Homeಮುಖಪುಟಮೊದಲ ಬಾರಿಗೆ ಶ್ರೀನಗರ ವಲಯಕ್ಕೆ ಸಿಆರ್‌ಪಿಎಫ್ ಐಜಿಯಾಗಿ ಮಹಿಳಾ ಐಪಿಎಸ್ ನೇಮಕ!

ಮೊದಲ ಬಾರಿಗೆ ಶ್ರೀನಗರ ವಲಯಕ್ಕೆ ಸಿಆರ್‌ಪಿಎಫ್ ಐಜಿಯಾಗಿ ಮಹಿಳಾ ಐಪಿಎಸ್ ನೇಮಕ!

2005 ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ಈ ವಲಯವು ಐಜಿ ಮಟ್ಟದಲ್ಲಿ ಮಹಿಳಾ ಅಧಿಕಾರಿಯನ್ನು ಹೊಂದಿರಲಿಲ್ಲ. ಈ ವಲಯವು ಹೆಚ್ಚಿನ ಭಯೋತ್ಪಾದನಾ-ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಕುಖ್ಯಾತಿ ಪಡೆದಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಪೀಡಿತ ಪ್ರದೇಶವಾದ ಶ್ರೀನಗರ ವಲಯದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ(ಸಿಆರ್‌ಪಿಎಫ್) ಇನ್ಸ್‌ಪೆಕ್ಟರ್ ಜನರಲ್ (ಐಜಿ) ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ಮೊದಲ ಬಾರಿಗೆ ನೇಮಕ ಮಾಡಲಾಗಿದೆ.

1996 ರ ಬ್ಯಾಚ್ ತೆಲಂಗಾಣದ ಐಪಿಎಸ್ ಕೇಡರ್‌ನ ಅಧಿಕಾರಿ ಚಾರು ಸಿನ್ಹಾ, ಇನ್ನುಮುಂದೆ ಶ್ರೀನಗರ ವಲಯದ ಸಿಆರ್‌ಪಿಎಫ್‌ಗೆ ಇನ್ಸ್‌ಪೆಕ್ಟರ್ ಜನರಲ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆಕೆಗೆ ಇಂತಹ ಕಠಿಣ ಕಾರ್ಯವನ್ನು ವಹಿಸಿರುವುದು ಇದೇ ಮೊದಲಲ್ಲ. ಈ ಹಿಂದೆ ಅವರು ಸಿಆರ್‌ಪಿಎಫ್‌ನಲ್ಲಿ ಬಿಹಾರ ವಲಯದ ಐಜಿಯಾಗಿ, ನಕ್ಸಲೈಟರ ಪ್ರದೇಶದಲ್ಲಿ ಕೆಲಸಮಾಡಿದ್ದಾರೆ.

ಇದನ್ನೂ ಓದಿ: ಮನೋಜ್ ಸಿನ್ಹಾ ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ

ಅವರ ನಾಯಕತ್ವದಲ್ಲಿ ವಿವಿಧ ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಯಿತು. ನಂತರ, ಅವರನ್ನು ಸಿಆರ್‌ಪಿಎಫ್ ನ ಮುಖ್ಯಸ್ಥರಾಗಿ ಐಜಿ ಜಮ್ಮುವಿಗೆ ವರ್ಗಾಯಿಸಲಾಯಿತು. ಅಲ್ಲಿ ಅವರು ದೀರ್ಘ ಮತ್ತು ಯಶಸ್ವಿಯಾಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದರು. ಸೋಮವಾರ ಶ್ರೀನಗರ ವಲಯಕ್ಕೆ ಮಹಿಳಾ ಐಪಿಎಸ್ ಅಧಿಕಾರಿ ಚಾರು ಸಿನ್ಹಾ, ಇನ್ಸ್‌ಪೆಕ್ಟರ್ ಜನರಲ್ (ಐಜಿ) ಆಗಿ ನೇಮಕ ಮಾಡಿರುವ ಹೊಸ ಆದೇಶ ಬಂದಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಹಾಲಿ ಮಹಾನಿರ್ದೇಶಕ ಸಿಆರ್‌ಪಿಎಫ್ ಆನಂದ್ ಪ್ರಕಾಶ್ ಮಹೇಶ್ವರಿ 2005 ರಲ್ಲಿ ಶ್ರೀನಗರ ವಲಯದ ಐಜಿಯಾಗಿ ಮುಖ್ಯಸ್ಥರಾಗಿದ್ದರು.

2005 ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ಈ ವಲಯವು ಐಜಿ ಮಟ್ಟದಲ್ಲಿ ಮಹಿಳಾ ಅಧಿಕಾರಿಯನ್ನು ಹೊಂದಿರಲಿಲ್ಲ. ಈ ವಲಯವು ಹೆಚ್ಚಿನ ಭಯೋತ್ಪಾದನಾ-ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಕುಖ್ಯಾತಿ ಪಡೆದಿದೆ.

ಚಾರು ಸಿನ್ಹಾ ಈ ವಲಯದ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಕಾರ್ಯಾಚರಣೆಗಳ ಮುಖ್ಯಸ್ಥರಾಗಿರುತ್ತಾರೆ.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕ ದಿನಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...