Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...