Homeಮುಖಪುಟಡಿ. 4ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ: ಪ್ರಲ್ಲಾದ ಜೋಶಿ

ಡಿ. 4ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ: ಪ್ರಲ್ಲಾದ ಜೋಶಿ

- Advertisement -
- Advertisement -

ಡಿಸೆಂಬರ್ 4ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿ, ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ”ಸಂಸತ್ತಿನ 2023ರ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಇರಲಿದೆ. 19 ದಿನಗಳಲ್ಲಿ 15 ಅಧಿವೇಶನಗಳು ನಡೆಯಲಿದೆ” ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದಿನ ಅಧಿವೇಶನದಲ್ಲಿ ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಇಂಡಿಯನ್ ಎವಿಡನ್ ಆಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023ಯನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಈ ಮಸೂದೆಗಳಿಗೆ ಅನುಮೋದನೆ ಪಡೆಯಲು ಅಧಿವೇಶನಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...