Homeಮುಖಪುಟಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದರೆ ಪ್ರಕರಣ ವಾಪಸ್ : ತಮಿಳುನಾಡು ಸರ್ಕಾರ

ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದರೆ ಪ್ರಕರಣ ವಾಪಸ್ : ತಮಿಳುನಾಡು ಸರ್ಕಾರ

- Advertisement -
- Advertisement -

“ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು” ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠಿಯಲ್ಲಿ ಕ್ಷಮೆಯಾಚಿಸಿದರೆ, ಅವರ ವಿರುದ್ಧದ ಪ್ರಕರಣ ಕೈಬಿಡಲಾಗುವುದು ಎಂದು ತಮಿಳುನಾಡು ಸರ್ಕಾರ ಬುಧವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

ತನ್ನ ವಿರುದ್ದದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಅಡ್ವೊಕೇಟ್ ಜನರಲ್ ಪಿ.ಎಸ್ ರಾಮನ್ ಅವರು ಮೇಲಿನಂತೆ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸರ್ಕಾರ ನಿರೀಕ್ಷಿಸುತ್ತಿರುವ ಕ್ಷಮಾಪಣೆಯ ಕರಡು ಸ್ವರೂಪವನ್ನು ಕೂಡ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಶೋಭಾ ಕರಂದ್ಲಾಜೆ ಪರ ವಕೀಲರು, “ಅವರು ಈಗಾಗಲೇ ಕ್ಷಮೆ ಕೋರಿದ್ದು, ತಮ್ಮ ಎಕ್ಸ್‌ ಸಾಮಾಜಿಕ ಖಾತೆಯಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ. ಆದರೆ, ಕ್ಷಮೆಯಾಚನೆ ಸಮರ್ಪಕವಾಗಿದೆ ಎಂದು ನ್ಯಾಯಾಲಯ ಒಪ್ಪಿಲ್ಲ ಎಂದು ತಿಳಿದು ಬಂದಿದೆ.

ಎಕ್ಸ್‌ನಲ್ಲಿ ಹೆಚ್ಚಿನ ಜನರು ಖಾತೆ ಹೊಂದಿಲ್ಲದ ಕಾರಣ, ಅವರು ಅಲ್ಲಿ ಕ್ಷಮೆಯಾಚಿಸುವುದು ಸಾಕಾಗುವುದಿಲ್ಲ.‌ ನಾನೂ ಕೂಡ ಎಕ್ಸ್‌ ಖಾತೆ ಹೊಂದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿರುವುದಾಗಿ ವರದಿಯಾಗಿದೆ.

ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠಿ ನಡೆಸಿ ಕ್ಷಮೆಯಾಚಿಸಲು ಸಿದ್ಧರಿದ್ದಾರೆಯೇ ಅಥವಾ ಇಲ್ಲವೇ? ಎಂಬುವುದರ ಕುರಿತು ಸೂಚನೆಗಳನ್ನು ಪಡೆಯಲು ಅವರ ಪರ ವಕೀಲರಿಗೆ ಹೈಕೋರ್ಟ್ ಹತ್ತು ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ : ಹೆಚ್‌.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿ : 10 ತಿಂಗಳಿನಿಂದ ಪ್ರತಿಕ್ರಿಯಿಸದ ರಾಜ್ಯಪಾಲರು; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...