Homeಮುಖಪುಟನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಎಂಪಿ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಭಾನುವಾರ ”ಲೈ ಡಿಟೆಕ್ಟರ್ ನಾರ್ಕೋ” ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಹೇಳಿದ್ದಾರೆ. ಆದರೆ ಅವರು ತಮ್ಮ ಜೊತೆಗೆ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಕೂಡ ಪರೀಕ್ಷೆಗೆ ಒಳಗಾಗಬೇಕು ಎಂದು ಶರತ್ತು ಷರತ್ತು ಹಾಕಿದ್ದಾರೆ.

ಈ ಬಗ್ಗೆ ಭಾನುವಾರ ಸಿಂಗ್ ಅವರು ಫೇಸ್‌ಬುಕ್ ಪೋಸ್ಟ್ ಮಾಡಿದ್ದು, ”ನನ್ನ ನಾರ್ಕೋ ಪರೀಕ್ಷೆ, ಪಾಲಿಗ್ರಾಫಿ ಪರೀಕ್ಷೆ ಅಥವಾ ಸುಳ್ಳು ಪತ್ತೆ ಮಾಡುವ ಪರೀಕ್ಷೆಗೆ ನಾನು ಸಿದ್ಧನಿದ್ದೇನೆ ಆದರೆ ನನ್ನ ಷರತ್ತು ಏನೆಂದರೆ ನನ್ನ ಜೊತೆಗೆ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕೂಡ ಈ ಪರೀಕ್ಷೆಗಳಿಗೆ ಒಳಗಾಗಬೇಕು. ಇಬ್ಬರೂ ಕುಸ್ತಿಪಟುಗಳು ತಮ್ಮ ಪರೀಕ್ಷೆಯನ್ನು ಪೂರ್ಣಗೊಳಿಸಲು ಸಿದ್ಧರಿದ್ದರೆ, ನಂತರ ಪತ್ರಿಕಾಗೋಷ್ಠಿಯನ್ನು ಕರೆದು ಘೋಷಿಸಿ ಮತ್ತು ನಾನು ಇದಕ್ಕೆ ಸಿದ್ಧನಿದ್ದೇನೆ ಎಂದು ನಾನು ಭರವಸೆ ನೀಡುತ್ತೇನೆ… ನಾನು ಈಗಲೂ ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಮತ್ತು ದೇಶವಾಸಿಗಳಿಗೆ ಶಾಶ್ವತವಾಗಿ ದೃಢವಾಗಿರಲು ಭರವಸೆ ನೀಡುತ್ತೇನೆ.
ರಘುಕುಲ ಸಂಪ್ರದಾಯ ಮೊದಲಿನಿಂದಲೂ ಇದೆ. ಜೀವನ ಹೋಗಬಹುದು ಆದರೆ ಭರವಸೆ ಹೋಗದಿರಬಹುದು….. ಜೈ ಶ್ರೀ ರಾಮ್” ಎಂದು ಬರೆದುಕೊಂಡಿದ್ದಾರೆ.

ಏನಿದು ‘ಲೈ ಡಿಟೆಕ್ಟರ್ ನಾರ್ಕೋ ಪರೀಕ್ಷೆ’?

ಈ ಪರೀಕ್ಷೆಯಲ್ಲಿ, ತಪ್ಪೊಪ್ಪಿಗೆಯನ್ನು ಪಡೆಯುವ ಪ್ರಯತ್ನ ಮಾಡಲಾಗುತ್ತದೆ. ಶಂಕಿತರಿಗೆ ಸೋಡಿಯಂ ಪೆಂಟೋಥಾಲ್ ಎಂಬ ಔಷಧಿಯ ಇಂಜೆಕ್ಷನ್ ಚುಚ್ಚಲಾಗುತ್ತದೆ. ಔಷಧವು ಆತಂಕವನ್ನು ಕರಗಿಸುತ್ತದೆ, ಇದರಿಂದಾಗಿ ಅವರಿಗೆ ನಿರ್ಬಂಧಗಳಿಲ್ಲದೆ ಮಾತನಾಡಲು ಅವಕಾಶ ನೀಡುತ್ತದೆ.

ಏಪ್ರಿಲ್ 23ರಿಂದ ಸಿಂಗ್ ಬಂಧನಕ್ಕೆ ಒತ್ತಾಯಿಸಿ ದೇಶದ ಅಗ್ರ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದೀಗ ಸಿಂಗ್ ಅವರು, ತಮ್ಮ ಮೇಲೆ ಮಾಡಲಾಗುತ್ತಿರುವ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ಪರೀಕ್ಷೆಗೆ ಒಳಗಾಗಲು ಒಪ್ಪಿದ್ದಾರೆ.

ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಿಂದೇಟು ಹಾಕಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಸಿದ್ದರಿಂದ ಆ ನಂತರ ಅವರ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಲು ಸಿಂಗ್ ನಿರಾಕರಿಸಿದ್ದಾರೆ. ಇದು ಕಾಂಗ್ರೆಸ್ ಮತ್ತು ಕೆಲವು ಕೈಗಾರಿಕೋದ್ಯಮಿಗಳ ಪ್ರಚೋದನೆಯಿಂದ ನಡೆಯುತ್ತಿರುವ ಪ್ರತಿಭಟನೆ ಎಂದು ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಕುಸ್ತಿ ಸಂಘದ ವಿಷಯದಲ್ಲಿ ಪ್ರಧಾನಮಂತ್ರಿಗಳ ಅಸಹಾಯಕತೆಯೇನು?

ಬಿಜೆಪಿ ಸಂಸದರೂ ಆಗಿರುವ ಸಿಂಗ್, ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದ ಸಭೆಯೊಂದರಲ್ಲಿ ಎಲ್ಲಾ ಜಾತಿ ಮತ್ತು ಧರ್ಮದ ಜನರು ತಮ್ಮನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಾಲ್ಕು ತಿಂಗಳ ನಂತರವೂ ನನ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅವರ ಬಳಿ ಯಾವುದೇ ಆಡಿಯೋ, ವಿಡಿಯೋ ಅಥವಾ ಇತರ ಯಾವುದೇ ರೆಕಾರ್ಡಿಂಗ್ ಇಲ್ಲ ಎಂದು ಅವರು ಹೇಳಿದ್ದಾರೆ. ”ನನ್ನ ವಿರುದ್ಧ ಸುಳ್ಳು ಕಥೆ ಕಟ್ಟಿ ಅದನ್ನೇ ಹೇಲುತ್ತಿದ್ದಾರೆ. ಇವತ್ತು ಇಡೀ ದೇಶವೇ ಸಿಟ್ಟಿಗೆದ್ದಿದೆ ಎಂಬುದನ್ನು ಅವರು ಅರಿಯಬೇಕು” ಎಂದು ಹೇಳಿದ್ದಾರೆ.

”ಮೇ 7 ರಂದು, ಸಿಂಗ್ ತನ್ನ ವಿರುದ್ಧದ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದರು. ನಾನು ಇನ್ನೂ ನನ್ನ ಮಾತುಗಳಿಗೆ ಬದ್ಧನಾಗಿರುತ್ತೇನೆ ಮತ್ತು ಈಗಲೂ ದೇಶವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದರು.

ಹಲವಾರು ಅಥ್ಲೀಟ್‌ಗಳು ಹಾಗೂ ರೈತ ಸಂಘಟನೆಗಳು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿವೆ. ಪ್ರತಿಭಟನೆ ಪ್ರಾರಂಭವಾದ ನಂತರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಲೈಂಗಿಕ ಕಿರುಕುಳ ತಡೆ ಕಾಯಿದೆ, 2013ರ ಅಗತ್ಯತೆಗಳನ್ನು ಅನುಸರಿಸಲು ವಿಫಲವಾದ ಕಾರಣಕ್ಕಾಗಿ ರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳು ಮತ್ತು ಕೇಂದ್ರ ಕ್ರೀಡಾ ಸಚಿವಾಲಯ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ನೋಟಿಸ್‌ಗಳನ್ನು ನೀಡಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...