Homeಮುಖಪುಟಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬಿಹಾರದಲ್ಲೊಂದು ಅಮಾನವೀಯ ಘಟನೆ, ಅನ್ಯಾಯ

- Advertisement -
- Advertisement -

ನಾಲ್ಕು ತಿಂಗಳಲ್ಲಿ ಮದುವೆಯಾಬೇಕಿದ್ದ 20 ವರ್ಷದ ಯುವತಿಯನ್ನು ದುಷ್ಕರ್ಮಿಗಳು ಕಿರುಕುಳ ನೀಡಿ ಸುಟ್ಟು ಹಾಕಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ದೆಸಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವತಿಯು ತನ್ನ ಮೇಲೆ ದೌರ್ಜನ್ಯ ಎಸಗಿದವರು ಸತೀಶ್ ರಾಯ್ ಹಾಗೂ ಚಂದನ್ ಕುಮಾರ್‌ ರಾಯ್ ಎಂದು ಹೇಳಿರುವ ವಿಡಿಯೋ ವೈರಲಾಗಿದ್ದರೂ, ಆರೋಪಿಗಳ ಬಂಧನ ಇದುವರೆಗೂ ನಡೆದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

“ಅವಳಿಗೆ ನಾಲ್ಕು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಸತೀಶ್ ಕುಮಾರ್ ರಾಯ್ ಮತ್ತು ಚಂದನ್ ಕುಮಾರ್ ರಾಯ್ ನನ್ನ ಮಗಳನ್ನು ಸುಟ್ಟುಹಾಕಿದರು. ಅವಳು ಕೊನೆಯುಸಿರೆಳೆಯುವ ಮುನ್ನ ವೀಡಿಯೊದಲ್ಲಿ ದುಷ್ಕರ್ಮಿಳ ಹೆಸರು ಹೇಳಿದ್ದಾಳೆ. ಆದರೆ ನಮ್ಮ ಪರವಾಗಿ ಧ್ವನಿ ಎತ್ತುವವರು ಯಾರೂ ಇಲ್ಲ” ಎಂದು ದುಷ್ಕರ್ಮಿಗಳಿಂದ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಗುಲ್ನಾಜ್ ಖತೂನ್ ಅವರ ತಾಯಿ ಹೇಳುತ್ತಾರೆ.

“ಅವರು ಮೂರು ತಿಂಗಳಿನಿಂದ ಅವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಮತ್ತು ಹಿಂಬಾಲಿಸುತ್ತಿದ್ದರು” ಎಂದು ಅವರು ಹೇಳಿದರೆ, ಸಂತ್ರಸ್ತೆಯ ತಂಗಿ ಗುಲ್ಶನ್ ಪರ್ವೇಜ್ ಆರೋಪಿಗಳ ಹೆಸರುಗಳನ್ನು ಹೇಳುತ್ತಾರೆ.

“ನನ್ನ ತಂಗಿ ಹೋಗಿ ಕಸವನ್ನು ಎಸೆಯುತ್ತಿದ್ದಾಗ ಆರೋಪಿಗಳು ಅವಳಿಗೆ ಕಿರುಕುಳ ನೀಡುತ್ತಿದ್ದರು. ಅಕ್ಟೋಬರ್ 30 ರಂದು ಸಂಜೆ 5 ಗಂಟೆಗೆ ಚಂದನ್ ಕುಮಾರ್ ಮತ್ತು ಸತೀಶ್ ಕುಮಾರ್ ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು” ಎಂದು ಪಾಟ್ನಾದಲ್ಲಿ ಕೆಲಸ ಮಾಡುತ್ತಿರುವ ಯುವತಿಯ ಸಹೋದರ ಹೇಳುತ್ತಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಟೈಲರ್‌ ಆಗಿದ್ದ ತನ್ನ ತಾಯಿಗೆ ಸಂತ್ರಸ್ಥೆ ಗುಲ್ನಾಜ್ ಸಹಾಯ ಮಾಡುತ್ತಿದ್ದರು. ಅವರ ಮೇಲೆ ದೌರ್ಜನ್ಯ ನಡೆಸಿ ಕೊಲೆ ಮಾಡಿದ ಆರೋಪಿಗಳ ಹೆಸರನ್ನು ಸಂತ್ರಸ್ತೆ ಯುವತಿ ವಿಡಿಯೋದಲ್ಲಿ ಹೇಳಿದ್ದು, ಅಲ್ಲದೆ ಅವರ ಕುಟುಂಬ ಕೂಡಾ ಸ್ಪಷ್ಟವಾಗಿ ಆರೋಪಿಗಳನ್ನು ಹೆಸರಿಸಿದರೂ ಆರೋಪಿಗಳ ಬಂಧನ ಇನ್ನೂ ಆಗಿಲ್ಲ ಎಂದು ಸಬ್‌ರಂಗ್‌ ವರದಿ ಮಾಡಿದೆ.

ಅಷ್ಟೇ ಅಲ್ಲದೆ ಜಸ್ಟಿಸ್ ಫಾರ್ ಗುಲ್ನಾಝ್ (#JusticeForGulnaz) ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದ್ದು, ಗುಲ್ನಾಜ್ ಅವರ ತಾಯಿ ತಮ್ಮ ಕುಟುಂಬದೊಂದಿಗೆ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ವೈರಲ್ ಆಗಿದೆ. ಇಷ್ಟಾಗಿಯೂ ಬಿಹಾರದ ಮರು ಚುನಾಯಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಥವಾ ಬಿಹಾರ ಪೊಲೀಸರಿಂದ ಇನ್ನೂ ಯಾವುದೇ ಹೇಳಿಕೆಗಳು ಹೊರ ಬಂದಿಲ್ಲ.

ಎಬಿಪಿ ನ್ಯೂಸ್ ವರದಿಯ ಪ್ರಕಾರ “ಸತೀಶ್ ಯಾದವ್ ಹಳ್ಳಿಯ ಕುಖ್ಯಾತ ಗೂಂಡಾ ಆಗಿದ್ದು, ಯುವತಿಗೆ ಕಿರುಕುಳ ನಿಡುತ್ತಿದ್ದ. ಯುವತಿಯು ಈ ಬಗ್ಗೆ ದೂರಿದಾಗ ನೀಡಿದಾಗ ಸತೀಶ್ ಮತ್ತು ಅವನ ಇಬ್ಬರು ಸಹಚರರು ಗುಲ್ನಾಜ್ ಅವರನ್ನು ಅವರ ಮನೆಯ ಬಳಿ ಜೀವಂತವಾಗಿ ಸುಟ್ಟುಹಾಕಿದರು” ಎಂದು ಹೇಳಿದೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮೀಸಲಾತಿ ಮಸಲತ್ತು! ನೈಜ ಹಿಂದುಳಿದವರಿಗೆ ಸಾಮಾಜಿಕ ಅನ್ಯಾಯ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...