Homeಮುಖಪುಟಬುಡಕಟ್ಟು ಮಹಿಳೆಯ ಮೃತದೇಹ ಬೈಕ್‌ನಲ್ಲಿ ಸಾಗಾಟ

ಬುಡಕಟ್ಟು ಮಹಿಳೆಯ ಮೃತದೇಹ ಬೈಕ್‌ನಲ್ಲಿ ಸಾಗಾಟ

- Advertisement -
- Advertisement -

ಆಂಧ್ರಪ್ರದೇಶದ ಬುಡಕಟ್ಟು ಸಮುದಾಯ ವಾಸವಿರುವ ಪ್ರದೇಶದಲ್ಲಿ ಸಾರಿಗೆ ಸೌಲಭ್ಯ ಮತ್ತು ರಸ್ತೆ ಸಂಪರ್ಕದ ಕೊರತೆಯಿಂದಾಗಿ ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವರು ತನ್ನ ಪತ್ನಿಯ ಮೃತದೇಹವನ್ನು ಆಸ್ಪತ್ರೆಯಿಂದ ದ್ವಿಚಕ್ರ ವಾಹನದಲ್ಲಿ ಸಾಗಿಸಿದ ಹೃದಯವಿದ್ರಾಹಕ ಘಟನೆ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಮಂಡಲ ಗಂಗುಲು ಅವರ ಪತ್ನಿ ಗಣಮ್ಮ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಚಿಟ್ಟೆಂಪಾಡು ಗ್ರಾಮಕ್ಕೆ ಶವವನ್ನು ಸಾಗಿಸಲು ಸರಿಯಾದ ಆಂಬ್ಯುಲೆನ್ಸ್‌ ವ್ಯವಸ್ಥೆ ಮತ್ತು ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಗಂಗುಲು ಎಂಬವರು ತನ್ನ ಪತ್ನಿ ಗಣಮ್ಮ ಅವರ ಶವವನ್ನು ಬೈಕ್‌ನಲ್ಲಿ ಸಾಗಿಸಿದ್ದಾರೆ.

ಕೆಲವು ದಿನಗಳ ಹಿಂದೆ ಗಂಗಮ್ಮ ಮತ್ತು ಅವರ ಮಗ ಅನಾರೋಗ್ಯಕ್ಕೆ ತುತ್ತಾಗಿದ್ದರು. ರಸ್ತೆ ಹದಗೆಟ್ಟ ಕಾರಣ ಗಂಗುಲು ಪತ್ನಿ-ಮಗನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದ ಕಾರಣ, ಅವರು ತಾತ್ಕಾಲಿಕ ಸ್ಟ್ರೆಚರ್‌ನಲ್ಲಿ ಅವರನ್ನು ಐದು ಕಿಲೋಮೀಟರ್‌ಗಳವರೆಗೆ ಸಾಗಿಸಿದ್ದರು. ವಿಶಾಖಪಟ್ಟಣಕ್ಕೆ ಸ್ಥಳಾಂತರಿಸುವಾಗ ಮಗು ಜನವರಿ 7ರಂದು ಸಾವನ್ನಪ್ಪಿತ್ತು. ಆತನ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಗಂಗಮ್ಮ ಅವರನ್ನು ಜನವರಿ 5ರಂದು ಶೃಂಗವರಪುಕೋಟಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ  ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಮನೆಗೆ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಇರಲಿಲ್ಲ ಮತ್ತು ರಸ್ತೆ ವ್ಯವಸ್ಥೆ ಇರಲಿಲ್ಲ. ದಿಕ್ಕುತೋಚದೆ ಗಂಗುಲು ತನ್ನ ಸ್ನೇಹಿತನ ಸಹಾಯದಿಂದ ಆಸ್ಪತ್ರೆಯಿಂದ ದ್ವಿಚಕ್ರ ವಾಹನದಲ್ಲಿ ಪತ್ನಿಯ ಮೃತದೇಹವನ್ನು ಸಾಗಿಸಿದ್ದಾನೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯದರ್ಶಿ ಎನ್ ಚಂದ್ರಬಾಬು ನಾಯ್ಡು ಅವರು ಈ ಬಗ್ಗೆ ಆಂಧ್ರಪ್ರದೇಶದ ಜಗನ್‌ ಮೋಹನ್‌ ಸರಕಾರವನ್ನು ಟೀಕಿಸಿದ್ದು, ವೈಎಸ್‌ಆರ್‌ಸಿಪಿ ಸರ್ಕಾರವು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ವಿಫಲವಾಗಿದೆ ಮತ್ತು ಚಿಟ್ಟೆಂಪಾಡುವಿಗೆ ತಕ್ಷಣ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ನಡೆಯದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...