Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...