Homeಮುಖಪುಟಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

- Advertisement -
- Advertisement -

“ಹೆಚ್ಚು ಮಹಿಳಾ ಸಿಬ್ಬಂದಿಗಳು ಇರುವ ಶಾಲೆಗಳಲ್ಲಿ ಜಗಳಗಳು ಹೆಚ್ಚಾಗಿರುತ್ತವೆ” ಎಂದು ರಾಜಸ್ತಾನ ಶಿಕ್ಷಣ ಸಚಿವ ಗೋವಿಂದ ಸಿಂಗ್‌ ದೋಸ್ತಾರ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 11ರಂದು ಹೀಗೆ ಮಾತನಾಡಿದ್ದಾರೆ.

“ಶಿಕ್ಷಣ ವಿಭಾಗದ ಮುಖ್ಯಸ್ಥನಾಗಿ ಗಮನಿಸಿದ್ದೇನೆಂದರೆ ಹೆಚ್ಚಿನ ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳು ವಿವಿಧ ಕಾರಣಗಳಿಗಾಗಿ ಹೆಚ್ಚು ಜಗಳಗಳನ್ನು ಆಡುತ್ತವೆ” ಎಂದಿರುವ ಅವರು, “ಈ ಜಗಳಗಳು ಸಾಮಾನ್ಯವಾಗಿ ತಡವಾಗಿ ಬರುವುದು ಅಥವಾ ಬೇಗ ಹಿಂತಿರುಗುವ ರೀತಿಯ ವಿಷಯಗಳ ಕುರಿತು ಆಗುತ್ತವೆ” ಎಂದು ತಿಳಿಸಿದ್ದಾರೆ.

“ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿಕೊಂಡರೆ ನೀವು ಯಾವಾಗಲೂ ಪುರುಷರಿಗಿಂತ ಮುಂದೆ ಇರುತ್ತೀರಿ” ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಲೈವ್‌ ಆಗಿರುವ ಈ ವಿಡಿಯೋವನ್ನು ‘ಇಂಡಿಯಾ ಟುಡೇ’ ಅಪ್‌ಲೋಡ್‌ ಮಾಡಿದ್ದು, ಸಚಿವರು ಹೀಗೆ ಮಾತನಾಡುವಾಗ ಇತರರು ತಲೆ ಆಡಿಸುತ್ತಾರೆ ಅಥವಾ ನಗುತ್ತಾರೆ.

ಇದನ್ನೂ ಓದಿರಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಈ ವರ್ಷದ ಆರಂಭದಲ್ಲಿ, ರಾಜಸ್ತಾನ ಆಡಳಿತ ಸೇವೆಗಳಿಗೆ (ಆರ್‌ಎಎಸ್) ತನ್ನ ಸೊಸೆಯ ಸಹೋದರಿ ಮತ್ತು ಸಹೋದರನ ಆಯ್ಕೆಯಲ್ಲಿ ದೋತ್ಸರ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರು ಆರೋಪವನ್ನು ನಿರಾಕರಿಸಿದ್ದರು ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಹೇಳಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (ವೈದ್ಯ ವೃತ್ತಿ ಹಿನ್ನೆಲೆಯವರು) ಹೀಗೆಯೇ ಮಾತನಾಡಿದ್ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಸಚಿವ ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದಿದ್ದರು.

“ಇಂದು ಇದನ್ನು ಹೇಳಲು ನನಗೆ ಬೇಸರವಾಗುತ್ತಿದೆ. ಭಾರತದ ಬಹಳಷ್ಟು ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಅವರು ಮದುವೆಯಾಗಿದ್ದರೂ ಜನ್ಮ ನೀಡಲು ಬಯಸುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಿದ್ದಾರೆ. ನಮ್ಮ ಆಲೋಚನೆಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಇದು ಒಳ್ಳೆಯದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಇಂದೋರ್‌ ಕಾಲೇಜಿನಲ್ಲಿ ಲವ್‌ ಜಿಹಾದ್‌ ನಡೆದಿದೆ: ಬಜರಂಗ ದಳ ಆರೋಪ

ಭಾರತೀಯ ಸಮಾಜದ ಮೇಲೆ “ಪಾಶ್ಚಿಮಾತ್ಯ ಪ್ರಭಾವ” ಹೆಚ್ಚಾಗಿದೆ ಎಂದಿದ್ದ ಸುಧಾಕರ್‌, ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದರು.

“ದುರದೃಷ್ಟವಶಾತ್, ಇಂದು ನಾವು ಪಾಶ್ಚಿಮಾತ್ಯ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಅಜ್ಜ-ಅಜ್ಜಿಯರು ನಮ್ಮೊಂದಿಗೆ ಇರುವುದನ್ನು ಬಿಡಿ, ಹೆತ್ತವರೇ ನಮ್ಮೊಂದಿಗೆ ಇರುವುದನ್ನು ನಾವು ಬಯಸುತ್ತಿಲ್ಲ” ಎಂದಿದ್ದರು.

ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸುಧಾಕರ್‌, “ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಒಂದು ರೀತಿಯ ಮಾನಸಿಕ ಸಮಸ್ಯೆ ಹೊಂದಿದ್ದಾರೆ. ಅದು ಸೌಮ್ಯ, ಮಧ್ಯಮ ಮತ್ತು ತೀವ್ರವಾಗಿರಬಹುದು. ಒತ್ತಡ ನಿರ್ವಹಣೆ ಒಂದು ಕಲೆಯಾಗಿದ್ದು, ಈ ಕಲೆಯನ್ನು ಭಾರತೀಯರಾದ ನಾವು ಕಲಿಯಬೇಕಾಗಿಲ್ಲ. ನಾವು ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಜಗತ್ತಿಗೆ ಬೋಧಿಸಬೇಕಾಗಿದೆ. ಯಾಕೆಂದರೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ಜಗತ್ತಿಗೆ ಕಲಿಸಿದ ಅದ್ಭುತ ಸಾಧನಗಳಾಗಿವೆ” ಎಂದು ಹೇಳಿದ್ದರು.

ಸುಧಾಕರ್‌ ಅವರು ಮಹಿಳೆಯರ ವಿರುದ್ದ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತೆ ಸಂಜ್ಯೋತಿ ಅವರು, “ಮಾನ್ಯ ಆರೋಗ್ಯ ಸಚಿವರೇ ನಿಮಗೆ ಉತ್ತಮವಾದ ಗಂಭೀರ ಚಿಕಿತ್ಸೆಯ ಅಗತ್ಯವಿದೆ. ಅದೃಷ್ಟವಶಾತ್ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಮಾನಸಿಕ ಆರೋಗ್ಯ ವ್ಯವಸ್ಥೆಯಾಗಿರುವ ಬೆಂಗಳೂರಿನ ನಿಮ್ಹಾನ್ಸ್ ಇದೆ” ಎಂದು ಕಿಡಿ ಕಾರಿದ್ದಾರೆ.

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿದ್ದ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...