Homeಕರ್ನಾಟಕಮದ್ಯ & ತಂಬಾಕಿನೊಂದಿಗೆ 'ಮಾಂಸಾಹಾರ'ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ - ಆಕ್ರೋಶ

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

- Advertisement -
- Advertisement -

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯದ ಮುದ್ದೆ– ಸೊಪ್ಪಿನ ಸಾಂಬಾರ್‌ ಹಾಗೂ ಉತ್ತರ ಕರ್ನಾಟಕದ ಜೋಳದ ರೊಟ್ಟಿ– ಎಣ್ಣೆಗಾಯಿ ಪಲ್ಯದ ಊಟ ಉಣಬಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಮದ್ಯ & ತಂಬಾಕಿನೊಂದಿಗೆ

ಸಾಹಿತ್ಯ ಸಮ್ಮೇಳನದಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಕೆಲವು ಸೂಚನೆ ನೀಡಿದೆ. ಇದರಲ್ಲಿ ಸೂಚನೆಗಳ ಪಟ್ಟಿಯಲ್ಲಿ 4 ನೆ ಸೂಚನೆ ಮಾಂಸಹಾರವನ್ನು ಸಾಹಿತ್ಯ ಪರಿಷತ್ ನಿಷೇಧಿಸಿದ್ದಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಿದೆ. ಇದು ಕನ್ನಡನಾಡಿನ 80% ಮಾಂಸಾಹಾರಿಗಳ ನಿಷೇಧ ಮತ್ತು ಅವರನ್ನು ಕೆಟ್ಟದಾಗಿ ನೋಡುವ ಮನುವಾದಿ ರಾಜಕೀಯವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯ & ತಂಬಾಕಿನೊಂದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ ಮಾಂಸಾಹಾರಕ್ಕೆ ಹೆಸರುವಾಸಿಯಾದ ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮಾಂಸಾಹಾರವನ್ನು ಕೂಡಾ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ಸಚಿವ ಚಲುವರಾಯ ಸ್ವಾಮಿ ಅವರಿಗೆ ಸಂಘಟನೆಗಳು ಆಗ್ರಹ ವ್ಯಕ್ತಪಡಿಸಿದೆ.

ಮಂಡ್ಯದವರೇ ಆಗಿರುವ ಪ್ರಾಧ್ಯಾಪಕ ನಾಗೇಗೌಡ ಕೀಲಾರ ಅವರು, “ಎನ್‌ ಚಲುವರಾಯಸ್ವಾಮಿ ಅವರೇ, ನಿಮ್ಮ ಮನೆಗೆ ನೆಂಟರು ಬಂದರೆ ಬಾಡೂಟ ಹಾಕದೇ ಕಳಿಸಲ್ಲ ತಾನೇ. ನೀವು ಚುನಾವಣೆಯಲ್ಲಿ ಗೆದ್ದಗಾಲೆಲ್ಲ ನಿಮ್ಮ ಬೆಂಬಲಿಗರಿಗೆ ಬಾಡೂಟ ಹಾಕಿಸುತ್ತಿರಿ ತಾನೇ. ಹಂಗೇ ಸಾಹಿತ್ಯ ಸಮ್ಮೇಳನದಲ್ಲೂ ಬಾಡೂಟ ಹಾಕಿಸಬೇಕು. ಮಂಡ್ಯ ಅಂದರೆ ಬಾಡು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ನಜ್ಮಾ ನಜೀರ್ ಅವರು, “ಮಂಡ್ಯ ಅಂದ್ರೇನೆ ಮಾಂಸ ಕಲಾ. ನಾವ್ ಮಂಡ್ಯ ಮೈಸೂರೋರು ದೇವ್ರುಗು ಕುರಿ ಹೊಡಿಯೋರು” ಎಂದು ಹೇಳಿದ್ದಾರೆ.

ಸಂತೋಷ್ ಎಚ್‌.ಎಮ್‌. ಅವರು, ನಾವು ಮಂಡ್ಯದ ಜನ ಬಾಡೂಟಕ್ಕೆ ಹೆಚ್ಚು ಪ್ರಸಿದ್ಧ. ಅದು ಬೇಡ, ಇದು ಬೇಡ ಎಲ್ಲಾ ಯಾಕೆ…? ಎಲ್ಲವೂ ಇರಲಿ.. ತಿನ್ನೊದು ಅವರ್ ಅವರ್ ಇಷ್ಟಕ್ಕೆ ಬಿಟ್ಟದ್ದು” ಎಂದು ಹೇಳಿದ್ದಾರೆ.

ಪತ್ರಕರ್ತ ಸಂತೋಷ್ ಜಿ ಅವರು, “ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ – ಸಸ್ಯಾಹಾರ ಎರಡೂ ಇರಲಿ ಎಂಬುವುದು ಸಚಿವರಿಗೆ ಮನವಿ. 86 ವರ್ಷದಿಂದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರಿಗಳಿಗೆ ವಂಚಿಸಿಕೊಂಡೆ ಬರುತ್ತಿದೆ. ಈ ಬಾರಿ ಮಾಂಸಹಾರ ಜಾರಿ ಆಗಲಿ. ಮಾಂಸಹಾರಿಗಳ ಆಹಾರದ ಹಕ್ಕಿನ ಘನತೆಯನ್ನು ಎತ್ತಿಹಿಡಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...