Homeಮುಖಪುಟಲವ್ ಯು ಜಿಂದಗಿ ಎಂದಿದ್ದ 30 ವರ್ಷದ ಯುವತಿ ಕೊರೊನಾಗೆ ಬಲಿ

ಲವ್ ಯು ಜಿಂದಗಿ ಎಂದಿದ್ದ 30 ವರ್ಷದ ಯುವತಿ ಕೊರೊನಾಗೆ ಬಲಿ

- Advertisement -
- Advertisement -

ದೆಹಲಿಯ ಕೊರೊನಾ ತುರ್ತು ವಾರ್ಡ್‌ನೊಳಗೆ ಆಮ್ಲಜನಕದ ಮಾಸ್ಕ್ ಧರಿಸಿ ಬಾಲಿವುಡ್‌ನ ಡಿಯರ್‌ ಜಿಂದಗಿ ಚಿತ್ರದ ಲವ್ ಯು ಜಿಂದಗಿ ಹಾಡಿಗೆ ತಲೆಯಾಡಿಸಿ, ಜೀವನಪ್ರೀತಿ ತೋರಿಸಿದ್ದ 30 ವರ್ಷದ ಯುವತಿಯನ್ನು ಕೊರೊನಾ ಬಲಿ ಪಡೆದಿದೆ.

ಆಕ್ಸಿಜನ್ ಮಾಸ್ಕ್ ಧರಿಸಿ, ಬೆಡ್ ಮೇಲೆ ಕುಳಿತು ಹಾಡು ಗುನುಗುತ್ತಾ ತಲೆಯಾಡಿಸಿ, ಕ್ಯಾಮೆರಾಗೆ ಕೈ ಬೀಸಿ ಹಾಯ್‌ ಎಂದಿದ್ದ ಈ ಯುವತಿಯ ವಿಡಿಯೋ ಬಾರಿ ವೈರಲ್ ಆಗಿತ್ತು. ಜಾಲತಾಣಿಗರು ಕೂಡ ಈಕೆ ಬೇಗ ಗುಣವಾಗಲಿ ಎಂದು ಟ್ವೀಟ್ ಮಾಡಿ ಹಾರೈಸಿದ್ದರು. ಆದರೆ ಜನರ ಹಾರೈಕೆ ಫಲಿಸಿಲ್ಲ. ನಿನ್ನೆ ಯುವತಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

“ನನ್ನನ್ನು ಕ್ಷಮಿಸಿ. ನಾವು ಧೈರ್ಯಶಾಲಿ ಹುಡುಗಿಯನ್ನು ಕಳೆದುಕೊಂಡಿದ್ದೇವೆ” ಎಂದು ಡಾ.ಮೋನಿಕಾ ಲಂಗೆಹ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಸಿಟಿ ರವಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಮತ್ತೆ ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಸಚಿವ!

ಯುವತಿಗೆ ಆರಂಭದಲ್ಲಿ ಆಸ್ಪತ್ರೆಯಲ್ಲಿ ಹಾಸಿಗೆ ಸಿಗಲಿಲ್ಲ. ನಂತರ ಆಕೆಯನ್ನು ಐಸಿಯು ವಾರ್ಡ್‌ಗೆ ಸ್ಥಳಾಂತರಿಸಲಾಯಿತು, ಆದರೆ ಯುವತಿಯ ಸ್ಥಿತಿ ಸ್ಥಿರವಾಗಿರಲಿಲ್ಲ. ಕೆಲವೊಮ್ಮೆ ನಾನು ತುಂಬಾ ಅಸಹಾಯಕಿಯಾಗಿರುತ್ತೇನೆ. ಜೊತೆಗೆ ಈ ಧೈರ್ಯವಂತ ಯುವತಿಗಾಗಿ ಪ್ರಾರ್ಥಿಸಿ, ಆಕೆಗಾಗಿ ಪುಟ್ಟ ಮಗು ಮನೆಯಲ್ಲಿ ಕಾಯುತ್ತಿದೆ ಎಂದು ವೈದ್ಯರು ಹೇಳಿದ್ದರು.

10 ದಿನಗಳಿಂದ ಕೊರೊನಾ ತುರ್ತು ವಾರ್ಡ್‌‌ನಲ್ಲಿದ್ದ ಆಕೆಗೆ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ಐಸಿಯು ಹಾಸಿಗೆ ಸಿಕ್ಕಿತ್ತು. ಆದರೆ, ಆಕೆ ಸ್ಥಿತಿ ಮಾತ್ರ ಸ್ಥಿರವಾಗಿರಲಿಲ್ಲ. ಯುವತಿಯ ಸಾವಿಗೆ ಜಾಲತಾಣಿಗರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೊರೊನಾ ಭೀಕರ ಎರಡನೇ ಅಲೆಯಲ್ಲಿ ಹಲವಾರು ಯುವಜನರು ಸೋಂಕಿಗೆ ಒಳಗಾಗಿದ್ದಾರೆ. ದೇಶದಲ್ಲಿ ಕೆಲವು ವಾರಗಳಿಂದ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ವರದಿಯಾಗುತ್ತಿವೆ.


ಇದನ್ನೂ ಓದಿ: ಕೊರೊನಾ ಒಂದು ಜೀವಿ, ಅದಕ್ಕೂ ನಮ್ಮಂತೆ ಬದುಕುವ ಹಕ್ಕಿದೆ ಎಂದ ಬಿಜೆಪಿ ಮುಖಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...