Homeಮುಖಪುಟಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆಯಿರಿ: ರಾಷ್ಟ್ರಪತಿಗೆ ಸಿಖ್ ಸಮಿತಿ ಒತ್ತಾಯ

ಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆಯಿರಿ: ರಾಷ್ಟ್ರಪತಿಗೆ ಸಿಖ್ ಸಮಿತಿ ಒತ್ತಾಯ

- Advertisement -
- Advertisement -

ನಟಿ ಕಂಗನಾ ರಣಾವತ್ ಅವರು ಕೋಮು ದ್ವೇಷವನ್ನು ಹರಡುತ್ತಿದ್ದಾರೆ. ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ರೈತರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿರುವ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದು, ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ದೇಶದ್ರೋಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಿಖ್ ಸಮಿತಿ ಶನಿವಾರ ಕಂಗನಾ ವಿರುದ್ಧ ಪೊಲೀಸ್ ದೂರು ದಾಖಲಿಸಿದೆ. ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, DSGMC ಮತ್ತು ಶಿರೋಮಣಿ ಅಕಾಲಿದಳದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು 1984 ರ ಸಿಖ್-ವಿರೋಧಿ ದಂಗೆಗಳನ್ನು ಉಲ್ಲೇಖಿಸಿ ಕಂಗನಾ “ಉದ್ದೇಶಪೂರ್ವಕವಾಗಿ ಸಿಖ್ಖರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಆಕೆ ಈ ಗೌರವಕ್ಕೆ ಅರ್ಹಳಲ್ಲ. ಸೌಹಾರ್ದತೆ ಮತ್ತು ಎಲ್ಲರಿಗೂ ಒಳ್ಳೆಯದನ್ನು ಬಯಸುವ ಭಾರತವನ್ನು ಆಕೆ ಪ್ರತಿನಿಧಿಸುವುದಿಲ್ಲ. ಸಾಮಾಜಿಕ ಭಾವನೆಗಳನ್ನು ಪರಿಗಣಿಸಿ ರೈತರು, ಸಿಖ್ಖರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಆಕೆಯಿಂದ ಪದ್ಮಶ್ರೀ ಗೌರವವನ್ನು ತಕ್ಷಣವೇ ಹಿಂಪಡೆಯಬೇಕು.” ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಾತ್ಮಾ ಗಾಂಧಿಗೆ ಅವಮಾನ: ಕಂಗನಾ ವಿರುದ್ಧ ಅಸ್ಸಾಂ ಕಾಂಗ್ರೆಸ್ ದೂರು

ಸೋಮವಾರ ನಟಿ ಕಂಗನಾ ವಿರುದ್ಧ ಮುಂಬೈನ ಖಾರ್‌ ಪೊಳಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ರೈತರು ಮತ್ತು ಸಿಖ್ಖರ ವಿರುದ್ಧ ಕೋಮು ದ್ವೇಷವನ್ನು ಪ್ರಚೋದಿಸುವ ಅವರ ಹೇಳಿಕೆಗಳಿಗಾಗಿ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ. ಆಕೆಯನ್ನು ತಕ್ಷಣ ಬಂಧಿಸಬೇಕು ಎಂದು ಪೊಲೀಸ್ ಕಮಿಷನರ್, ಮುಂಬೈ ಮತ್ತು ಮಹಾರಾಷ್ಟ್ರ ಗೃಹ ಸಚಿವರನ್ನು ಭೇಟಿ ಮಾಡಿ ಸಿಖ್ ಸಮಿತಿಯ ಸದಸ್ಯರು ಒತ್ತಾಯಿಸಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ ಕಂಗನಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಹೆಚ್ಚು ಟೀಕೆಗೊಳಗಾಗಿದ್ದಾರೆ.

Sikh Body Writes to President, Seeks Withdrawal of Kangana Ranaut's Padma Shri

ಇತ್ತ ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಚಳವಳಿಯ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ನಟಿ ಕಂಗನಾ ರಾಣಾವತ್‌‌ ವಿರುದ್ಧ ಅಸ್ಸಾಂನ ಕಾಂಗ್ರೆಸ್ ಗುರುವಾರ ಪೊಲೀಸ್ ದೂರು ದಾಖಲಿಸಿದೆ.

ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, 1947 ರಲ್ಲಿ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಂಗನಾ ಅವಮಾನಿಸಿದ್ದಾರೆ ಎಂದು ಆರೋಪಿಸಿ ದೇಶದ್ರೋಹಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರನ್ನು ಒತ್ತಾಯಿಸಲಾಗಿದೆ.

ಅವರು ‘1947 ರಲ್ಲಿ ಭಾರತಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಭಿಕ್ಷೆಯಾಗಿದೆ’ ಎಂಬ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಮತ್ತೇ ಪ್ರತಿಕ್ರಿಯೆ ನೀಡಿದ್ದ ಕಂಗನಾ, ‘ಸುಭಾಸ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಮಹಾತ್ಮ ಗಾಂಧಿಯವರಿಂದ ಯಾವುದೇ ಬೆಂಬಲವಿರಲಿಲ್ಲ’ ಎಂದು ಹೇಳಿದ್ದರು. ಜೊತೆಗೆ ಮಹಾತ್ಮಾ ಗಾಂಧಿಯ ‘ಅಹಿಂಸಾ’ ತತ್ವವನ್ನು ಅಪಹಾಸ್ಯ ಮಾಡಿದ್ದರು. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯನ್ನು ನೀಡುವುದರಿಂದ ಭಿಕ್ಷೆ ಸಿಗುತ್ತದೆಯೆ ಹೊರತು ಸ್ವಾತಂತ್ರ್ಯವಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...