Homeಕರ್ನಾಟಕವಿಸ್ಟ್ರಾನ್‌ ಬಿಕ್ಕಟ್ಟು: ಆಡಳಿತ ಮಂಡಳಿ, ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ ಜಗದೀಶ್‌ ಶೆಟ್ಟರ್‌

ವಿಸ್ಟ್ರಾನ್‌ ಬಿಕ್ಕಟ್ಟು: ಆಡಳಿತ ಮಂಡಳಿ, ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ ಜಗದೀಶ್‌ ಶೆಟ್ಟರ್‌

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿ. 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದರು

- Advertisement -
- Advertisement -

’ಹಿಂಸಾಚಾರದಂತಹ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುತ್ತದೆ. ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ‌ ವಿಸ್ಟ್ರಾನ್‌ ಉದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದರು.

ಈ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದ  ವಿಸ್ಟ್ರಾನ್‌ ಕಂಪನಿಗೆ ರಾಜ್ಯ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಕಾರ್ಮಿಕರ ಈಗಿನ ಸ್ಥಿತಿಗತಿಯ ಬಗ್ಗೆ ವಿಚಾರಿಸಿದರು.

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಹಿಂಸಾಚಾರದಂತಹ ಅನವಶ್ಯಕ ಘಟನೆಗಳಿಂದ ಯಾವುದೇ ಸಮಸ್ಯೆಗೂ ಪರಿಹಾರ ದೊರಕುವುದಿಲ್ಲ. ಅಂದು ನಡೆದ ಘಟನೆಯಿಂದಾಗಿ ಕಾರ್ಖಾನೆ ಮುಚ್ಚಬೇಕಾಯಿತು. ಅಲ್ಲದೆ, ಸಾವಿರಾರು ಕಾರ್ಮಿಕರು ಹಲವಾರು ಅನವಶ್ಯಕ ಗೊಂದಲಕ್ಕೀಡಾಗಬೇಕಾಯಿತು. ಆದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾದಲ್ಲಿ ನಿಮ್ಮ ಮೇಲಾಧಿಕಾರಿಗಳಿಗೆ ಮೊದಲು ತಿಳಿಸಬೇಕು. ಅಲ್ಲಿಯೂ ಪರಿಹಾರ ದೊರಕದೇ ಇದ್ದ ಸಂದರ್ಭದಲ್ಲಿ ಸರಕಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ ನೀಡಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗೌರವ್‌ ಗುಪ್ತಾ ಮಾತನಾಡಿ, ಸಮಸ್ಯೆ ಉದ್ಭವವಾಗುವ ಸಮಯದಲ್ಲಿ ಮಾತ್ರ ಅಧಿಕಾರಿಗಳು ಭೇಟಿ ನೀಡುವ ಪರಿಪಾಠವನ್ನು ಬಿಡಬೇಕು. ಆಗಾಗ್ಗೆ ಕೈಗಾರಿಕೆಗಳಿಗೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳು ಹಾಗೂ ಆಗಬೇಕಾದ ಕಾರ್ಯಗಳ ಬಗ್ಗೆ ಸಲಹೆ ನೀಡಬೇಕು ಮತ್ತು ಕಾರ್ಮಿಕರ ಸಂಕಷ್ಟಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.

ತೈವಾನ್ ಮೂಲದ ಆಪಲ್ ಐಫೋನ್ ತಯಾರಿಕಾ ಕಂಪೆನಿಯಾದ ’ವಿಸ್ಟ್ರಾನ್’ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ AICCTU ಕಾರ್ಮಿಕ ಸಂಘಟನೆಯು ಸತ್ಯಶೋಧನೆ ನಡೆಸಿತ್ತು.

ಡಿಸೆಂಬರ್ 12 ರ ಘಟನೆ ಕಂಪನಿಯಲ್ಲಿ ಅನುಸರಿಸಲಾಗಿರುವ ಶೋಷಕ ನೀತಿಗಳ ಪರಿಣಾಮವಾಗಿದ್ದು, ಎಲ್ಲ ಕಾರ್ಮಿಕ ಕಾನೂನು ನಿಯಮಗಳನ್ನೂ ಉಲ್ಲಂಘಿಸಿ, ಬಡ ಕಾರ್ಮಿಕರ ಮೂಲ ವೇತನವನ್ನೂ ಪಾವತಿ ಮಾಡದೆ ಇರುವುದರಿಂದ ನೊಂದ ಶೋಷಿತ ಕಾರ್ಮಿಕರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಕಾರ್ಮಿಕರು ಅಸಹಾಯಕ ಪರಿಸ್ಥಿತಿಗೆ ದೂಡಲ್ಪಟ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವುದು, ಕಾರ್ಮಿಕರನ್ನು ಬಂಧಿಸುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡುತ್ತದೆ. ರಾಜ್ಯ ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕಿದೆ. ಹಾಗಾಗಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ದಾಖಲಾಗಿರುವ ಎಲ್ಲ ದೂರುಗಳನ್ನು ಹಿಂಪಡೆಯಬೇಕು” ಎಂದು AICCTU ಒತ್ತಾಯಿಸಿತ್ತು.


ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...