Homeಮುಖಪುಟನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

ನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

- Advertisement -
- Advertisement -

ಚಳಿಗಾಲದ ಅಧಿವೇಶನ ನವೆಂಬರ್ 18ರಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ನವೆಂಬರ್ 18 ರಿಂದ ಡಿಸೆಂಬರ್ 13ರವರೆಗೆ ಅಂದರೆ 25 ದಿನಗಳು ಕಲಾಪ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಸುಮಾರು 35 ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ತೀರ್ಮಾನಿಸಿದೆ. ವಿವಾದಾತ್ಮಕ ಭಾರತೀಯ ಪೌರತ್ವ ತಿದ್ದುಪಡಿ ಮಸೂದೆ, ಅಕ್ರಮ ವಲಸೆ ಮಸೂದೆ, ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಸೇರಿದಂತೆ ಹಲವು ಮಸೂದೆಗಳು ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿವೆ.

ಹಿಂದಿನ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸಲು 43 ಮಸೂದೆಗಳು ಬಾಕಿ ಇದ್ದು ಅದರಲ್ಲಿ 12 ಮಸೂದೆ ಗಳನ್ನು ಪಾಸು ಮಾಡಲು ಭಾರತ ಸರ್ಕಾರ ತೀರ್ಮಾನಿಸಿದೆ. ಜೊತೆಗೆ 7 ಮಸೂದೆಗಳನ್ನು ವಾಪಸ್ ಪಡೆಯಲಿದೆ. 27 ಮಸೂದೆಗಳನ್ನು ಮಂಡನೆ ಮಾಡಿ ಪರಿಶೀಲಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಶಿವಸೇನೆ ಎನ್.ಡಿ.ಎ. ಸರ್ಕಾರದಿಂದ ಹೊರಬಂದಿದೆ. ಇದ್ದ ಒಬ್ಬ ಸಚಿವರೂ ಕೂಡ ರಾಜಿನಾಮೆ ನೀಡಿ ಹೊರ ಬಂದಿರುವುದರಿಂದ ಸಂಸತ್‌ನಲ್ಲಿ ಶಿವಸೇನೆಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕಾಗಿದೆ.

ಶಿವಸೇನೆಯ 18 ಮಂದಿ ಲೋಕಸಭಾ ಸದಸ್ಯರು ಮತ್ತು ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ. ಅವರಿಗೆ ಉಭಯ ಸದಗಳಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ.

ಜಾರ್ಖಂಡ್ ನಲ್ಲಿ ಎಲ್.ಜೆ.ಪಿಯು ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿದ್ದು ಸ್ವತಂತ್ರವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆದಿದೆ. ಇದರ ಜೊತೆಗೆ ಶಿವಸೇನೆಯೂ ಬಿಜೆಪಿಯ ಬಹುಕಾಲದ ಮೈತ್ರಿಯಿಂದ ಹೊರಬಂದಿರುವುದು ಪ್ರತಿಪಕ್ಷಗಳಿಗೆ ಸರ್ಕಾರವನ್ನು ಹಣಿಯಲು ಸಾಕಷ್ಟು ಅಸ್ತ್ರಗಳು ದೊರೆತಂತಾಗಿದೆ.

ಪ್ರಮುಖವಾಗಿ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಸಂದರ್ಭದಲ್ಲಿ ಸುಮಾರು 19 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಬಿಟ್ಟಿರುವುದು ಚರ್ಚೆಗೆ ಬರಲಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಕದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಿರುವುದನ್ನು ಹಾಗೂ ಪೌರತ್ವಕ್ಕೆ ಅರ್ಹರಾಗಿರುವ ಮುಸ್ಲಿಮರನ್ನು ಪಟ್ಟಿಯಿಂದ ಕೈಬಿಟ್ಟಿರುವ ವಿಷಯವನ್ನು ಪ್ರತಿಪಕ್ಷಗಳು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಾತ್ಮಕವಾಗಿ 370ನೇ ವಿಧಿಯನ್ವಯ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಿರುವುದು ಮತ್ತು ಜಮ್ಮು ಕಾಶ್ಮೀರ ಮತ್ತು ಲಡಕ್ ನ್ನು ಎರಡು ಭಾಗಗಳಾಗಿ ವಿಂಗಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಹಾಗೂ ಕಣಿವೆ ರಾಜ್ಯದ ಕಾಂಗ್ರೆಸ್, ಪಿಡಿಪಿ, ನ್ಯಾಷನಲ್‌ ಕಾನ್ಸರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಜೊತೆಗೆ ವಿದ್ಯಾರ್ಥಿಗಳು, ಸಂಘ-ಸಂಸ್ಥೇಗಳ ಮುಖಂಡರು, ವಕೀಲರನ್ನು ಬಂಧನಕ್ಕೊಳಪಡಿಸಿರುವದನ್ನು ಹಾಗೂ ಎಲ್ಲಾ ರೀತಿಯ ಹಕ್ಕುಗಳನ್ನು ಮೊಟುಕುಗೊಳಿಸಿರುವುದನ್ನು ಪ್ರಸ್ತಾಪಿಸಿ ಸರ್ಕಾರವನ್ನು ಟೀಕೆಗೆ ಗುರಿಪಡಿಸಲಿವೆ.

ಕರ್ನಾಟಕದಲ್ಲಿ 17 ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಲು ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವೂ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ಆಡಿಯೋ ಕೂಡ ಸಂಸತ್ ನಲ್ಲಿ ಸದ್ದು ಮಾಡಲಿದೆ. ಪದೇ ಪದೇ ಆಪರೇಷನ್ ಕಮಲ ಮಾಡಿ ಅನೈತಿಕತೆ ಮತ್ತು ಅಸಂವಿಧಾನದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ.

ದೇಶದಲ್ಲಿ ಕಳೆದ ಆರು ತಿಂಗಳಲ್ಲಿ 90 ಲಕ್ಷ ಉದ್ಯೋಗಗಳು ನಷ್ಟವಾಗಿರುವುದು, ಉದ್ದಿಮೆಗಳು ಬಾಗಿಲು ಮುಚ್ಚಿಸಿರುವುದು, ಅದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಂಡಿರುವುದು, ಮಹಾರಾಷ್ಟ್ರ-ಪಂಜಾಬ್ ಸಹಕಾರ ಬ್ಯಾಂಕ್ ನಲ್ಲಿ ನಡೆದಿರುವ ಹಗರಣ, ಅದರಿಂದಾದ ಸಾವು ನೋವು, ಆರ್ಥಿಕ ಕುಸಿತ, ರೈತರ ಆತ್ಮಹತ್ಯೆ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮೊದಲಾದ ವಿಷಯಗಳು ಉಭಯ ಸದನಗಳಲ್ಲಿ ಚರ್ಚೆಗೆ ಗ್ರಾಸವಾಗಲಿವೆ.

ಆಟೋ ಮೊಬೈಲ್, ಜವಳಿ, ಕಟ್ಟಡ ನಿರ್ಮಾಣ, ವಾಹನ ತಯಾರಿಕೆ ಮತ್ತು ಮಾರಾಟದಲ್ಲಿ ವ್ಯಾಪಕವಾಗಿ ಕುಸಿತ ಕಂಡಿರುವುದು, ನಿರುದ್ಯೋಗ ಸಮಸ್ಯೆ ಕಳೆದ 49 ವರ್ಷಗಳಲ್ಲೇ ಅತ್ಯಧಿಕವಾಗಿ ಕಾಡುತ್ತಿರುವುದು ಹೀಗೆ ಹತ್ತು ಹಲವು ವಿಷಯಗಳನ್ನು ಕಲಾಪದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ , ಶಿವಸೇನೆ, ಎನ್.ಸಿ.ಪಿ, ಡಿಎಂಕೆ ಪಕ್ಷಗಳಿಗೆ ಅವಕಾಶವಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಡವಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಿಟ್ಟು ಪ್ರತಿಪಕ್ಷಗಳ ಮುಖಂಡರನ್ನು ಜೈಲಿಗೆ ಕಳಿಸಿರುವನ್ನು ಪ್ರಮುಖವಾಗಿ ಎತ್ತಿ ಕಲಾಪಕ್ಕೆ ಅಡ್ಡಿಸಲಿವೆ. ಪಿ.ಚಿದಂಬರಂ ಬಂಧನ ಮುಂದುವರಿಕೆ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಇಡಿ ಬಳಕೆ, ಡಿಕೆಶಿವಕುಮಾರ್ ಬಂಧನ, ಹೀಗೆ ಹಲವು ವಿಷಯಗಳು ಸರ್ಕಾರವನ್ನು ಟೀಕೆಗೊಳಪಡಿಸಲು ಅವಕಾಶವಿದೆ.

ವಿದೇಶಾಂಗ ನೀತಿ, ರಾಜತಾಂತ್ರಿಕತೆಯಲ್ಲಿ ವೈಫಲ್ಯ ಅವೈಜ್ಞಾನಿಕ ಸರಕು ಮತ್ತು ಸೇವಾ ತೆರಿಗೆ, ನೋಟು ರದ್ದುಗೊಳಿಸಿ ಮೂರು ವರ್ಷವಾಗಿದ್ದು ಅದರಿಂದಾದ ದುಷ್ಪರಿಣಾಮಗಳು,  ಸಾಲ ಮನ್ನಾ ಮಾಡದೇ ಇರುವುದು, ದೇಶದಲ್ಲಿ ಬಿಜೆಪಿ ಕೋಮು ದ್ವೇಷದ ಮೂಲಕ ಸಮಾಜವನ್ನು ವಿಭಜಿಸಿ ಸೌಹಾರ್ದತೆಯನ್ನು ಹಾಳು ಮಾಡುತ್ತಿರುವುದು ಮತ್ತು ಮುಸ್ಲೀಮರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟಿಸಲು ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...