Homeಮುಖಪುಟಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಲ್ಕತ್ತಾ ಕ್ಯಾಂಪಸ್‌ನಲ್ಲಿ, ಎರಡನೇ ವರ್ಷದ ವಿದ್ಯಾರ್ಥಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ.

ಆರೋಪಿ ಕರ್ನಾಟಕ ಮೂಲದ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಶನಿವಾರ ಅಲಿಪೋರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬೇರೊಂದು ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆಯನ್ನು ಕೌನ್ಸೆಲಿಂಗ್ ಅವಧಿಗೆ ಕ್ಯಾಂಪಸ್‌ಗೆ ಆಹ್ವಾನಿಸಿದ್ದ ಆರೋಪಿ ತನ್ನ ಹಾಸ್ಟೆಲ್ ಕೊಠಡಿಗೆ ಕರೆದೊಯ್ದು ಮಾದಕ ವಸ್ತು ಕೊಟ್ಟು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಆನ್‌ಲೈನ್‌ ಮೂಲಕ ಪರಿಚಯಸ್ಥರಾಗಿದ್ದರು. ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಬಗ್ಗೆ ಅಲ್ಲಿ ಚರ್ಚಿಸುತ್ತಿದ್ದರು. ಶುಕ್ರವಾರ ಕೌನ್ಸೆಲಿಂಗ್‌ಗೆ ಎಂದು ಸಂತ್ರಸ್ತೆ ಐಐಎಂಗೆ ಬಂದಿದ್ದರು. ಈ ವೇಳೆ ಗೇಟ್ ಬಳಿ ಸಂದರ್ಶಕರ ನೋಂದಣಿಗೆ ಸಹಿ ಹಾಕದಂತೆ ಆರೋಪಿ ತಡೆದಿದ್ದ. ನಂತರ ಕೌನ್ಸೆಲಿಂಗ್ ಸ್ಥಳದ ಬದಲು ಕೆಲಸ ಇದೆ ಎಂದು ಆತನ ಹಾಸ್ಟೆಲ್‌ಗೆ ಕರೆದೊಯ್ದಿದ್ದ ಎಂದು ವರದಿಯಾಗಿದೆ.

“ಹಾಸ್ಟೆಲ್‌ನಲ್ಲಿ ಆತ ತನಗೆ ಪಿಝ್ಝಾ ಮತ್ತು ನೀರು ಕೊಟ್ಟಿದ್ದ. ಅದರಲ್ಲಿ ಮಾದಕ ವಸ್ತು ಬೆರೆಸಲಾಗಿತ್ತು. ನಾನು ಅದನ್ನು ತಿಂದು ಪ್ರಜ್ಞೆ ತಪ್ಪಿ ಬಿದ್ದಾಗ ಆತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪಿಝ್ಝಾ ತಿಂದ ಬಳಿಕ ಸ್ವಲ್ಪ ಹೊತ್ತು ನಾನು ಅರೆಪ್ರಜ್ಞಾವಸ್ಥೆಯಲ್ಲಿದ್ದೆ. ನಂತರ ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಬಂದಾಗ ನಾನು ಹಾಸ್ಟೆಲ್ ಕೊಠಡಿಯಲ್ಲಿ ಒಬ್ಬಳೇ ಇದ್ದೆ. ತಕ್ಷಣ ನಾನು ಅಲ್ಲಿಂದ ಹೊರ ಬಂದು ಸ್ನೇಹಿತೆಗೆ ಕರೆ ಮಾಡಿದೆ. ನಂತರ ನಾವಿಬ್ಬರು ಒಟ್ಟಿಗೆ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದೆವು” ಎಂದು ಸಂತ್ರಸ್ಥೆ ದೂರಿನಲ್ಲಿ ಹೇಳಿಕೊಂಡಿದ್ದಾಗಿ ವರದಿಗಳು ತಿಳಿಸಿವೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಅತ್ಯಾಚಾರ ಮತ್ತು ಇತರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದಲ್ಲಿ ಇತರ ನಾಲ್ವರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಘಟನೆ ನಡೆದ ಹಾಸ್ಟೆಲ್ ಕೊಠಡಿಯನ್ನು ಸೀಲ್ ಮಾಡಲಾಗಿದೆ ಮತ್ತು ಘಟನಾ ಸ್ಥಳದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...