Homeಮುಖಪುಟಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಎಂದು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿಯೇ ಎಂದು ಮಾಜಿ ಸಿಎಂ ಎಚ್‌.ಡಿ ಲೇವಡಿ ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌‌ರವರು ಚಕ್ರವರ್ತಿ ಸೂಲಿಬೆಲೆ ನಂಬರ್‌ ಒನ್‌ ದೇಶಭಕ್ತ ಎಂದು ಟ್ವೀಟ್‌ ಮಾಡಿದ್ದಕ್ಕೆ ಪ್ರತಿಕ್ರಿಯಿಸಿರುವ ಅವರು, ದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ‌ ಮೇಲಿನ ನನ್ನ ಅಭಿಮಾನಕ್ಕೇ ಕುಂದುಂಟಾಗಿದೆ… ದೇಶಪ್ರೇಮದ ವಿಚಾರದಲ್ಲಿ Rank ಕೊಟ್ಟರೆ ‘ಆತ’ ಕೊನೇ Rank ಎಂದು ಹೇಳಿದ್ದಾರೆ.

ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ‌ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಆತ’ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ‌.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ ಎಂದಿದ್ದಾರೆ.

ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ‌. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ ಎಂದಿದ್ದಾರೆ.

ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ‌ ಎಂದಿದ್ದಾರೆ.

ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು…. ಎಂದು ಟೀಕಿಸಿದ್ದಾರೆ.

ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸೂಪರ್ ಕಾಮೆಂಟ್. “ಪಾಕಿಸ್ತಾನ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಸಾಧ್ಯವಿರಲಿಲ್ಲ” ಎಂಬುದು ಅಕ್ಷರಶಃ ಸತ್ಯ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...