Homeಮುಖಪುಟಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

- Advertisement -
- Advertisement -

ಕೊರೊನಾ ಸೋಂಕು ಯಾವುದೇ ವ್ಯಕ್ತಿ, ವಯಸ್ಸು, ಸಮಯ ಎಂದು ನೋಡುವುದಿಲ್ಲ. ಎಲ್ಲರಲ್ಲೂ ಹರಡುತ್ತಾ ಹೋಗುತ್ತದೆ. ಹೀಗೆ ಕೊರೊನಾ ಸೋಂಕಿಗೆ ಒಳಗಾದ ವರನನ್ನು, ಪಿಪಿಎ ಕಿಟ್ ಧರಿಸಿದ್ದ ವಧು, ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಅಲಪ್ಪುಳ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಲಪ್ಪುಳ ಜಿಲ್ಲೆಯ ಕೈನಕರಿ ನಿವಾಸಿ ಶರತ್ ಮೂನ್ (28) ಮತ್ತು ತೆಕ್ಕಾನಾರ್ಯ ನಿವಾಸಿ ಅಭಿರಾಮಿ (20) ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿದ್ದಾರೆ.

ವರ ಶರತ್ ಮೂನ್ ಮತ್ತು ಅವರ ತಾಯಿಗೆ ಕೊರೊನಾ ಸೋಂಕು ತಗುಲಿದ್ದು, ಏಪ್ರಿಲ್ 21 ರಿಂದ ಆಸ್ಪತ್ರೆಯಲ್ಲಿದ್ದಾರೆ. ಮದುವೆಗೆ ಮತ್ತೆ ಯಾವುದೇ ಶುಭ ದಿನಾಂಕಗಳಿಲ್ಲ ಎಂದು ಎರಡು ಕುಟುಂಬಗಳು ಸೇರಿ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿಕೊಂಡು, ಜಿಲ್ಲಾಧಿಕಾರಿ ಮತ್ತು ಆಸ್ಪತ್ರೆ ಅಧಿಕಾರಿಗಳ ಒಪ್ಪಿಗೆ ಪಡೆದು, ಆಸ್ಪತ್ರೆಯಲ್ಲಿ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

 

ವಧು ಅಭಿರಾಮಿ ಪಿಪಿಇ ಕಿಟ್ ಧರಿಸಿ, ಸಂಬಂಧಿಕರೊಡನೆ ‘ಮುಹೂರ್ತಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿದ್ದಾರೆ. ತುಳಸಿ ಎಲೆಗಳಿಂದ ಮಾಡಿದ ಹೂಮಾಲೆಗಳನ್ನು ಧರಿಸಿದ್, ವಧುವಿನ ತಾಯಿ ಮತ್ತು ಕೆಲವು ಆಸ್ಪತ್ರೆಯ ಸಿಬ್ಬಂದಿ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವ ವರನತಂದೆ ಎನ್. ಶಶಿಧರನ್, ತನ್ನ ಮಗನ ಮದುವೆಗೆ ಹಾಜರಾಗದಿರುವುದರ ಬಗ್ಗೆ ಬೇಸರವಾಗಿದ್ದರೂ, ನಿಗದಿ ಪಡಿಸಿದ್ದ ಮುಹೂರ್ತದಲ್ಲಿ ಮದುವೆ ನಡೆದಿರುವುದಕ್ಕೆ ಸಂತೋಷವಾಯಿತು ಎಂದು ಹೇಳಿದ್ದಾರೆ.

ಕೋವಿಡ್ ಪ್ರೋಟೋಕಾಲ್ ಅನುಸರಿಸಿ ವಿವಾಹವನ್ನು ನಡೆಸಲಾಗಿದೆ ಎಂದು ಎಂಸಿಎಚ್ ಅಧಿಕಾರಿಗಳು ತಿಳಿಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿರುವ ಶರತ್ ಮೂನ್ ಮತ್ತು ಅವರ ತಾಯಿ ಜಿಜಿಮೋಲ್ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ಒಂದು ವರ್ಷದ ಹಿಂದೆ ಮದುವೆ ನಡೆಸಲು ನಿಶ್ಚಯಿಸಲಾಗಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಈಗ ಮತ್ತೆ ಮುಂದೂಡಿದರೆ ಒಳ್ಳೆಯ ಮುಹೂರ್ತ ದೊರೆಯುವುದಿಲ್ಲ ಎಂದು ಅಧಿಕಾರಿಗಳ ಅನುಮತಿ ಪಡೆದು ಮದುವೆ ನಡೆಸಲಾಗಿದೆ.


ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...