Homeಮುಖಪುಟದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ದೆಹಲಿಯಲ್ಲಿ ಬಿಜೆಪಿ ಏಕೆ ಹತಾಶೆಗೆ ಒಳಗಾಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ “ಬಿಜೆಪಿ ಗೂಂಡಾಗಳಿಂದ ಹಲ್ಲೆಯಾಗಿದೆ” ಎಂದು ಅವರು ಗುರುವಾರ ಆಪ್ ಆರೋಪಿಸಿದೆ.

ಕೇಜ್ರಿವಾಲ್ ಸರ್ಕಾರದಿಂದ ಬಾಕಿ ಪಾವತಿಸುವಂತೆ ಒತ್ತಾಯಿಸಿ ಅನಿರ್ದಿಷ್ಟ ಧರಣಿ ನಡೆಸುತ್ತಿರುವ ಮೇಯರ್ ಮತ್ತು ಪಕ್ಷದ ಆಡಳಿತದ ಪುರಸಭೆಯ ಮುಖಂಡರನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಈ ಹಿಂದೆ ಸಿಸೋಡಿಯಾ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಪ್ ವಕ್ತಾರ ಸೌರಭ್ ಭಾರದ್ವಾಜ್ ಮತ್ತು ‌ಆಪ್ ನಾಯಕಿ ಅತಿಶಿ, ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ನಿವಾಸಕ್ಕೆ ಬಿಜೆಪಿ ಗೂಂಡಾಗಳು ಪ್ರವೇಶಿಸುವುದನ್ನು ಪೊಲೀಸರು ತಡೆಯಲಿಲ್ಲ ಮತ್ತು ಮನೆಯ ಸುತ್ತಲಿನ ಬ್ಯಾರಿಕೇಡ್‌ಗಳನ್ನು ಸಹ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದರು.

“ಬಿಜೆಪಿ ಗೂಂಡಾಗಳು ಉಪಮುಖ್ಯಮಂತ್ರಿಗಳು ಮನೆಯಲ್ಲಿ ಇಲ್ಲದ್ದಿದ್ದಾಗ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ರಾಜಕೀಯ ನಾಯಕರ ಮೇಲೆ ಹಲ್ಲೆಯಾಗುವುದನ್ನು ನೊಡಿದ್ದೇವೆ. ಆದರೆ, ಮನೆಗೆ ನುಗ್ಗಿ ಮನೆಯವರ ಮೇಲೆ ಹಲ್ಲೆ ಮಾಡುವ ಇಂತಹ ಕೃತ್ಯ ರಾಜಕೀಯ ಇತಿಹಾಸದಲ್ಲಿ ಎಂದು ನಡೆದಿರುವುದಿಲ್ಲ. ಇಂತಹ ಕೃತ್ಯದಲ್ಲಿ ದೆಹಲಿ ಪೊಲೀಸರು ಬಿಜೆಪಿ ಗೂಂಡಾಗಳಿಗೆ ಸಹಾಯ ಮಾಡಿದ್ದಾರೆ” ಎಂದು ಅತಿಶಿ ಹೇಳಿದ್ದಾರೆ.

ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ಘಟನೆ ಕುರಿತು ಟ್ವೀಟ್ ಮಾಡಿರುವ ಮನೀಶ್ ಸಿಸೋಡಿಯಾ, “ಇಂದು, ನನ್ನ ಅನುಪಸ್ಥಿತಿಯಲ್ಲಿ, ಬಿಜೆಪಿ ಗೂಂಡಾಗಳು ನನ್ನ ಮನೆಯ ಬಾಗಿಲುಗಳನ್ನು ಭೇದಿಸಿ ಒಳಗೆ ಪ್ರವೇಶಿಸಿ ನನ್ನ ಹೆಂಡತಿಯ ಮಕ್ಕಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ’ ಎಂದು ತಿಳಿಸಿದ್ದಾರೆ.

“ಅಮಿತ್‌ ಶಾ ಅವರೇ, ನೀವು  ದೆಹಲಿಯಲ್ಲಿ ರಾಜಕೀಯದಲ್ಲಿ ಸೋತಿದಕ್ಕಾಗಿ, ನೀವು ನಮ್ಮನ್ನು ಈ ರೀತಿ ನಿಭಾಯಿಸುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ದೆಹಲಿಯಲ್ಲಿ ಬಿಜೆಪಿ ಏಕೆ ಹತಾಶೆಗೆ ಒಳಗಾಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆಯ ಮೇಲೆ ನಡೆದ ವ್ಯವಸ್ಥಿತ, ಸಂಘಟಿತ ಮತ್ತು ಹಿಂಸಾತ್ಮಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ಮನೆಯಿಂದ ದೂರದಲ್ಲಿರುವಾಗ ಗೂಂಡಾಗಳು ಪೊಲೀಸರ ಉಪಸ್ಥಿತಿಯಲ್ಲಿ ಅವರ ಮನೆಗೆ ಪ್ರವೇಶಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಏಕೆ ಹತಾಶೆಗೆ ಒಳಗಾಗುತ್ತಿದೆ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

“ದೆಹಲಿಯ ರಾಜಕೀಯ ಇತಿಹಾಸದಲ್ಲಿ ಇದು ಕಪ್ಪು ದಿನವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ತಮ್ಮ ಪಕ್ಷದ ಗೂಂಡಾಗಳನ್ನು ಮತ್ತು ದೆಹಲಿ ಪೊಲೀಸರನ್ನು ಬಳಸಿಕೊಂಡು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಮೇಲೆ ಹಲ್ಲೆ ಮಾಡಿದ್ದಾರೆ” ಎಂದಿದ್ದಾರೆ.

ಆಪ್ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ಉಪಾಧ್ಯಕ್ಷ ಅಶೋಕ್ ಗೋಯೆಲ್ ದೇವರಾಹಾ  “ಎಎಪಿ ನಾಯಕರು ಬಿಜೆಪಿ ಮೇಯರ್‌ಗಳು ಮತ್ತು ಇತರ ನಿಗಮದ ಮುಖಂಡರನ್ನು ಕೊಲ್ಲುವ ಪಿತೂರಿಯಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...