Homeಮುಖಪುಟ‘ಜನರ ವಿಶ್ವಾಸವನ್ನು ಗೆಲ್ಲಿ’ - ವಿರೋಧ ಪಕ್ಷಗಳಿಗೆ ಉದ್ಧವ್ ಠಾಕ್ರೆ

‘ಜನರ ವಿಶ್ವಾಸವನ್ನು ಗೆಲ್ಲಿ’ – ವಿರೋಧ ಪಕ್ಷಗಳಿಗೆ ಉದ್ಧವ್ ಠಾಕ್ರೆ

- Advertisement -
- Advertisement -

ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಕರೆದಿದ್ದ ಆನ್‌ಲೈನ್‌‌‌ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಸಿಎಂ ಉದ್ಧವ್‌‌ ಠಾಕ್ರೆ, ಜನರ ವಿಶ್ವಾಸವನ್ನು ಗೆಲ್ಲುವಂತೆ ವಿರೋಧ ಪಕ್ಷಗಳಿಗೆ ಹೇಳಿದ್ದಾರೆ. ಜೊತೆಗೆ ವಿರೋಧ ಪಕ್ಷಗಳು ದೃಡವಾಗಿ ಮತ್ತು ಒಗ್ಗಟ್ಟಿನಿಂದ ಇರಬೇಕು ಎಂದು ಅವರು ತಿಳಿಸಿದ್ದಾರೆ.

“ಸಭೆಯಲ್ಲಿ ಉದ್ಧವ್‌ ಠಾಕ್ರೆ ಅವರು ಪಕ್ಷಗಳು ಜನರ ವಿಶ್ವಾಸವನ್ನು ಗೆಲ್ಲಬೇಕು ಎಂದು ಒತ್ತಿ ಹೇಳಿದರು. ಇಂದಿನವರೆಗೂ, ವಿರೋಧ ಪಕ್ಷಗಳಲ್ಲಿ ಅಧಿಕಾರದ ಆಸೆ ಇಲ್ಲ. ಆದರೆ ಅಧಿಕಾರದ ಕುರ್ಚಿ ಇದ್ದಾಗಲೂ ವಿರೋಧ ಪಕ್ಷಗಳು ದೃಢವಾಗಿ ಮತ್ತು ಒಗ್ಗಟ್ಟಿನಿಂದ ಇರುತ್ತವೆ ಎಂದು ಜನರು ನಂಬುವಂತಾಗಬೇಕು” ಎಂದು ಉದ್ದವ್‌ ಠಾಕ್ರೆ ಸಭೆಯಲ್ಲಿ ಹೇಳಿದ್ದಾರೆಂದು ಶಿವಸೇನೆಯ ನಾಯಕ ಸಂಜಯ್ ರಾವತ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಶಿವಸೇನೆಯ ರಾಜ್ಯಸಭಾ ಸದಸ್ಯರಾಗಿರುವ ಸಂಜಯ್‌ ರಾವತ್‌, ಸೋನಿಯಾ ಗಾಂಧಿ ವೈಯಕ್ತಿಕವಾಗಿ ಎಲ್ಲಾ ನಾಯಕರಿಗೆ ಕರೆ ಮಾಡಿ ಸಭೆಗೆ ಸೇರುವಂತೆ ವಿನಂತಿಸಿದ್ದಾರೆ ಎಂದು ಹೇಳಿದ್ದಾರೆ.

ಸಭೆಯಲ್ಲಿ 19 ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು. ಎಸ್ಪಿ ನಾಯಕ ಅಖಿಲೇಶ್ ಯಾದವ್ ಸಭೆಯಲ್ಲಿ ಭಾಗವಹಿಸದಿದ್ದರೂ, ಅವರು ತಮ್ಮ ಅನುಪಸ್ಥಿತಿಯನ್ನು ವಿವರಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದ್ದಾರೆ ಎಂದು ವರದಿಯಾಗಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡುವುದರ ಜೊತೆಗೆ, ಪೆಗಾಸಸ್ ಗೂಢಚಾರ, ರೈತರ ಸಮಸ್ಯೆಗಳು, ಬೆಲೆ ಏರಿಕೆ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಂತಹ ಹಲವಾರು ಸಮಸ್ಯೆಗಳ ಬಗ್ಗೆ ಆನ್‌ಲೈನ್‌ ಸಭೆಯಲ್ಲಿ ಚರ್ಚೆಯಾದವು ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ – ಶಿವಸೇನೆ ನಡುವೆ ವಾಕ್ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...