Homeಮುಖಪುಟಉತ್ತರಪ್ರದೇಶ: ನಡುರಸ್ತೆಯಲ್ಲಿ ಮಹಿಳೆಗೆ ಥಳಿಸಿದ ಪೊಲೀಸ್ ಅಧಿಕಾರಿ

ಉತ್ತರಪ್ರದೇಶ: ನಡುರಸ್ತೆಯಲ್ಲಿ ಮಹಿಳೆಗೆ ಥಳಿಸಿದ ಪೊಲೀಸ್ ಅಧಿಕಾರಿ

- Advertisement -
- Advertisement -

ಉತ್ತರಪ್ರದೇಶದ ಮಥುರಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಅಧಿಕಾರಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಪಾಣಿಗಾಂವ್ ಸಂಪರ್ಕ ರಸ್ತೆಯಿಂದ ಕೈಲ್ಸಾ ನಗರಕ್ಕೆ ತೆರಳುವ ತಿರುವಿನಲ್ಲಿ ನಿಂತಿದ್ದ ಪೊಲೀಸ್ ಅಧಿಕಾರಿ ಮಹಿಳೆ ಮಾರುಕಟ್ಟೆಯಿಂದ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಆಟೋವನ್ನು ನಿಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂದು ಆರೋಪಿಸಿ ಮೊದಲು ಮಹಿಳೆ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.

ಮಹಿಳೆ ಚಪ್ಪಲಿಯಿಂದ ಹೊಡೆದ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಮಹಿಳೆಯನ್ನು ಒದ್ದು ತಳ್ಳಿದ್ದಾರೆ. ಈ ವೇಳೆ  ಸ್ಥಳದಲ್ಲಿದ್ದ ಇತರ ಪೊಲೀಸ್ ಸಿಬ್ಬಂದಿ ಆತನನ್ನು ತಡೆದು ಮಹಿಳೆಗೆ ಹೊಡೆಯದಂತೆ ತಡೆದಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಘಟನೆ ನಡೆದಿದೆ.

ಇದೀಗ ಘಟನೆಗೆ ಸಂಬಂಧಿಸಿ ಸಂತ್ರಸ್ತೆ ಮಹಿಳೆ ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ತನಿಖೆ ಬಳಿಕ ತಪ್ಪು ಕಂಡು ಬಂದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಬಿಹಾರದ ಜಾತಿ ಗಣತಿ ಸ್ವಾಗತಾರ್ಹ, ಇದು ‘ಸರಿಯಾದ ಪರಿಹಾರ’ ಎಂದು ಕೇಂದ್ರಕ್ಕೆ ಮಾಯಾವತಿ ಸಲಹೆ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...