ಗ್ರಾಮದ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ.
ತನ್ನ ಪತ್ನಿಗೆ ಗ್ರಾಮದ ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಇದೆ ಎಂದು ಮಹಿಳೆಯ ಪತಿ ಆರೋಪಿಸಿದ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಮಹಿಳೆಯ ಪತಿ ದೀಪಕ್ ರಾಮ್ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಮಕ್ಕಳಿರುವ ದಂಪತಿಯನ್ನು ಠಾಣೆಗೆ ಕರೆಸಲಾಗಿತ್ತು.
ಇದನ್ನೂ ಓದಿ: ಈ ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡದೆ ಓದಿ
ಪೊಲೀಸ್ ಠಾಣೆಯಲ್ಲಿ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ ದಂಪತಿಗೆ ಬುದ್ದಿವಾದ ನೀಡಿ ಕಳುಹಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಆದರೆ ದಂಪತಿಗಳು ಅವರ ಗ್ರಾಮ ಸಿಂಗ್‌ಪುರ ತಲುಪಿದ ನಂತರ, ಪತಿ ದೀಪಕ್ ರಾಮ್, ಅವರ ತಂದೆ ಶಿವಪೂಜನ್ ರಾಮ್ ಮತ್ತು ಇತರ ಮೂವರು ಕುಟುಂಬ ಸದಸ್ಯರು ಮಹಿಳೆಯನ್ನು ತಮ್ಮ ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ.
ಇದರ ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದೆ ಎಂದು ರೋಹ್ತಾಸ್ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಭಾರತಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಿಟಿ ರವಿಗೆ ಹುಚ್ಚು ಹಿಡಿದಿದ್ದು, ಅವರು ಈ ನಾಡಿಗಂಟಿದ ರೋಗ: ದಿನೇಶ್ ಗುಂಡೂರಾವ್ ಆಕ್ರೋಶ
“ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಮತ್ತು ಮಾವ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ” ಎಂದು ಭಾರತಿ ಹೇಳಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


