Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ...

ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನ ಭೀತಿಯಿಂದ ನಿರಾಳರಾಗಿದ್ದ ಶಾಸಕ ಹೆ.ಚ್‌ಡಿ ರೇವಣ್ಣ ಅವರಿಗೆ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಆತಂಕ ಎದುರಾಗಿದೆ. ಈ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರೇವಣ್ಣ ವಿರುದ್ದ ಮೈಸೂರಿನ ಕೆಆರ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಈ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜಾಮೀನು ನಿರಾಕರಣೆ, ವಿಚಾರಣೆ ಮುಂದೂಡಿಕೆ :

ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ತಕ್ಷಣ ಪರಿಗಣಿಸಲು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ ಎಂದು ತಿಳಿದು ಬಂದಿದೆ.

ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಗಜಾನನ ಭಟ್ ಅವರು ಇಂದು (ಮೇ 3) ಸಂಜೆ ರೇವಣ್ಣ ಅರ್ಜಿ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯಕ್ ಅವರು ಎಫ್‌ಐಅರ್‌ನಲ್ಲಿ ಮಹಿಳೆಯ ಹೆಸರಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಪ್ರಕರಣ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ್ದಾಗಿರುವುದರಿಂದ ನಾಳೆ (ಮೇ 4) ಬೆಳಿಗ್ಗೆ ಮುಖ್ಯ ಪ್ರಕರಣದ ಮೇಲಿನ ಸಂಪೂರ್ಣ ವಾದ ಆಲಿಸಿ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಅಲ್ಲದೆ, ಪ್ರತಿವಾದಿಯಾದ ಎಸ್‌ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ನೋಟಿಸ್ ಜಾರಿಗೊಳಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...