Homeಮುಖಪುಟಬಟ್ಟೆಯಿಂದ ಪ್ರಜೆಗಳನ್ನು ವಿಭಜಿಸುವವರು ಈ ಬಾಲಕನಿಂದ ಪಾಠ ಕಲಿಯುತ್ತಾರಾ?: ಮೋದಿ ವಿರುದ್ಧ ನಟ ಕಿಶೋರ್‌ ಪರೋಕ್ಷ...

ಬಟ್ಟೆಯಿಂದ ಪ್ರಜೆಗಳನ್ನು ವಿಭಜಿಸುವವರು ಈ ಬಾಲಕನಿಂದ ಪಾಠ ಕಲಿಯುತ್ತಾರಾ?: ಮೋದಿ ವಿರುದ್ಧ ನಟ ಕಿಶೋರ್‌ ಪರೋಕ್ಷ ಟೀಕೆ

- Advertisement -
- Advertisement -

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಕುರಿತು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ‘ಬಟ್ಟೆ ನೋಡಿ ಅವರನ್ನು ಗುರುತಿಸಬಹುದು’ ಎಂದು ಹೇಳಿಕೆ ನೀಡಿದ್ದರು. ಬಟ್ಟೆ ವಿಚಾರವಾಗಿಯೇ ಕಿಶೋರ್‌ ಕುಮಾರ್‌ ಅವರು ಮೋದಿಯವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಕಿಶೋರ್ ಹಂಚಿಕೊಂಡಿದ್ದು, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

ನಟ ಕಿಶೋರ್ ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ”ಭಲೇ ಬಾಲಕ, ನಮಗೆಲ್ಲ ಮಾದರಿಯಾದೆ ನೀನು..
ಒಮ್ಮೆ ಯೋಚಿಸಿ, ಇವರೇನಾದರೂ ಬಟ್ಟೆಯಿಂದ ಈ ಬಾಲಕನನ್ನು ಗುರುತಿಸಿಬಿಟ್ಟಿದ್ದರೆ? ಆ ರೈಲಿನ ಚಾಲಕ ದಿನಕ್ಕೊಂದು ವಂದೇಭಾರತ ರೈಲು ಬಿಡುವ ಪ್ರಧಾನ ಸೇವಕನಾಗಿದ್ದಿದ್ದರೆ?? ರೈಲನ್ನು ಸೀದಾ ಪಾಕಿಸ್ಥಾನಕ್ಕೇ ನುಗ್ಗಿಸಿಬಿಡುತ್ತಿದ್ದನೇನೊ??” ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದಾರೆ.

”ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಲಿ ಕಪಾಳಕ್ಕೆ ಹೊಡೆಸುವ, ಅವನ ಮನೆ ಬುಲ್ಡೊಜ್ ಮಾಡುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದ ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes it is a crime and as such we are seeing these small things but we see our history how mohammadians and britishers treated our ancestors. But we are all human beings and most of common people not bother for religion and caste and all political parties to gain or get to vote dividing people. But our country should be ruled by totally dedicated person for country sake just like military individual who dedicated their life fir Nation over and above family and ftiends

  2. Yes Mr. Kishore absolutely told you truth, we all big big peoples and politicians and celebraties want to learn from children’s highness. Sometimes The bravest childrens teach lessons for us.

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...