Homeಚಳವಳಿಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

"ಪ್ರತಿಭಟನೆ ಮೂಲಭೂತ ಹಕ್ಕು, ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಈ ವಿಷಯವನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. “ಕಾಯ್ದೆಗಳನ್ನು ನೀವು ತಡೆಹಿಡಿಯುತ್ತೀರಾ ಅಥವಾ ಈ ಕೆಲಸವನ್ನು ನಾವು ಮಾಡಬೇಕೆ? ಇದರಲ್ಲಿ ಅಹಂ ಯಾಕೆ?” ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ.

ಕೃಷಿ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ, “ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಏನಾದರೂ ತೊಂದರೆಯಾದರೆ ಪ್ರತಿಯೊಬ್ಬರೂ ಜವಾಬ್ದಾರರಾಗುತ್ತೇವೆ” ಎಂದು ಎಸ್.ಎ.ಬೊಬಡೆ ತೀಕ್ಷ್ಣವಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ…

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಚಿಸುವ ಸಮಿತಿಯು ವರದಿ ಸಲ್ಲಿಸುವವರೆಗೆ ಈ ಕಾಯ್ದೆಗಳನ್ನು ತಡೆಹಿಡಿಯಿರಿ.

ಮುಖ್ಯ ನ್ಯಾಯಮೂರ್ತಿಗಳಾದ ಬೋಬಡೆ ಮತ್ತು ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು, “ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವೃದ್ಧರು ಮತ್ತು ಮಹಿಳೆಯರು ಆಂದೋಲನದ ಭಾಗವಾಗಿದ್ದಾರೆ. ಏನಾಗುತ್ತಿದೆ? ಕೃಷಿ ಕಾನೂನುಗಳು ಉತ್ತಮವೆಂದು ಹೇಳುವ ಒಂದೇ ಒಂದು ಮನವಿಯನ್ನು ಸಹ ಸಲ್ಲಿಸಲಾಗಿಲ್ಲ” ಎಂದು ಹೇಳಿದೆ.

“ಕಾಯ್ದೆಗಳ ಅನುಷ್ಟಾನವನ್ನು ತಡೆದ ನಂತರವೂ ನೀವು ಪ್ರತಿಭಟನೆಯನ್ನು ಮುಂದುವರೆಸಬಹುದು. ಆದರೆ ಇಲ್ಲಿಯೇ ಪ್ರತಿಭಟನೆ ಮಾಡುತ್ತೀರಾ ಅಥವಾ ಬೇರೆಡೆಗೆ ಹೋಗುತ್ತೀರಾ” ಎಂದು ರೈತರನ್ನು ಪ್ರಶ್ನಿಸಿದೆ.

ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲ ವೇಣುಗೋಪಾಲ್, “ನೀವು ಸಮಿತಿಯನ್ನು ರಚಿಸಬಹುದು. ಆದರೆ ಕಾಯ್ದೆಗಳನ್ನು ತಡೆಹಿಡಿಯಬೇಡಿ” ಎಂದು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ಸುಪ್ರೀಂ ಗೆ ಹೇಳಿದ್ದಾರೆ.

“ಎರಡು-ಮೂರು ರಾಜ್ಯಗಳ ರೈತರು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಲ್ಲಿ ದಕ್ಷಿಣ ಭಾರತದ ಅಥವಾ ಪಶ್ಚಿಮ ಭಾರತದ ಯಾವುದೇ ರೈತರು ಭಾಗಿಯಾಗಿಲ್ಲ” ಎಂದು ಒತ್ತಿ ಹೇಳಿದರು.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...