Homeಮುಖಪುಟಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

- Advertisement -
- Advertisement -

ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಅವಮಾನಿಸಿದ್ದಲ್ಲದೆ, ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಪ್ರತಿನಿಧಿಸುವ ಕುಪ್ಪಂ ಕ್ಷೇತ್ರದಲ್ಲಿ ನಡೆದಿದೆ.

ಸಾಲ ಮರುಪಾವತಿ ವಿಚಾರಕ್ಕೆ  ದುಷ್ಕೃತ್ಯ ಎಸಗಲಾಗಿದೆ. ಆರೋಪಿಯನ್ನು ಮುನಿಕಣ್ಣಪ್ಪ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಮಹಿಳೆಯ ಹೆಸರು ಸಿರಿಷಾ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಅವರು ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂಪಾಯಿ ಸಾಲ ಪಡೆದಿದ್ದರು. ಸಾಲ ಮರುಪಾವತಿಸಲು ವಿಫಲವಾದ ನಂತರ, ತಿಮ್ಮರಾಯಪ್ಪ ಅವರು ಸಿರಿಷಾ ಮತ್ತು ಮಕ್ಕಳನ್ನು ತ್ಯಜಿಸಿ, ಮರುಪಾವತಿಯ ಹೊರೆಯನ್ನು ಅವರ ಮೇಲೆ ಹೊರಿಸಿ ಹೋಗಿದ್ದರು.

ತನ್ನ ಮಕ್ಕಳನ್ನು ಸಾಕಲು ಮತ್ತು ಸಾಲ ಮರುಪಾವತಿಸಲು ಸಿರಿಷಾ ಅವರು ದಿನಗೂಲಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದರೂ, ಪಾವತಿ ವಿಳಂಬ ಮಾಡಿದ್ದಕ್ಕಾಗಿ ಮುನಿಕಣ್ಣಪ್ಪ ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಅವಮಾನಿಸಿದ್ದಾನೆ. ಅಲ್ಲದೆ, ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸೋಮವಾರ ಮಧ್ಯಾಹ್ನ ಸಿರಿಷಾ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮುನಿಕಣ್ಣಪ್ಪ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಬಲವಂತವಾಗಿ ಎಳೆದೊಯ್ದು ಬೇವಿನ ಮರಕ್ಕೆ  ಕಟ್ಟಿಹಾಕಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಘಟನೆಯನ್ನು ತಮ್ಮ ಫೋನ್‌ಗಳಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸಿದ ಗ್ರಾಮಸ್ಥರ ಮೇಲೂ ಮುನಿಕಣ್ಣಪ್ಪ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸ್ಥಳೀಯ ನಿವಾಸಿಗಳು ತಕ್ಷಣ ಕುಪ್ಪಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಿಎನ್‌ಎಸ್‌ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾದ ಬೆನ್ನಲ್ಲೇ ಮುನಿಕಣ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತನ್ನ ಕ್ಷೇತ್ರದಲ್ಲಿ ನಡೆದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.

ಇಂತಹ ಅನಾಗರಿಕ ಕೃತ್ಯಗಳು ಎಂದಿಗೂ ಪುನರಾವರ್ತನೆಯಾಗದಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಸಂತ್ರಸ್ತೆಯ ಕುಟುಂಬಕ್ಕೆ ಸಂಪೂರ್ಣ ಬೆಂಬಲ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

“ಇದು ಗಂಭೀರ ಅನ್ಯಾಯ. ಅಪರಾಧಿಗಳು ಕಠಿಣ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆಯರ ಮೇಲಿನ ಇಂತಹ ಕ್ರೌರ್ಯವನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

ಘಟನೆ ಕುರಿತು ಗೃಹ ಸಚಿವೆ ವಂಗಲಪುಡಿ ಅನಿತಾ ಮತ್ತು ಟಿಡಿಪಿ ಎಂಎಲ್‌ಸಿ ಕಂಚರ್ಲ ಶ್ರೀಕಾಂತ್  ಪ್ರತಿಕ್ರಿಯಿಸಿದ್ದಾರೆ.

ಗೃಹ ಸಚಿವರು ಸಂತ್ರಸ್ತೆ ಜೊತೆ ವಿಡಿಯೋ ಕರೆಯ ಮೂಲಕ ಮಾತನಾಡಿದ್ದು, ಆಕೆಗೆ ಧೈರ್ಯ ಹೇಳಿದ್ದಾರೆ. ಅಮಾನವೀಯ ಕೃತ್ಯವನ್ನು ಅವರು ಬಲವಾಗಿ ಖಂಡಿಸಿದ್ದಾರೆ. ಸರ್ಕಾರದಿಂದ ಆಕೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...