Homeಕರ್ನಾಟಕಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

- Advertisement -
- Advertisement -

ಪ್ರತಿಭಟನೆಗಳನ್ನು  ಫ್ರೀಡಂ ಪಾರ್ಕ್‌ಗೆ (ಸ್ವಾತಂತ್ರ್ಯ ಉದ್ಯಾನವನ) ಸೀಮಿತಗೊಳಿಸಿರುವ ಆದೇಶವನ್ನು ಸೆಪ್ಟೆಂಬರ್ 15ರೊಳಗೆ (ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ) ಹಿಂಪಡೆಯಬೇಕೆಂದು ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಇಂದು (ಸೆ.12) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಆಸೋಸಿಯೇಶನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಸಂಸ್ಥೆಯ ವಕೀಲೆ ಮೈತ್ರೇಯಿ ಅವರು” ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ನಿರ್ಬಂಧಿಸಿರುವುದಷ್ಟೇ ಅಲ್ಲ, ಪೋಲೀಸರು ತಮ್ಮಅಧಿಕಾರ ದುರುಪಯೋಗಪಡಿಸಿಕೊಂಡು ಅನೇಕ ಬಾರಿ ಕರಪತ್ರ ಹಂಚುವ, ಮೊಂಬತ್ತಿ ಹಚ್ಚಿ ಕೂರುವ, ಸಾಮಾಜಿಕ ಸಮಸ್ಯೆಗಳ ಕುರಿತ ಸಾಕ್ಷ್ಯಚಿತ್ರಗಳ ಪ್ರದರ್ಶನ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಪೊಲೀಸ್ ಹಿಂಸಾಚಾರದ ಘಟನೆಗಳ ಬಗ್ಗೆ ಕೂಡಲೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿಗೆ ನೀಡುತ್ತಿರುವ ಬಹಿರಂಗ ಪತ್ರಕ್ಕೆ ಈಗಾಗಲೇ 565 ನಾಗರಿಕರು ಮತ್ತು ಕಾರ್ಯಕರ್ತರು ಸಹಿ ಹಾಕಿದ್ದಾರೆ ಎಂದು ತಿಳಿಸಿದರು.

ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಕೆ.ಎಸ್. ವಿಮಲಾ ಮಾತನಾಡಿ, “ಪ್ರಜಾಪ್ರಭುತ್ವ ಕೇವಲ ಮತ ಹಾಕುವುದಕ್ಕೆ ಸೀಮಿತವಾಗಿಲ್ಲ. ನಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುವುದು ಹಾಗೂ ಮೂಲಭೂತ ಕರ್ತವ್ಯಗಳನ್ನು ಪೂರೈಸುವುದು ಕೂಡ ಪ್ರಜಾಪ್ರಭುತ್ವದ ಭಾಗವೇ. ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಸೀಮಿತಿಗೊಳಿಸುವುದರಿಂದ ಪ್ರತಿಭಟನೆಯ ಉದ್ದೇಶವನ್ನೇ ಸೋಲಿಸದಂತಾಗುತ್ತದೆ” ಎಂದರು.

ಸ್ವಾತಂತ್ರ್ಯ ಉದ್ಯಾನವನ ಈ ಹಿಂದೆ ಜೈಲು ಆಗಿತ್ತು. ಇಂದು ನಮ್ಮ ಪ್ರತಿಭಟನೆಗಳನ್ನು ಅಲ್ಲಿ ಬಂಧಿಸಲಾಗಿದೆ. ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿರುವ ನಾನಾಗಲಿ ನನ್ನ ಸಂಘಟನೆಯಾಗಲಿ ಎಲ್ಲಿ ಪ್ರತಿಭಟಿಸಬೇಕೆಂದು ತೀರ್ಮಾನಿಸಲು ಆಗುತ್ತಿಲ್ಲ. ಅದನ್ನು ಪೊಲೀಸರೇ ತೀರ್ಮಾನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಡಾ. ಮೋಹನ್ ರಾಜ್ ಮಾತನಾಡಿ “ಈ ಹಿಂದೆ ಮುಖ್ಯಮಂತ್ರಿಗಳೇ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧವನ್ನು ತೆಗೆಯಲಾಗುವುದು ಎಂದು ಘೋಷಿಸಿದ್ದರು. ಸಾರ್ವಜನಿಕ ಸಭೆಯೊಂದರಲ್ಲಿ, ಈ ವಿಷಯವಾಗಿ ಅಡ್ವೊಕೇಟ್ ಜನರಲ್ ಜೊತೆ ಮಾತನಾಡುವುದಾಗಿ ಮರಳುಸಿದಪ್ಪ ಅವರಿಗೆ ತಿಳಿಸಿದ್ದರು. ಆ ಮಾತು ಹೇಳಿ ಒಂದು ವರ್ಷ ಕಳೆಯಿತು ಎಂದು ನೆನಪಿಸಿದರು.

ಹಿರಿಯ ಸಾಹಿತಿ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಮಾತನಾಡಿ “ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದೇ ಹೋರಾಟಗಳ ಮೂಲಕ. ಟ್ರಾಫಿಕ್ ಸಮಸ್ಯೆ ಆಗುತ್ತದೆ ಎನ್ನುವ ನೆಪದಲ್ಲಿ ಮೂಲಭೂತ ಹಕ್ಕಾದ ಹೋರಾಟದ ಹಕ್ಕನ್ನು ಹತ್ತಿಕ್ಕುವುದು ಸರಿಯಲ್ಲ. ಈ ಹಿಂದೆ ಟೌನ್ ಹಾಲ್, ಮೈಸೂರು ವೃತ್ತ, ಆನಂದ್ ರಾವ್ ವೃತ್ತ ಇಲ್ಲೆಲ್ಲ ಪ್ರತಿಭಟನೆ ಮಾಡಿದ್ದೇವೆ. ಆಗೆಲ್ಲ ಯಾವ ಟ್ರಾಫಿಕ್ ಸಮಸ್ಯೆಯೂ ಆಗಿಲ್ಲ” ಎಂದು ಹೇಳಿದರು.

“ಈಗ ನಮ್ಮನ್ನು ‘Unfreedom Park’ ಅಥವಾ ‘Freedom-Hidden-Away Park’ಗೆ ಬಂಧಿಸಿದ್ದಾರೆ” ಎಂದು ಸರ್ಕಾರದ ನಡೆ ಖಂಡಿಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಒಕ್ಕೂಟದ ಸಂಚಾಲಕ ಕೆ.ವಿ.ಭಟ್ ಮಾತನಾಡಿ, “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಬೆಂಗಳೂರಿನ ಜನರಿಗೆ ಅವರ ಸಾಂವಿಧಾನಿಕ ಹಕ್ಕುಗಳನ್ನು ಖಾತರಿಪಡಿಸುವ ಭರವಸೆಯನ್ನು ಸಿಎಂ ಈಡೇರಿಸಿಲ್ಲ. ಮೇ ದಿನದ ರ್‍ಯಾಲಿಗೂ ನಾವು ಉಚ್ಚ ನ್ಯಾಯಾಲಯದ ಅನುಮತಿ ಪಡೆಯುವಂತಾಗಿದೆ” ಎಂದರು.

ವಿದ್ಯಾರ್ಥಿ/ಯುವಕ ಸಂಘಟನೆಯಾದ ಕಲೆಕ್ಟಿವ್‌ನ ತ್ವಿಶಾ ಮೆಹ್ತಾ ಮಾತನಾಡಿ “ಇಂದು ಕೇವಲ ಪ್ರತಿಭಟನೆಗಳ ನಿರ್ಬಂಧ ಆಗುತ್ತಿಲ್ಲ. ನಾವು ಚಲನಚಿತ್ರ ಪ್ರದರ್ಶನ, ಕವನ ವಾಚನ, ರೈಡಿಂಗ್ ಸರ್ಕಲ್ ಅಥವಾ ಜನರನ್ನು ಒಟ್ಟುಗೂಡಿಸುವ ಯಾವುದೇ ಕೂಟವನ್ನು ಆಯೋಜಿಸಲು ಪ್ರಯತ್ನಿಸಿದಾಗ, ಈ ಅಸಂವಿಧಾನಿಕ ನಿರ್ಬಂಧವನ್ನು ಉಲ್ಲೇಖಿಸಿ ಪೊಲೀಸರು ದಮನ ಮಾಡುತ್ತಿದ್ದಾರೆ” ಎಂದು ದೂರಿದರು.

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲಮ್ಮ ಮಾತನಾಡಿ, ”ಲಿಂಗ ಮತ್ತು ಲೈಂಗಿಕ ಅಲ್ಪಸಂಖ್ಯಾತರಾದ ನಮ್ಮ ಹಕ್ಕುಗಳನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಪ್ರತಿ ವರ್ಷ ‘ಪ್ರೈಡ್ ಮಾರ್ಚ್’ ಎಂಬ ಮೆರವಣಿಗೆ ಆಯೋಜಿಸುತ್ತೇವೆ. 2022ರಲ್ಲಿ ಆ ಮೆರವಣಿಗೆ ನಡೆಸಲು ಬಿಟ್ಟಿಲ್ಲ. 2023ರಲ್ಲಿ ನಾವು ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ನಮ್ಮ ಮೆರವಣಿಗೆಗೆ ಅವಕಾಶ ಪಡೆಯಬೇಕಾಯಿತು. ಅದರ ನಂತರವೂ ನಮ್ಮ ಮೆರವಣಿಗೆ ಕೇವಲ ಅರ್ಧ ಕಿಲೋಮೀಟರ್‌ಗೆ ಸೀಮಿತವಾಗಿತ್ತು. ಈ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಪ್ರದರ್ಶನಗಳು ಕೇವಲ ಸ್ವಯಂ ಪ್ರೇರಿತವಲ್ಲ. ಅವು ನಮ್ಮ ಹಕ್ಕುಗಳಿಗಾಗಿ ಹೋರಾಟದ ಸುದೀರ್ಘ ಇತಿಹಾಸವನ್ನು ಹೊಂದಿವೆ” ಎಂದರು.

ಇದನ್ನೂ ಓದಿ : ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ; 46 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...