Homeಅಂತರಾಷ್ಟ್ರೀಯ2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

2024ರ ಆರ್ಟೆಮಿಸ್ IIIರಲ್ಲಿ ಮೊದಲ ಬಾರಿಗೆ ಮಹಿಳೆ ಮತ್ತು ಒಬ್ಬ ಪುರುಷ ಗಗನಯಾತ್ರಿನನ್ನು ಚಂದ್ರನ ಮೇಲೆ ಇಳಿಸುವ ಗುರಿ ಹೊಂದಲಾಗಿದೆ.

- Advertisement -
- Advertisement -

2024 ರಲ್ಲಿ ಮೊದಲ ಬಾರಿಗೆ ಮಹಿಳೆಯನ್ನು ಚಂದ್ರನಿಗೆ ಕಳುಹಿಸಲು ಯೋಜಿಸಿದೆ ಎಂದು ನಾಸಾ ಈ ವಾರ ಬಹಿರಂಗಪಡಿಸಿದೆ. ಬಾಹ್ಯಾಕಾಶ ಸಂಸ್ಥೆಯ ಆರ್ಟಿಮಿಸ್ ಪ್ಲಾನ್‌ನಲ್ಲಿ ಒಬ್ಬ ಮಹಿಳೆ ಮತ್ತು ಪುರುಷನನ್ನು ಚಂದ್ರಯಾನಕ್ಕೆ ಕಳುಹಿಸುವ ಗುರಿಯನ್ನು ನಾಸಾ ಹೊಂದಿದೆ. ಇದು 1972ರ ನಂತರದ ಮೊದಲ ಚಂದ್ರಯಾನದ ಯೋಜನೆಯಾಗಿದೆ.

2,50,000 ಮೈಲುಗಳ ದೂರದಲ್ಲಿರುವ ಚಂದ್ರನಲ್ಲಿಗೆ, ಮತ್ತು 140 ಮಿಲಿಯನ್ ಮೈಲುಗಳಷ್ಟು ದೂರವಿರುವ ಮಂಗಳ ಗ್ರಹಕ್ಕೆ ಮಾನವ ಪರಿಶೋಧಕರನ್ನು ಕಳುಹಿಸಲಾಗುತ್ತದೆ. ಇದಕ್ಕೆ ದಿಟ್ಟ ದೃಷ್ಠಿ, ಪರಿಣಾಮಕಾರಿ ಪ್ರೋಗ್ರಾಂ ನಿರ್ವಹಣೆ, ಆಧುನಿಕ ತಂತ್ರಜ್ಞಾನಗಳ ಮಿಷನ್‌ ಕಾರ್ಯಾಚರಣೆಗಳಿಗೆ ಧನಸಹಾಯ, ಮತ್ತು ರಾಷ್ಟ್ರದ ಎಲ್ಲಾ ಮೂಲೆಗಳಿಂದ ನಮಗೆ ಜನ ಬೆಂಬಲ ಬೇಕು ಎಂದು ನಾಸಾ ಹೇಳಿದೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ಆರ್ಟೆಮಿಸ್ ಯೋಜನೆಯು ಎಲ್ಲಾ ಒತ್ತಡಗಳನ್ನು‌ ತೆಗೆದುಕೊಂಡು 2024 ರ ಆರಂಭದ ವೇಳೆಗೆ ಚಂದ್ರನ ಮೇಲೆ ಮಾನವನ ಇಳಿಯುವಿಕೆಯ ಗುರಿ ಸಾಧಿಸುವತ್ತ ಗಮನ ಹರಿಸುತ್ತಿದ್ದು,  2020ರ ಅಂತ್ಯದವರೆಗೂ ನವೀನ ತಂತ್ರಜ್ಞಾನಗಳನ್ನು ಬಳಸಿಕೊಂಡು ಹಿಂದೆಂದಿಗಿಂತಲೂ ಹೆಚ್ಚಿಗೆ ಚಂದ್ರನ ಮೇಲ್ಮೈಯನ್ನು ಅನ್ವೇಷಿಸುತ್ತದೆ ಎಂದು ನಾಸಾ ಹೇಳಿದೆ.

ನಾಸಾದ ಮೊದಲ ಆಧುನಿಕ ಚಂದ್ರನ ಮಿಷನ್ 2021 ರಲ್ಲಿ ಆರ್ಟೆಮಿಸ್ 1ರಲ್ಲಿ ಗಗನಯಾತ್ರಿಗಳು ರಹಿತವಾಗಿ ನಡೆಯಲಿದೆ. 2023ರಲ್ಲಿ ನಡೆಯುವ ಆರ್ಟೆಮಿಸ್ II ರಲ್ಲಿ ಸಿಬ್ಬಂದಿಗಳು ಚಂದ್ರನಲ್ಲಿ ಹೋಗುವ ಗುರಿ ಹೊಂದಿದ್ದಾರೆ. ಕೊನೆಯ ಯೋಜನೆ 2024ರ ಆರ್ಟೆಮಿಸ್ IIIರಲ್ಲಿ ಮೊದಲ ಮಹಿಳೆ ಮತ್ತು ಪುರುಷನನ್ನು ಚಂದ್ರನ ಮೇಲೆ ಇಳಿಸುವ ಗುರಿ ಹೊಂದಲಾಗಿದೆ.

ಈ ವಾರದಲ್ಲಿ ನೌಕಾಪಡೆಯು ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿತ್ತು. ವಾಯುಸೇನೆ ಕೂಡ ಶೀಘ್ರದಲ್ಲೇ ರಫೇಲ್ ಯುದ್ಧವಿಮಾನಕ್ಕೆ ಮಹಿಳಾ ಫೈಟರ್ ಪೈಲಟ್ ಅನ್ನು ನೇಮಿಸಲು ತರಬೇತಿ ನೀಡುತ್ತಿರುವುದನ್ನು ತಿಳಿಸಿತ್ತು. ಈಗ ನಾಸಾ ಕೂಡ ಮಹಿಳಾ ಗಗನಯಾತ್ರಿಯನ್ನು ಚಂದ್ರಯಾನಕ್ಕೆ ಕಳುಹಿಸುವುದಾಗಿ ಘೋಷಣೆ ಮಾಡಿದೆ.


ಇದನ್ನೂ ಓದಿ: ಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...