್ತಿ ಬಿಡುಗಡೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದಾರೆ. “ಧನ್ಯವಾದಗಳು ದೇವರೆ.  ಕೊನೆಗೂ 15 ತಿಂಗಳಿಗಿಂತ ಹೆಚ್ಚು ಸಮಯದ ನಂತರ ಮೆಹಬೂಬಾ ಮುಫ್ತಿ ಬಿಡುಗಡೆಯಾಗಿದೆ” ಎಂದು ಅವರು ಹೇಳಿದರು. “ಫಾರೂಕ್ ಸಾಹಿಬ್ ಮತ್ತು ಉಮರ್ ಅಬ್ದುಲ್ಲಾರಂತಹ ವ್ಯಕ್ತಿಗಳ ಈ ಬಂಧನ ನಮ್ಮ ದೇಶದಲ್ಲಿ ವಿಶಿಷ್ಟವಾಗಿದೆ. ಇವರ ಬಂಧನಕ್ಕೆ ಆದೇಶಿಸಿದ ಸರ್ಕಾರಕ್ಕೂ ಈ ಮೂವರು ನಾಯಕರು ಮಾಡಿದ ಅಪರಾಧ ತಿಳಿದಿಲ್ಲ. ಜೈ ಹೋ ಪ್ರಜಾಪ್ರಭುತ್ವ” ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...